ಯೆಶಾಯ 10:26 - ಕನ್ನಡ ಸತ್ಯವೇದವು J.V. (BSI)26 ಸೇನಾಧೀಶ್ವರನಾದ ಯೆಹೋವನು ಓರೇಬನ ಬಂಡೆಯ ಹತ್ತಿರ ವಿುದ್ಯಾನ್ಯರನ್ನು ಹತಮಾಡಿದಂತೆ ಅವರ ಮೇಲೆಯೂ ಕೊರಡೆಯನ್ನು ಬೀಸುವನು; ಆತನು ದಂಡವನ್ನು ಸಮುದ್ರದ ಮೇಲೆ ಚಾಚಿ ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಸೇನಾಧೀಶ್ವರನಾದ ಯೆಹೋವನು ಓರೇಬ ಬಂಡೆಯ ಹತ್ತಿರ ಮಿದ್ಯಾನ್ಯರನ್ನು ಹತಮಾಡಿದಂತೆ, ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತರ ಮೇಲೆ ಎತ್ತಿದಂತೆ ಎತ್ತುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಸೇನಾಧೀಶ್ವರ ಸರ್ವೇಶ್ವರಸ್ವಾಮಿಯಾದ ನಾನು, ಒಮ್ಮೆ ಓರೇಬನ ಬಂಡೆಯ ಬಳಿ ಮಿದ್ಯಾನರಿಗೆ ಮಾಡಿದಂತೆ, ಅಸ್ಸೀರಿಯದವರನ್ನು ಚಾಟಿಯಿಂದ ಥಳಿಸುವೆನು. ಕೆಂಪುಸಮುದ್ರದಲ್ಲಿ ಈಜಿಪ್ಟರನ್ನು ದಂಡಿಸಿದಂತೆ ಅಸ್ಸೀರಿಯದವರನ್ನು ದಂಡಿಸಲು ದೊಣ್ಣೆಯನ್ನೆತ್ತುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆ ಬಳಿಕ ಸರ್ವಶಕ್ತನಾದ ಯೆಹೋವನು ಕೊರಡೆಯಿಂದ ಅಶ್ಶೂರವನ್ನು ಹೊಡೆಯುವನು. ಹಿಂದಿನ ಕಾಲದಲ್ಲಿ ಓರೇಬ್ ಬಂಡೆಯ ಮೇಲೆ ಮಿದ್ಯಾನ್ಯರನ್ನು ಯೆಹೋವನು ಹೇಗೆ ಸೋಲಿಸಿದನೋ ಹಾಗೆಯೇ ಅಶ್ಶೂರವನ್ನು ಸೋಲಿಸುವನು. ಹಿಂದಿನ ಕಾಲದಲ್ಲಿ ಯೆಹೋವನು ಈಜಿಪ್ಟನ್ನು ಶಿಕ್ಷಿಸಿದನು. ಆತನು ಕೋಲನ್ನೆತ್ತಿ ಸಮುದ್ರ ಮಾರ್ಗವಾಗಿ ತನ್ನ ಜನರನ್ನು ಈಜಿಪ್ಟಿನಿಂದ ಹೊರನಡಿಸಿದನು. ಅದೇ ರೀತಿಯಲ್ಲಿ ಅಶ್ಶೂರದಿಂದ ಯೆಹೋವನು ತನ್ನ ಜನರನ್ನು ರಕ್ಷಿಸಿ ಬಿಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಸೇನಾಧೀಶ್ವರ ಯೆಹೋವ ದೇವರು ಓರೇಬ್ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ, ಅವರು ಕೋಲನ್ನು ಸಮುದ್ರದ ಮೇಲೆ ಚಾಚಿ, ಈಜಿಪ್ಟಿನವರ ಮೇಲೆ ಎತ್ತಿದಂತೆ ಎತ್ತುವರು. ಅಧ್ಯಾಯವನ್ನು ನೋಡಿ |