Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:28 - ಕನ್ನಡ ಸತ್ಯವೇದವು J.V. (BSI)

28 ಇಗೋ, ಬಂದರು, ಅಯ್ಯಾಥಿನ ಮೇಲೆ ಬಂದಿದ್ದಾರೆ, ವಿುಗ್ರೋನನ್ನು ಹಾದುಹೋಗಿದ್ದಾರೆ, ವಿುಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟುಬಿಟ್ಟಿದ್ದಾರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಶತ್ರುಗಳು ಅಯ್ಯಾಥಿನ ಮೇಲೆ ದಂಡೆತ್ತಿ ಬಂದಿದ್ದಾರೆ, ಮಿಗ್ರೋನನ್ನು ಹಾದುಹೋಗಿದ್ದಾರೆ; ಮಿಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಶತ್ರುಸೇನೆ ಅಯ್ಯಾಥಿನ ಮೇಲೆ ಬಂದು ಇಳಿದಿದೆ. ಮಿಗ್ರೋನನ್ನು ಹಾದುಹೋಗಿದೆ; ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಗಳನ್ನು ಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಸೈನಿಕರು ಅಯ್ಯಾಥಿನ ಮೇಲೆ ಬಂದಿದ್ದಾರೆ; ಮಿಗ್ರೋನನ್ನು ಹಾದುಹೋಗಿದ್ದಾರೆ. ಮಿಕ್ಮಾಷಿನಲ್ಲಿ ತಮ್ಮ ಉಪಕರಣಗಳನ್ನಿಟ್ಟಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರು ಅಯ್ಯಾಥಿಗೆ ಬಂದರು. ಮಿಗ್ರೋನನ್ನು ಹಾದು ಹೋಗಿ, ಮಿಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:28
12 ತಿಳಿವುಗಳ ಹೋಲಿಕೆ  

ಸೌಲನಾದರೋ ಗಿಬೆಯ ಪ್ರಾಂತದ ಅಂತ್ಯಭಾಗವಾಗಿರುವ ವಿುಗ್ರೋನಿನಲ್ಲಿನ ಒಂದು ದಾಳಿಂಬ ವೃಕ್ಷದ ಅಡಿಯಲ್ಲಿ ಇಳುಕೊಂಡಿದ್ದನು. ಅವನ ಜೊತೆಯಲ್ಲಿ ಸುಮಾರು ಆರುನೂರು ಮಂದಿ ಸೈನಿಕರೂ


ಅವರಿಂದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಅವರಲ್ಲಿ ಎರಡು ಸಾವಿರ ಜನರನ್ನು ವಿುಕ್ಮಾಷಿನಲ್ಲಿಯೂ ಬೇತೇಲಿನ ಗುಡ್ಡದಲ್ಲಿಯೂ ಇಟ್ಟುಕೊಂಡನು. ಉಳಿದ ಸಾವಿರ ಜನರನ್ನು ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು.


ಆಗ ಫಿಲಿಷ್ಟಿಯರು ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕೋಸ್ಕರ ಮೂವತ್ತು ಸಾವಿರ ರಥಬಲವನ್ನೂ ಆರು ಸಾವಿರ ಅಶ್ವಬಲವನ್ನೂ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಕಾಲ್ಬಲವನ್ನೂ ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ವಿುಕ್ಮಾಷಿನಲ್ಲಿ ಪಾಳೆಯ ಮಾಡಿಕೊಂಡರು.


ಗೆಬ, ವಿುಕ್ಮಾಷ್, ಅಯ್ಯಾ, ಗ್ರಾಮ ಸಹಿತವಾದ


ದಾವೀದನು ತಾನು ತಂದವುಗಳನ್ನು ಸಾಮಾನುಕಾಯುವವನ ಬಳಿಯಲ್ಲಿಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸುತ್ತಾ


ಆ ದಿವಸ ಜನರು ವಿುಕ್ಮಾಷಿನಿಂದ ಅಯ್ಯಾಲೋನಿನವರೆಗೆ ಫಿಲಿಷ್ಟಿಯರನ್ನು ಹೊಡೆದು ಬಹಳವಾಗಿ ದಣಿದಿದ್ದದರಿಂದ


ಉತ್ತರದಿಕ್ಕಿನದು ಎತ್ತರವಾಗಿ ವಿುಕ್ಮಾಷಿಗೂ ದಕ್ಷಿಣದಿಕ್ಕಿನದು ಗೆಬಕ್ಕೂ ಎದುರಾಗಿದ್ದವು.


ತರುವಾಯ ಅವರು ತಮ್ಮ ಹೆಂಡರು ಮಕ್ಕಳನ್ನೂ ಕುರಿದನ ಮೊದಲಾದ ಸೊತ್ತನ್ನೂ ಮುಂದಾಗಿ ಕಳುಹಿಸಿ ತಾವು ಹಿಂದಿನಿಂದ ಹೊರಟರು.


ಯೆಹೋಶುವನು ಜನರನ್ನು ಕರೆದು - ನೀವು ಗಟ್ಟಾ ಹತ್ತಿ ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ಆಯಿ ಎಂಬ ಪ್ರಾಂತವನ್ನು ಸಂಚರಿಸಿ ನೋಡಿರಿ ಎಂದು ಹೇಳಿ ಅವರನ್ನು ಯೆರಿಕೋವಿನಿಂದ ಕಳುಹಿಸಿದನು. ಅವರು ಹೋಗಿ ಆಯಿ ಎಂಬ ಊರನ್ನು ಸಂಚರಿಸಿ ನೋಡಿ


ಫಿಲಿಷ್ಟಿಯರ ಕಾವಲುದಂಡು ವಿುಕ್ಮಾಷಿನ ಕಣಿವೆಯ ಕಡೆಗೆ ಹೊರಟಿತು.


ಅದು ತನ್ನ ಪಾತ್ರವನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ ಯೆಹೂದದಲ್ಲಿಯೂ ನುಗ್ಗಿ ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವದು; ಇಮ್ಮಾನುವೇಲನೇ! ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲದಲ್ಲೆಲ್ಲಾ ಮುತ್ತಿಬಿಡುವವು.


ಸಮಾರ್ಯಕ್ಕೆ ಬಿದ್ದ ಪೆಟ್ಟು ಗಡಸು; ಅದು ಯೆಹೂದಕ್ಕೂ ತಾಕಿದೆ; ನನ್ನ ಜನರ ಆಲೋಚನಾಸ್ಥಾನವಾದ ಯೆರೂಸಲೇವಿುಗೆ ಮುಟ್ಟಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು