Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:13 - ಕನ್ನಡ ಸತ್ಯವೇದವು J.V. (BSI)

13 ಏಕಂದರೆ ಅವನು ತನ್ನೊಳಗೆ - ನನ್ನ ಜ್ಞಾನಭುಜ ಬಲಗಳಿಂದಲೇ ಇದನ್ನು ಮಾಡಿದ್ದೇನೆ, ನಾನೇ ವಿವೇಕಿ; ಜನಾಂಗಗಳ ಎಲ್ಲೆಗಳನ್ನು ಕಿತ್ತು ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ ಸಿಂಹಾಸನಾರೂಢರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಏಕೆಂದರೆ ಅವನು ತನ್ನೊಳಗೆ, “ನನ್ನ ಜ್ಞಾನ, ಭುಜಬಲಗಳಿಂದಲೇ ಇದನ್ನು ಮಾಡಿದ್ದೇನೆ. ನಾನೇ ವಿವೇಕವುಳ್ಳ ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ, ಸಿಂಹಾಸನಾರೂಢರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಸ್ಸೀರಿಯದ ಅನಿಸಿಕೆಯಿದು: “ನಾನು ವಿವೇಕಿ, ನನ್ನ ಭುಜಬಲದಿಂದಲೇ ಇದನ್ನು ಮಾಡಿದ್ದೇನೆ. ನನ್ನ ಜ್ಞಾನಶಕ್ತಿಯಿಂದಲೇ ಇದನ್ನು ಸಾಧಿಸಿದ್ದೇನೆ. ನಾಡುಗಳ ಮಧ್ಯೆಯಿರುವ ಎಲ್ಲೆಗಳನ್ನು ಕಿತ್ತುಹಾಕಿದ್ದೇನೆ. ಅವು ಕೂಡಿಸಿಟ್ಟುಕೊಂಡಿದ್ದ ನಿಕ್ಷೇಪಗಳನ್ನು ಸೂರೆಮಾಡಿದ್ದೇನೆ. ಗದ್ದುಗೆಯ ಮೇಲೆ ಕುಳಿತಿರುವವರನ್ನು ಮಹಾ ವೀರನಂತೆ ಕೆಡವಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಶ್ಶೂರದ ಅರಸನು ಹೇಳುವುದೇನೆಂದರೆ, “ನಾನು ಜ್ಞಾನಿಯಾಗಿದ್ದೇನೆ, ನನ್ನ ಸ್ವಂತ ಜ್ಞಾನದಿಂದಲೂ ಸಾಮರ್ಥ್ಯದಿಂದಲೂ ನಾನು ಅನೇಕ ಮಹಾಕಾರ್ಯಗಳನ್ನು ನಡಿಸಿದ್ದೇನೆ. ಅನೇಕ ಜನಾಂಗಗಳನ್ನು ಸೋಲಿಸಿದ್ದೇನೆ; ಅವರ ಐಶ್ವರ್ಯಗಳನ್ನು ಸೂರೆಮಾಡಿದ್ದೇನೆ. ಅವರ ಜನರನ್ನು ನನ್ನ ಗುಲಾಮರನ್ನಾಗಿ ಮಾಡಿದ್ದೇನೆ. ನಾನು ಮಹಾ ವೀರನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಏಕೆಂದರೆ ಅಸ್ಸೀರಿಯ ತನ್ನೊಳಗೆ ಹೀಗೆ ಅಂದುಕೊಂಡನು, “ ‘ನನ್ನ ಕೈಯ ಬಲದಿಂದಲೂ ನನ್ನ ಜ್ಞಾನದಿಂದಲೂ ಅದನ್ನು ಮಾಡಿದೆ. ಏಕೆಂದರೆ, ನಾನು ವಿವೇಕಿ. ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿಗಳನ್ನು ಕೊಳ್ಳೆಹೊಡೆದು, ಅದರ ಅರಸರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:13
31 ತಿಳಿವುಗಳ ಹೋಲಿಕೆ  

ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವದು ಇಗೋ, ಮಹಾಪಟ್ಟಣವಾದ ಈ ಬಾಬೆಲ್ ಎಂದು ಕೊಚ್ಚಿಕೊಂಡನು.


ಈ ಭಾಗ್ಯವು ನಮ್ಮ ಸಾಮರ್ಥ್ಯ ಸಾಹಸಗಳಿಂದಲೇ ನಮಗುಂಟಾಯಿತು ಅಂದುಕೊಂಡೀರಿ.


ತನ್ನ ಬಲೆಗೆ ಬಲಿಕೊಡುತ್ತಾನೆ, ತನ್ನ ಜಾಲಕ್ಕೆ ಧೂಪಹಾಕುತ್ತಾನೆ; ಅವುಗಳ ಮೂಲಕವೇ ಅವನ ಭೋಜನವು ಪುಷ್ಟಿ, ಅವನ ಆಹಾರವು ರುಚಿ.


ನೀವು ಹೆಚ್ಚಳಪಡುವದು ಶೂನ್ಯವಾದದ್ದರಲ್ಲಿಯೇ ಸ್ವಬಲದಿಂದ ಕೊಂಬುಗಳನ್ನು ಪಡೆದುಕೊಂಡಿದ್ದೇವಲ್ಲಾ ಅಂದುಕೊಳ್ಳುತ್ತೀರಿ.


ನಾನು ನಿಮ್ಮನ್ನು ದಮಸ್ಕದ ಆಚೆ ಸೆರೆಗೆ ತಳ್ಳುವೆನು; ಸೇನಾಧೀಶ್ವರ ದೇವರೆಂಬ ಯೆಹೋವನು ಇದನ್ನು ನುಡಿದಿದ್ದಾನೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಐಗುಪ್ತದ ಅರಸನಾದ ಫರೋಹನೇ, ನಿನ್ನ ನದೀ ಶಾಖೆಗಳ ನಡುವೆ ಒರಗಿಕೊಂಡು - ಈ ನದಿಯು ನನ್ನದೇ, ನನಗಾಗಿಯೇ ಮಾಡಿಕೊಂಡದು ಅಂದುಕೊಳ್ಳುವ ಪೇರ್ಮೊಸಳೆಯೇ, ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ನರಪುತ್ರನೇ, ತೂರು ಯೆರೂಸಲೇವಿುನ ವಿಷಯವಾಗಿ - ಅಹಹ, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ, ನನ್ನ ಕಡೆಗೆ ತೆರೆದುಬಿಟ್ಟಿದೆ ; ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಅಂದುಕೊಂಡದರಿಂದ


ಕರ್ತನಾದ ಯೇಹೋವನ ಮಾತನ್ನು ಕೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - [ಅಮ್ಮೋನೇ,] ನನ್ನ ಪವಿತ್ರಾಲಯವು ಹೊಲಸಾದದ್ದನ್ನು, ಇಸ್ರಾಯೇಲ್ ದೇಶವು ಹಾಳುಬಿದ್ದದ್ದನ್ನು, ಯೆಹೂದವಂಶದವರು ಸೆರೆಹೋದದ್ದನ್ನು ನೀನು ನೋಡಿ ಅಹಹ ಎಂದು ಹಿಗ್ಗಿಕೊಂಡದರಿಂದ


ಅದು ಅಂದುಕೊಳ್ಳುವದೇನಂದರೆ - ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೆ.


ಆದದರಿಂದ ಅಶ್ಶೂರದ ಅರಸನಾದ ಪೂಲ್, ತಿಗ್ಲತ್ಪಿಲೆಸರ್ ಎಂಬವರು ಇಸ್ರಾಯೇಲ್ ದೇವರ ಪ್ರೇರಣೆಯಿಂದ ಬಂದು ರೂಬೇನ್ಯರು, ಗಾದ್ಯರು, ಮನಸ್ಸೆಕುಲದ ಅರ್ಧ ಜನರು ಇವರನ್ನು ಹಲಹ, ಹಾಬೋರ್ ಹಾರ ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆಯೊಯ್ದರು. ಅವರು ಇಂದಿನವರೆಗೂ ಅಲ್ಲೇ ಇರುತ್ತಾರೆ.


ಸ್ವಲ್ಪ ಕಾಲವಾದನಂತರ ನಾನು ಬಂದು ನಿಮ್ಮನ್ನು ಧಾನ್ಯ ದ್ರಾಕ್ಷಾರಸ ಆಹಾರ ದ್ರಾಕ್ಷೇತೋಟ ಎಣ್ಣೇಮರ ಜೇನುತುಪ್ಪ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರಕೊಂಡುಹೋಗುವೆನು; ನೀವು ಸಾಯುವದಿಲ್ಲ, ಬದುಕುವಿರಿ. ಯೆಹೋವನು ನಮ್ಮನ್ನು ರಕ್ಷಿಸುವನು ಎಂದು ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ.


ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿಯೂ ಅರಮನೆಯ ಭಂಡಾರದಲ್ಲಿಯೂ ಸಿಕ್ಕಿದ ಬೆಳ್ಳಿಯನ್ನೂ


ಆರನೆಯ ವರುಷದಲ್ಲಿ ಸ್ವಾಧೀನವಾಗಲು ಇಸ್ರಾಯೇಲ್ಯರನ್ನು ಸೆರೆಹಿಡಿದು ಹಲಹು, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ, ಮೇದ್ಯರ ಪಟ್ಟಣಗಳು ಇವುಗಳಿಗೆ ಕಳುಹಿಸಿದನು.


ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲ್ಯರನ್ನು ಸೆರೆಯಾಗಿ ಒಯ್ದನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಕಳುಹಿಸಿದನು. ಅವರು ಸಮಾರ್ಯದೇಶವನ್ನು ಸ್ವತಂತ್ರಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಿಸಿದರು.


ಅದು ಹೋಶೇಯನ ಆಳಿಕೆಯ ಒಂಭತ್ತನೆಯ ವರುಷದಲ್ಲಿ ಅವನ ಸ್ವಾಧೀನವಾಗಲು ಅವನು ಎಲ್ಲಾ ಇಸ್ರಾಯೇಲ್ಯರನ್ನು ಅಶ್ಶೂರ್‍ದೇಶಕ್ಕೆ ಒಯ್ದು ಹಲಹು ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಇದಲ್ಲದೆ ಆಹಾಜನು ಯೆಹೋವನ ಆಲಯದಲ್ಲಿಯೂ ಅರಮನೆಯ ಭಂಡಾರದಲ್ಲಿಯೂ ಇದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.


ಇಸ್ರಾಯೇಲ್ಯರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಗಿಲ್ಯಾದ್, ಗಲಿಲಾಯ ಪ್ರಾಂತಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡುಹೋದನು.


ಐಗುಪ್ತವೇ ನೈಲಿನಂತೆ ಉಬ್ಬಿದೆ; ಐಗುಪ್ತವೆಂಬ ಪ್ರವಾಹವೇ ನೈಲಿನ ಶಾಖೆಗಳ ಹಾಗೆ ತುಂಬಿ ತುಳುಕುತ್ತದೆ; ನಾನು ಉಬ್ಬಿಕೊಂಡು ಲೋಕದಲ್ಲೆಲ್ಲಾ ಹಬ್ಬುವೆನು, ಪಟ್ಟಣವನ್ನು ಪಟ್ಟಣನಿವಾಸಿಗಳನ್ನು ನಾಶಮಾಡುವೆನು ಅಂದುಕೊಳ್ಳುತ್ತದೆ.


ನಾವು ಶೂರರು, ಯುದ್ಧಪ್ರವೀಣರಾದ ಪರಾಕ್ರಮಶಾಲಿಗಳು ಎಂದು ನೀವು ಅಂದುಕೊಳ್ಳುವದು ಹೇಗೆ? ಮೋವಾಬು ಹಾಳಾಗಿದೆ;


ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಹೆಚ್ಚು ಹರಟೆಗಳನ್ನು ಕೇಳಿದ್ದೇನೆ.


ಇವುಗಳೆಲ್ಲಾ ಅವನ ಪ್ರಸ್ತಾಪವೆತ್ತಿ ಅವನ ವಿಷಯವಾಗಿ ಈ ಗೇಲಿಯ ಗೀತಗಳನ್ನು ಹಾಡುವವಲ್ಲವೆ - ಅಯ್ಯೋ, ತನ್ನದಲ್ಲದ್ದನ್ನು ಹೆಚ್ಚೆಚ್ಚಾಗಿ ಕೂಡಿಸಿಕೊಂಡು ಅಡವುಗಳನ್ನು ಹೊರೆಹೊರೆಯಾಗಿ ಇಟ್ಟುಕೊಳ್ಳುವವನ ಗತಿಯನ್ನು ಏನು ಹೇಳಲಿ! ಅವನು ಎಷ್ಟು ಕಾಲ ಹೀಗೆ ಮಾಡಾನು!


ಆಗ ಯೆಹೋವನು ಗಿದ್ಯೋನನಿಗೆ - ನಿನ್ನ ಸಂಗಡ ಇರುವ ಜನರು ಹೆಚ್ಚಾಗಿದ್ದಾರೆ; ಇವರ ಕೈಗೆ ವಿುದ್ಯಾನ್ಯರನ್ನು ಒಪ್ಪಿಸುವದು ನನಗೆ ಸರಿಯಾಗಿ ಕಾಣುವದಿಲ್ಲ; ಒಪ್ಪಿಸಿಕೊಟ್ಟರೆ ಸ್ವಹಸ್ತದಿಂದಲೇ ನಮಗೆ ರಕ್ಷಣೆಯುಂಟಾಯಿತೆಂದು ಹೆಚ್ಚಳ ಪಟ್ಟು ನನ್ನನ್ನು ಅಲಕ್ಷ್ಯಮಾಡಾರು.


ಐಶ್ವರ್ಯವಂತನು ತಾನು ಜ್ಞಾನಿಯೆಂದೆಣಿಸಿಕೊಳ್ಳುವನು, ವಿವೇಕಿಯಾದ ಬಡವನು ಅವನನ್ನು ಇಂಥವನೆಂದು ಗೊತ್ತುಮಾಡುವನು.


ಅಯ್ಯೋ, ತಮ್ಮಲ್ಲಿ ತಾವೇ ಜ್ಞಾನಿಗಳೆಂದೂ ಸ್ವಂತ ಗಣನೆಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಪಾಡು ಏನು ಹೇಳಲಿ!


ಆದಕಾರಣ, ಅರಸೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ - ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು ಎಂದರಿಕೆ ಮಾಡಿದನು.


ಕೂಡಲೆ ಬಿರುಗಾಳಿಯಂತೆ ಬೀಸುತ್ತಾ ಹಾದುಹೋಗುವರು; ಸ್ವಬಲವೇ ದೇವರು ಎನ್ನುವ ಅಪರಾಧಕ್ಕೆ ಒಳಗಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು