ಯೆಶಾಯ 1:7 - ಕನ್ನಡ ಸತ್ಯವೇದವು J.V. (BSI)7 ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಸುಟ್ಟು ಹೋಗಿವೆ; ನಿಮ್ಮ ಭೂವಿುಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ; ಅನ್ಯದೇಶಗಳು ನಾಶನವಾದಂತೆಯೇ ನಿಮ್ಮ ಭೂವಿುಯೂ ಹಾಳಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಿಮ್ಮ ನಾಡು ಹಾಳುಬಿದ್ದಿದೆ: ನಿಮ್ಮ ಪಟ್ಟಣಗಳು ಸುಟ್ಟು ಭಸ್ಮವಾಗಿವೆ. ನಿಮ್ಮ ಕಣ್ಮುಂದೆಯೆ ನಿಮ್ಮ ಭೂಮಿಯನ್ನು ಅನ್ಯಜನರು ಕಬಳಿಸುತ್ತಿದ್ದಾರೆ. ಅನ್ಯದೇಶಗಳು ನಾಶವಾದಂತೆಯೇ ನಿಮ್ಮ ನಾಡು ಹಾಳಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಿಮ್ಮ ದೇಶವು ಹಾಳಾಗಿದೆ; ನಿಮ್ಮ ನಗರಗಳು ಬೆಂಕಿಯಿಂದ ಸುಡಲ್ಪಟ್ಟಿವೆ. ನಿಮ್ಮ ಶತ್ರುಗಳು ನಿಮ್ಮ ದೇಶವನ್ನು ವಶಪಡಿಸಿಕೊಂಡಿದ್ದಾರೆ; ಅನ್ಯದೇಶವು ಶತ್ರುಸೈನ್ಯದಿಂದ ಹಾಳಾಗುವಂತೆಯೇ, ನಿಮ್ಮ ದೇಶವೂ ಹಾಳಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ. ನಿಮ್ಮ ಹೊಲಗಳನ್ನು ಪರರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಇತರ ಜನರಿಂದ ಕೆಡವಿಬಿದ್ದು ಹಾಳಾಗಿದೆ. ಅಧ್ಯಾಯವನ್ನು ನೋಡಿ |