Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:9 - ಕನ್ನಡ ಸತ್ಯವೇದವು J.V. (BSI)

9 ಸೇನಾಧೀಶ್ವರನಾದ ಯೆಹೋವನು ನಮಗೆ ಕೊಂಚ ಜನವನ್ನೂ ಉಳಿಸದೆ ಹೋಗಿದ್ದರೆ ಸೊದೋವಿುನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ಸರ್ವಶಕ್ತನಾದ ಯೆಹೋವನು ಸ್ವಲ್ಪ ಮಂದಿಯನ್ನಾದರೂ ಉಳಿಸಿ ಅಲ್ಲಿ ವಾಸಿಸುವಂತೆ ಮಾಡಿದ್ದಾನೆ. ನಾವು ಸೊದೋಮ್ ಗೊಮೋರ ಪಟ್ಟಣಗಳಂತೆ ಸಂಪೂರ್ಣವಾಗಿ ನಾಶವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸೇನಾಧೀಶ್ವರ ಯೆಹೋವ ದೇವರು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:9
37 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಕರ್ತನು ನಮಗೆ ಸಂತಾನವನ್ನು ಉಳಿಸದೆ ಹೋಗಿದ್ದರೆ ಸೊದೋವಿುನ ಗತಿಯೇ ನಮಗಾಗುತ್ತಿತ್ತು, ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು ಎಂದು ಹೇಳುತ್ತಾನೆ.


ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ


ನಾವು ಉಳಿದಿರುವದು ಯೆಹೋವನ ಕರುಣೆಯೇ; ಆತನ ಕೃಪಾವರಗಳು ನಿಂತುಹೋಗವು.


ಸೊದೋಮ್‍ಗೊಮೋರಗಳನ್ನು ಕೆಡವಿದಂತೆ ನಾನು ನಿಮ್ಮ ಅನೇಕ ಪಟ್ಟಣಗಳನ್ನು ಕೆಡವಲು ಉರಿಯಿಂದ ಎಳೆದ ಕೊಳ್ಳಿಯ ಹಾಗಿದ್ದಿರಿ; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.


ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.


ಎಣ್ಣೆಯ ಮರವನ್ನು ಬಡಿದ ಮೇಲೆಯೂ ದ್ರಾಕ್ಷೆಯ ಸುಗ್ಗಿಯು ತೀರಿದನಂತರವೂ ನಿಲ್ಲುವ ಉಳಿಗಾಯ ಹಾಗೆ ಭೂಮಂಡಲದಲ್ಲಿ ಜನಾಂಗಗಳೊಳಗೆ ಶೇಷವಿರುವದು.


ಆದರೂ ಎಣ್ಣೆಯ ಮರವನ್ನು ಬಡಿದ ಬಳಿಕ ಮೇಲಿನ ಕೊಂಬೆಯ ಕೊಟ್ಟಕೊನೆಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ರೆಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು, ನಿಂತಿರುವಂತೆ ಹಕ್ಕಲು ಅದರಲ್ಲಿ ಉಳಿದಿರುವದು ಎಂದು ಇಸ್ರಾಯೇಲ್ಯರ ದೇವರಾದ ಯೆಹೋವನು ನುಡಿಯುತ್ತಾನೆ.


ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ ಅದೂ ಕೂಡಾ ನಾಶವಾಗುವದು; ಏಲಾ ಅಲ್ಲೋನ್ ಮರಗಳನ್ನೂ ಕಡಿದ ಮೇಲೆ ಅವುಗಳ ಬುಡವು ನಿಲ್ಲುವ ಹಾಗೆ ದೇವಕುಲವು ಮೋಟುಬುಡವಾಗಿ ನಿಲ್ಲುವದು ಅಂದನು.


ಅಬ್ರಹಾಮನು - ಸ್ವಾಮೀ, ನಿನಗೆ ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು ಎನ್ನಲು ಆತನು - ಹತ್ತು ಮಂದಿಯ ನಿವಿುತ್ತವೂ ಅದನ್ನು ಉಳಿಸುವೆನು, ನಾಶಮಾಡುವದಿಲ್ಲ ಅಂದನು.


ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ - ಕರ್ತನು ಈ ದೇಶದವರ ವಿಷಯ ಪೂರ್ಣವಾಗಿಯೂ ತೀವ್ರವಾಗಿಯೂ ಲೆಕ್ಕವನ್ನು ತೀರಿಸುವನಾದದರಿಂದ ಇಸ್ರಾಯೇಲ್ಯರ ಸಂಖ್ಯೆಯು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಒಂದು ಅಂಶ ಮಾತ್ರ ರಕ್ಷಣೆಹೊಂದುವದೆಂದು ಕೂಗಿ ಹೇಳುತ್ತಾನೆ.


ನಿತ್ಯಜೀವಕ್ಕೆ ಹೋಗುವ ಬಾಗಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.


ಇಸ್ರಾಯೇಲ್ಯರ ದೇವರಾದ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಹೀಗಿರಲು, ನನ್ನ ಜೀವದಾಣೆ, ಸೊದೋವಿುನ ಗತಿಯೇ ಮೋವಾಬಿಗೂ ಆಗುವದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವದು; ಆ ಪ್ರಾಂತಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವವು; ನನ್ನ ಪ್ರಜೆಯಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು, ಅವು ನನ್ನ ಜನಶೇಷದವರಿಗೆ ಸ್ವಾಸ್ತ್ಯವಾಗುವವು.


ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.


ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದು; ಯೆಹೋವನು ತಿಳಿಸಿದಂತೆ ಚೀಯೋನ್‍ಪರ್ವತದಲ್ಲಿಯೂ ಯೆರೂಸಲೇವಿುನಲ್ಲಿಯೂ ಅನೇಕರು ಉಳಿದಿರುವರು; ಯೆಹೋವನು ಕರೆಯುವ ಜನಶೇಷದಲ್ಲಿ ಅವರು ಸೇರಿದವರಾಗಿರುವರು.


ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.


ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋವಿುನ ಪಾಪಕ್ಕಿಂತಲೂ ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.


ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಮಂದಿ ಇಸ್ರಾಯೇಲ್ಯರನ್ನು ಉಳಿಸುವೆನು ಎಂದು ಹೇಳಿದನು.


ಎಲ್ಲಾ ಜನಾಂಗಗಳವರೂ ನಿಮ್ಮ ಆ ದೇಶವು ಯಾವ ವ್ಯವಸಾಯವಾದರೂ ಇಲ್ಲದೆ ಹುಲ್ಲಾದರೂ ಬೆಳೆಯದೆ ಹಾಳುಬಿದ್ದು ಯೆಹೋವನು ಮಹಾ ಕೋಪದಿಂದ ಕೆಡವಿದ ಸೊದೋಮ್ ಗೊಮೋರ ಅದ್ಮಾ ಚೆಬೋಯೀಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋದದ್ದಾಗಿ ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವದನ್ನು ಕಂಡು -


ಆತನು ಸೊದೋಮ್‍ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಮುಂದೆ ಭಕ್ತಿಹೀನರಾಗಿ ಬದುಕುವವರ ಗತಿ ಇಂಥದೆಂದು ಸೂಚಿಸುವದಕ್ಕಾಗಿ ಅವುಗಳಿಗೆ ನಾಶನವನ್ನು ವಿಧಿಸಿದನು.


ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇವಿುನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿಯೂ ಸಮಾಧಾನ ಹೊಂದುವಿರಿ.


ಸೊದೋವಿುನಲ್ಲಿ ಐವತ್ತು ಮಂದಿ ನೀತಿವಂತರು ನನಗೆ ಸಿಕ್ಕಿದರೆ ಅವರ ನಿವಿುತ್ತ ಊರನ್ನೆಲ್ಲಾ ಉಳಿಸುವೆನು ಅಂದನು.


ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಗೂಢಾರ್ಥವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಹೆಸರುಗಳುಂಟು; ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.


ಜೀವಸ್ವರೂಪನಾದ ದೇವರನ್ನು ದೂಷಿಸುವದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿನ್ನ ದೇವರಾದ ಯೆಹೋವನು ಕೇಳಿರುವನು; ನಿನ್ನ ದೇವರಾದ ಯೆಹೋವನು ತಾನು ಹೇಳಿದ ವಾಕ್ಯಗಳ ನಿವಿುತ್ತ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿರಿ ಎಂಬದೇ.


ಚೀಯೋನ್ ನಗರಿಯೊಂದೇ ಉಳಿದು ದ್ರಾಕ್ಷೇತೋಟದ ಮಂಚಿಕೆಯಂತೆಯೂ ಸವುತೆಯ ಹೊಲದ ಗುಡಸಲಿನ ಹಾಗೂ ಮುತ್ತಿದ ಪಟ್ಟಣದೋಪಾದಿಯಲ್ಲಿಯೂ ಇದೆ.


ಆ ದಿನದಲ್ಲಿ ಕರ್ತನು ತನ್ನ ಜನಶೇಷವನ್ನು ಬಿಡಿಸಿಕೊಳ್ಳುವದಕ್ಕೆ ಎರಡನೆಯ ಸಾರಿ ಕೈಹಾಕಿ ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್, ಸಮುದ್ರದ ಕರಾವಳಿ, ಈ ಸ್ಥಳಗಳಲ್ಲಿ ಉಳಿದವರನ್ನು ಬರಮಾಡಿಕೊಳ್ಳುವನು.


ಇದಲ್ಲದೆ ಇಸ್ರಾಯೇಲ್ಯರು ಐಗುಪ್ತ ದೇಶದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಮಾರ್ಗವು ಹೇಗೆ ಸಿದ್ಧವಾಯಿತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿಕೊಂಡು ಬರುವ ಆತನ ಜನಶೇಷಕ್ಕೆ ರಾಜಮಾರ್ಗವು ಸಿದ್ಧವಾಗುವದು.


ಯಾಕೋಬವಂಶವೇ, ಇಸ್ರಾಯೇಲ್ ಸಂತಾನಶೇಷವೇ, ನನ್ನ ಮಾತಿಗೆ ಕಿವಿಗೊಡಿರಿ; ನಿಮ್ಮನ್ನು ಗರ್ಭದಿಂದ ಹೊರುತ್ತಿದ್ದೇನೆ, ಹುಟ್ಟಿದಂದಿನಿಂದ ವಹಿಸುತ್ತಿದ್ದೇನೆ;


ಯೆಹೋವನು ಹೀಗನ್ನುತ್ತಾನೆ - ರಸ ದೊರೆಯಬಹುದಾದ ದ್ರಾಕ್ಷೆಯ ಗೊಂಚಲನ್ನು ಒಬ್ಬನು ನೋಡಿ - ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ ಎನ್ನುವಂತೆ ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು,


ಯೆರೂಸಲೇವಿುನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಮೋಸದಲ್ಲಿ ನಡೆದು ದುಷ್ಟರಲ್ಲಿ ಯಾವನೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ; ಅವರೆಲ್ಲರು ಸೊದೋವಿುನಂತೆ, ಆ ಪುರನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.


ಎಲ್ಲಾ ಜನರೂ ಪ್ರವಾದಿಯಾದ ಯೆರೆಮೀಯನ ಬಳಿಗೆ ಬಂದು ಅವನಿಗೆ - ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು;


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ತಡಕಿದರೂ ಸಿಕ್ಕುವದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷವಿುಸುವೆನಲ್ಲವೆ. ಇದು ಯೆಹೋವನ ನುಡಿ.


ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ; ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು