Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:6 - ಕನ್ನಡ ಸತ್ಯವೇದವು J.V. (BSI)

6 ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು ಬಾಸುಂಡೆ ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವನ್ನು ಹಿಸಕಿ ಮುಚ್ಚಿಲ್ಲ, ಕಟ್ಟಿಲ್ಲ, ಎಣ್ಣೆಸವರಿ ಮೃದು ಮಾಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು, ಬಾಸುಂಡೆ, ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಂಗಾಲಿನಿಂದ ನಡುನೆತ್ತಿಯವರೆಗೆ ಪೆಟ್ಟು ಬಾಸುಂಡೆ, ಮಾಗದ ಗಾಯಗಳೇ ಹೊರತು ಮತ್ತೇನೂ ಅಲ್ಲ. ಅವನ್ನು ತೊಳೆದು ಕಟ್ಟಿಲ್ಲ. ಎಣ್ಣೆ ಸವರಿ ಮೃದುವಾಗಿಸಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿಮ್ಮ ಅಂಗಾಲಿನಿಂದ ಹಿಡಿದು ನಡುನೆತ್ತಿಯವರೆಗೂ ನಿಮ್ಮ ದೇಹದಲ್ಲೆಲ್ಲಾ ಗಾಯಗಳೂ ಬಾಸುಂಡೆಗಳೂ ಹುಣ್ಣುಗಳೂ ತುಂಬಿಕೊಂಡಿವೆ. ಆದರೆ ಆ ಹುಣ್ಣುಗಳಿಗೆ ನೀವು ಸರಿಯಾಗಿ ಚಿಕಿತ್ಸೆ ಕೊಡಲಿಲ್ಲ; ಅವುಗಳನ್ನು ಒರೆಸಲಿಲ್ಲ, ಕಟ್ಟಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಂಗಾಲಿನಿಂದ ನಡುನೆತ್ತಿಯವರೆಗೂ ಬಾಸುಂಡೆ, ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:6
20 ತಿಳಿವುಗಳ ಹೋಲಿಕೆ  

ಮೇಲಾಗದಿದ್ದರೂ ಮೇಲು ಮೇಲು ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.


ಆತನು ಅದನ್ನು ಕೇಳಿ - ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು.


ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ ಅದಕ್ಕೆ ಸೌಖ್ಯವನ್ನು ಕೊಟ್ಟು ನಿವಾಸಿಗಳನ್ನು ಗುಣಪಡಿಸುವೆನು; ಸ್ಥೈರ್ಯಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು;


ಕನಿಕರಿಸಿ ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಲ್ಲಿ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಕಟ್ಟಿ ತನ್ನ ಸ್ವಂತ ವಾಹನದ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರಕೊಂಡು ಹೋಗಿ ಅವನನ್ನು ಆರೈಕೆಮಾಡಿದನು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;


ಇಕ್ಕಟ್ಟಿನಲ್ಲಿ ಸ್ವಾವಿುಯನ್ನು ಕರೆದೆನು; ಬೇಸರವಿಲ್ಲದೆ ಇರುಳೆಲ್ಲಾ ಕೈಯೊಡ್ಡಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಹೊಂದಲೊಲ್ಲದೆ ಇತ್ತು.


ಗಾಯಮಾಡುವವನೂ ಗಾಯಕಟ್ಟುವವನೂ ಆತನೇ; ಹೊಡೆಯುವ ಕೈಯೇ ವಾಸಿಮಾಡುತ್ತದೆ.


ನಿನ್ನ ಗಾಯವು ಗುಣಹೊಂದದು, ನಿನ್ನ ಪೆಟ್ಟು ಗಡಸು; ನಿನ್ನ ಸುದ್ದಿಯನ್ನು ಕೇಳಿದವರೆಲ್ಲರೂ ನಿನಗೆ ಚಪ್ಪಾಳೆಹಾಕುತ್ತಾರೆ; ನಿನ್ನ ಕೆಡುಕಿಗೆ ನಿತ್ಯವೂ ಗುರಿಯಾಗದವರು ಎಲ್ಲಿದ್ದಾರೆ?


ಯೆಹೋವನು ಇಂತೆನ್ನುತ್ತಾನೆ - ನಿನ್ನ ಗಾಯವು ಗುಣಹೊಂದದು, ನಿನ್ನ ಬಾಸುಂಡೆಯು ಘೋರವಾಗಿದೆ.


ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಾಯೇಲ್ಯರಲ್ಲಿ ಒಬ್ಬನೂ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯವರೆಗೆ ಒಂದು ದೋಷವಾದರೂ ಇರಲಿಲ್ಲ.


ಇದಲ್ಲದೆ ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನ ಗಾಯವನ್ನು ಗುಣಮಾಡುವ ದಿವಸದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವದು, ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಿ ಏಳು ದಿನಗಳ ಬೆಳಕಿನಂತಾಗುವದು.


ಹೃದಯವು ಎಲ್ಲಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ಯಾರು ತಿಳಿದಾರು?


ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ; ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಬರುತ್ತದೆ; ರೋಗಗಳೂ ವ್ರಣಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.


ಅಯ್ಯೋ, ನೋವು ನಿಲ್ಲದು ಎಂದು ನಿನ್ನ ವ್ರಣಕ್ಕಾಗಿ ಏಕೆ ಅರಚಿಕೊಳ್ಳುತ್ತೀ? ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದದರಿಂದ ನಿನಗೆ ಇದನ್ನೆಲ್ಲಾ ಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು