ಯೆಶಾಯ 10:24 - ಕನ್ನಡ ಸತ್ಯವೇದವು J.V. (BSI)24 ಇಂತಿರಲು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ - ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತ್ಯರು ನಿಮಗೆ ಮಾಡಿದಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನೆತ್ತುವ ಅಶ್ಶೂರ್ಯರಿಗೆ ಭಯಪಡಬೇಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆದುದರಿಂದ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತರು ಮಾಡಿದಂತೆ, ನಿಮ್ಮನ್ನು ಕೋಲಿನಿಂದ ಹೊಡೆದು, ನಿಮ್ಮ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಹೀಗಿರಲು ಪ್ರಭುವಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿ ಹೇಳುವುದೇನೆಂದರೆ: “ಸಿಯೋನಿನಲ್ಲಿ ವಾಸಿಸುವ ನನ್ನ ಜನರೇ, ಈಜಿಪ್ಟಿನವರು ನಿಮಗೆ ಮಾಡಿದಂತೆ ಅಸ್ಸೀರಿಯದವರು ನಿಮ್ಮನ್ನು ಬಡಿಗೆಯಿಂದ ಹೊಡೆದು, ನಿಮಗೆ ವಿರುದ್ಧ ದೊಣ್ಣೆಯನ್ನು ಎತ್ತುವಾಗ ಅವರಿಗೆ ಹೆದರಬೇಡಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನನ್ನ ಒಡೆಯನೂ ಸರ್ವಶಕ್ತನೂ ಆದ ಯೆಹೋವನು ಹೇಳುವುದೇನೆಂದರೆ: “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಅಶ್ಶೂರಕ್ಕೆ ನೀವು ಭಯಪಡಬೇಡಿ. ಹಿಂದಿನ ಕಾಲದಲ್ಲಿ ಈಜಿಪ್ಟ್ ನಿಮ್ಮನ್ನು ಬಾಧಿಸಿದಂತೆ ಇವನೂ ನಿಮ್ಮನ್ನು ಬಾಧಿಸುವನು. ಅವನ ಬಾಧೆಯು ನಿಮ್ಮ ಬೆನ್ನಿನ ಮೇಲೆ ಬೆತ್ತದಿಂದ ಹೊಡೆದಂತೆ ಇರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಈಜಿಪ್ಟಿನವರಂತೆ ನಿಮ್ಮನ್ನು ಕೋಲಿನಿಂದ ಹೊಡೆದು, ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಸ್ಸೀರಿಯದವರಿಗೆ ಭಯಪಡಬೇಡಿರಿ. ಅಧ್ಯಾಯವನ್ನು ನೋಡಿ |