ಯೆಶಾಯ 10:27 - ಕನ್ನಡ ಸತ್ಯವೇದವು J.V. (BSI)27 ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ಕತ್ತಿನಿಂದಲೂ ತೊಲಗುವವು; ನೀವು ಪುಷ್ಟರಾದ ಕಾರಣ ನೊಗವು ಮುರಿದು ಹೋಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆ ದಿನದಲ್ಲಿ, ಅವರು ಹೊರಿಸಿದ ಹೊರೆಯು, ನಿಮ್ಮ ಬೆನ್ನಿನಿಂದಲೂ, ಹೂಡಿದ ನೊಗವು ಕುತ್ತಿಗೆಯಿಂದಲೂ ತೊಲಗುವುದು, ಮತ್ತು ನೀವು ಕೊಬ್ಬಿದ ಕಾರಣ ನೊಗವು ಮುರಿದು ಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆ ದಿನ ಬಂದಾಗ ಅವರು ನಿಮ್ಮ ಮೇಲೆ ಹೊರಿಸಿರುವ ಗುಲಾಮಗಿರಿಯನ್ನು ಕಳಚಿಹಾಕಲಾಗುವುದು. ನಿಮ್ಮ ಕೊರಳಿಗೆ ಕಟ್ಟಿದ ದಾಸ್ಯದ ನೊಗವನ್ನು ಮುರಿದುಹಾಕಲಾಗುವುದು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಅಶ್ಶೂರವು ನಿಮಗೆ ಸಂಕಟವನ್ನು ಉಂಟುಮಾಡುವದು. ಅದು ನಿಮಗೆ ನಿತ್ಯವೂ ಹೊರುವ ಭಾರವಾಗಿ ಪರಿಣಮಿಸುವದು. ನಿಮ್ಮ ಹೆಗಲಿನ ಮೇಲೆ ನೊಗವನ್ನು ಹಾಕುವದು. ಆದರೆ ಅದು ತೆಗೆದುಹಾಕಲ್ಪಡುವದು. ಅದು ನಿನ್ನ ದೇವರ ಶಕ್ತಿಯಿಂದ ಮುರಿಯಲ್ಪಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ, ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವುದು ಮತ್ತು ನೀವು ಕೊಬ್ಬಿದ ಕಾರಣ ನೊಗವು ಮುರಿದು ಹೋಗುವುದು. ಅಧ್ಯಾಯವನ್ನು ನೋಡಿ |