ಯೆಶಾಯ 10:2 - ಕನ್ನಡ ಸತ್ಯವೇದವು J.V. (BSI)2 ಅನ್ಯಾಯವಾದ ತೀರ್ಪುಗಳನ್ನು ತೀರಿಸಿ ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ, ದಿಕ್ಕಿಲ್ಲದವರಿಗೆ ನ್ಯಾಯವನ್ನು ತಪ್ಪಿಸಿ, ಅನಾಥರನ್ನು ಕೊಳ್ಳೆಹೊಡೆದು, ವಿಧವೆಯರನ್ನು ಸೂರೆಮಾಡಬೇಕೆಂದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನೀವು ದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತೀರಿ. ಬಡಬಗ್ಗರಿಂದ ಹಕ್ಕುಬಾಧ್ಯತೆಗಳನ್ನು ಕಸಿದುಕೊಳ್ಳುತ್ತೀರಿ. ವಿಧವೆಯರನ್ನು ಸೂರೆಮಾಡುತ್ತೀರಿ. ಅನಾಥರನ್ನು ಕೊಳ್ಳೆಹೊಡೆಯುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವರು ಬಡವರಿಗೆ ನ್ಯಾಯವಂತರಾಗಿರುವುದಿಲ್ಲ. ಅವರು ಬಡಜನರ ಹಕ್ಕನ್ನು ತೆಗೆದುಬಿಡುವರು. ಜನರು ವಿಧವೆಯರಿಂದಲೂ ಅನಾಥರಿಂದಲೂ ಹಣ ಕಿತ್ತುಕೊಳ್ಳುವಂತೆ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇವರು ವಿಧವೆಯರನ್ನು ಸೂರೆಮಾಡಿ, ದಿಕ್ಕಿಲ್ಲದವರಿಂದ ಸುಲಿದುಕೊಂಡು ದೀನರಿಗೆ ನ್ಯಾಯವನ್ನು ತಪ್ಪಿಸಿ, ನನ್ನ ಜನರಲ್ಲಿ ಬಡವರ ನ್ಯಾಯವನ್ನು ತೆಗೆಯಬೇಕೆಂದಿದ್ದಾರೆ. ಅಧ್ಯಾಯವನ್ನು ನೋಡಿ |