Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:20 - ಕನ್ನಡ ಸತ್ಯವೇದವು J.V. (BSI)

20 ಆ ದಿನದಲ್ಲಿ ಇಸ್ರಾಯೇಲ್ಯರೊಳಗೆ ಉಳಿದವರು, ಯಾಕೋಬನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಯಥಾರ್ಥವಾಗಿ ಆಧಾರಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ದಿನದಲ್ಲಿ ಇಸ್ರಾಯೇಲರೊಳಗೆ ಉಳಿದವರು, ಯಾಕೋಬಿನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲರ ಸದಮಲಸ್ವಾಮಿಯನ್ನು ನಂಬಿಗಸ್ತರಾಗಿ ಆಧಾರಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆ ದಿನದಂದು ಅಳಿದುಳಿದ ಇಸ್ರಯೇಲರು, ತಪ್ಪಿಸಿಕೊಂಡ ಯಕೋಬ ಮನೆತನದವರು ತಮ್ಮನ್ನು ಬಾಧಿಸಿದವರನ್ನು ನೆಮ್ಮುವುದಿಲ್ಲ. ಬದಲಿಗೆ ಇಸ್ರಯೇಲರ ಪರಮಪಾವನ ಸ್ವಾಮಿಯಾದ ಸರ್ವೇಶ್ವರನನ್ನೇ ನಿಶ್ಚಯವಾಗಿ ಆಶ್ರಯಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ಯಾಕೋಬನ ಮನೆತನದವರು, ಇಸ್ರೇಲರಲ್ಲಿ ಅಳಿದುಳಿದವರು, ತಮ್ಮನ್ನು ಹೊಡೆಯುವವರನ್ನು ಆಧಾರಮಾಡಿಕೊಳ್ಳದೆ ಇಸ್ರೇಲಿನ ಅತೀ ಪರಿಶುದ್ಧನಾದ ಯೆಹೋವನನ್ನೇ ಆಧಾರಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆ ದಿನದಲ್ಲಿ ಇಸ್ರಾಯೇಲರಲ್ಲಿ ಉಳಿದವರೂ, ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು, ಇಸ್ರಾಯೇಲಿನ ಪರಿಶುದ್ಧರಾದ ಯೆಹೋವ ದೇವರ ಸತ್ಯವಾಗಿ ಆಧಾರಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:20
25 ತಿಳಿವುಗಳ ಹೋಲಿಕೆ  

ನಿಮ್ಮೊಳಗೆ ಯಾವನು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವನು? ಕತ್ತಲಲ್ಲಿ ನಡೆಯುತ್ತಾ ಬೆಳಕಿಲ್ಲದವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.


ಸೇನಾಧೀಶ್ವರನಾದ ಯೆಹೋವನು ನಮಗೆ ಕೊಂಚ ಜನವನ್ನೂ ಉಳಿಸದೆ ಹೋಗಿದ್ದರೆ ಸೊದೋವಿುನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.


ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಬಂದು ಅವನಿಗೆ ನೆರವಾಗುವದಕ್ಕೆ ಬದಲಾಗಿ ಅವನನ್ನು ಕುಗ್ಗಿಸಿದನು.


ಆಹಾಜನು ಅಶ್ಶೂರ್‍ದೇಶದ ಅರಸನಾದ ತಿಗ್ಲತ್ಪಿಲೆಸೆರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನಾನು ನಿನ್ನ ದಾಸನೂ ಮಗನೂ ಆಗಿದ್ದೇನೆ; ನೀನು ಬಂದು ನನ್ನನ್ನು ನನಗೆ ವಿರೋಧವಾಗಿ ಎದ್ದಿರುವ ಅರಾಮ್ಯರ ಮತ್ತು ಇಸ್ರಾಯೇಲ್ಯರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು ಎಂದು ಹೇಳಿಸಿದನು.


ಅಶ್ಶೂರವು ನಮ್ಮನ್ನು ರಕ್ಷಿಸುವದೆಂದು ನಂಬೆವು; [ಐಗುಪ್ತದ] ಕುದುರೆಗಳನ್ನು ಹತ್ತೆವು; ನಮ್ಮ ಕೈಕೆಲಸದ ಬೊಂಬೆಗಳಿಗೆ - ನೀವು ನಮ್ಮ ದೇವರುಗಳು ಎಂದು ಇನ್ನು ಹೇಳೆವು; ನೀನೇ ಅನಾಥರನ್ನು ಕರುಣಿಸುವಿ ಎಂಬದಾಗಿ ಅರಿಕೆಮಾಡಿಕೊಳ್ಳಿರಿ.


ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ವ್ರಣವನ್ನು ಗುಣಪಡಿಸಲಾರನು.


ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.


ಆ ದಿನದಲ್ಲಿ ಕರ್ತನು ತನ್ನ ಜನಶೇಷವನ್ನು ಬಿಡಿಸಿಕೊಳ್ಳುವದಕ್ಕೆ ಎರಡನೆಯ ಸಾರಿ ಕೈಹಾಕಿ ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್, ಸಮುದ್ರದ ಕರಾವಳಿ, ಈ ಸ್ಥಳಗಳಲ್ಲಿ ಉಳಿದವರನ್ನು ಬರಮಾಡಿಕೊಳ್ಳುವನು.


ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ ಅದೂ ಕೂಡಾ ನಾಶವಾಗುವದು; ಏಲಾ ಅಲ್ಲೋನ್ ಮರಗಳನ್ನೂ ಕಡಿದ ಮೇಲೆ ಅವುಗಳ ಬುಡವು ನಿಲ್ಲುವ ಹಾಗೆ ದೇವಕುಲವು ಮೋಟುಬುಡವಾಗಿ ನಿಲ್ಲುವದು ಅಂದನು.


ಹೀಗಿರುವಲ್ಲಿ ನಾವು ತಿರಿಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿ ಬಿಡುವಿಯಲ್ಲವೋ?


ಯೆರೂಸಲೇವಿುನಲ್ಲಿ ಉಳಿದವರು ಹರಡಿಕೊಳ್ಳುವರು; ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿ ಹೊಂದುವರು; ಯೆಹೋವನ ಆಗ್ರಹವೇ ಇದನ್ನು ನೆರವೇರಿಸುವದು.


ಆಸನು ತನ್ನ ದೇವರಾದ ಯೆಹೋವನಿಗೆ - ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ ನಿನ್ನ ಹೊರತು ರಕ್ಷಕನಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾ ಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನನ್ನು ಎದುರಿಸಿ ಗೆಲ್ಲಬಾರದು ಎಂದು ಮೊರೆಯಿಡಲು


ಇದಲ್ಲದೆ ಇಸ್ರಾಯೇಲ್ಯರು ಐಗುಪ್ತ ದೇಶದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಮಾರ್ಗವು ಹೇಗೆ ಸಿದ್ಧವಾಯಿತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿಕೊಂಡು ಬರುವ ಆತನ ಜನಶೇಷಕ್ಕೆ ರಾಜಮಾರ್ಗವು ಸಿದ್ಧವಾಗುವದು.


ಯಾಕೋಬವಂಶವೇ, ಇಸ್ರಾಯೇಲ್ ಸಂತಾನಶೇಷವೇ, ನನ್ನ ಮಾತಿಗೆ ಕಿವಿಗೊಡಿರಿ; ನಿಮ್ಮನ್ನು ಗರ್ಭದಿಂದ ಹೊರುತ್ತಿದ್ದೇನೆ, ಹುಟ್ಟಿದಂದಿನಿಂದ ವಹಿಸುತ್ತಿದ್ದೇನೆ;


ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದಜನಶೇಷದವರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಉಳಿದು ಅಲ್ಲಿಂದ ತಪ್ಪಿಸಿಕೊಂಡು ಯೆಹೂದಕ್ಕೆ ಹಿಂದಿರುಗುವದಿಲ್ಲ; ಓಡಿಬರುವ ಕೊಂಚ ಜನವೇ ಹೊರತು ಯಾವನೂ ಹಿಂದಿರುಗನು.


ಹೀಗಿರಲು ಪ್ರಸವವೇದನೆಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲ್ಯರೊಂದಿಗೆ ಹಿಂದಿರುಗುವರು.


ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; [ಮಂದೆಯಂತೆ] ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.


ಆ ಕಾಲದಲ್ಲಿ ಅರಸನಾದ ಆಹಾಜನು ತನಗೆ ಸಹಾಯಮಾಡಬೇಕೆಂದು ಅಶ್ಶೂರದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು.


ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು