Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:32 - ಕನ್ನಡ ಸತ್ಯವೇದವು J.V. (BSI)

32 ಇದೇ ದಿವಸ [ಶತ್ರುಗಳು] ನೋಬಿನಲ್ಲಿ ಬೀಡುಗೊಳ್ಳುವರು; ಚೀಯೋನ್ ನಗರಿಯ ಪರ್ವತದ ಕಡೆಗೆ, ಯೆರೂಸಲೇವಿುನ ಬೆಟ್ಟದ ಕಡೆಗೆ, ಕೈ ಬೀಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇದೇ ದಿನ ಶತ್ರುಗಳು ನೋಬಿನಲ್ಲಿ ಬೀಡುಬಿಡುವರು. ಚೀಯೋನ್ ನಗರಿಯ ಪರ್ವತದ ಕಡೆಗೆ ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅದೇ ದಿನ ಬೀಡುಬಿಡುವರು ಶತ್ರುಗಳು ನೋಬಿನಲ್ಲಿ; ಸಿಯೋನ್ ಬೆಟ್ಟದ ಕಡೆಗೆ, ಜೆರುಸಲೇಮಿನ ಗುಡ್ಡದ ಕಡೆಗೆ ಮುಷ್ಟಿ ತೋರಿಸುತ್ತಿಹರಿದೊ ಆ ದಿಕ್ಕಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಈ ದಿವಸ ನೋಬಿನಲ್ಲಿ ಸೈನ್ಯವು ತಂಗುವದು. ಜೆರುಸಲೇಮಿನ ಪರ್ವತವಾಗಿರುವ ಚೀಯೋನ್ ಪರ್ವತಕ್ಕೆ ವಿರುದ್ಧವಾಗಿ ಯುದ್ಧಮಾಡಲು ಸೈನ್ಯವು ಸಿದ್ಧವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆ ದಿನದಲ್ಲಿ ಅವರು ನೋಬಿನಲ್ಲಿ ಇಳಿದುಕೊಳ್ಳುವರು. ಚೀಯೋನ್ ನಗರಿಯ ಪರ್ವತದ ಕಡೆಗೆ, ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:32
21 ತಿಳಿವುಗಳ ಹೋಲಿಕೆ  

ದಾವೀದನು ನೋಬ್ ಊರಲ್ಲಿದ್ದ ಯಾಜಕನಾದ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಭಯಭಕ್ತಿಯಿಂದ ಎದುರುಗೊಂಡು - ನಿನ್ನ ಜೊತೆಯಲ್ಲಿ ಒಬ್ಬನಾದರೂ ಇಲ್ಲವಲ್ಲಾ! ನೀನು ಒಬ್ಬನೇ ಬಂದದ್ದೇಕೆ ಎಂದು ಅವನನ್ನು ಕೇಳಲು ಅವನು -


ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು ಎಂದು ಹೇಳುತ್ತಾನೆ; ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬದು ನಿಮಗೆ ಗೊತ್ತಾಗುವದು.


ಕನ್ನಿಕೆಯಾಗಿರುವ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ; ಯೆರೂಸಲೇಮ್ ಕುಮಾರ್ತೆಯು ನಿನ್ನ ಹಿಂದೆ ತಲೆಯಾಡಿಸುತ್ತಾಳೆ.


ಆ ದಿನದಲ್ಲಿ ಐಗುಪ್ತವು ಹೆಣ್ಣಾಗಿ ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಕೈಬೀಸುವದರಿಂದ ಭಯಪಟ್ಟು ನಡುಗುವದು.


ಅನಂತರ ಅವನು ಯಾಜಕರ ಪಟ್ಟಣವಾದ ನೋಬಕ್ಕೆ ಹೋಗಿ ಅಲ್ಲಿನ ಸ್ತ್ರೀಪುರುಷರನ್ನೂ ಶಿಶುಬಾಲಕರನ್ನೂ ದನಕುರಿಕತ್ತೆಗಳನ್ನೂ ಕತ್ತಿಯಿಂದ ಸಂಹರಿಸಿದನು.


ಬಿಲ್ಲನ್ನೂ ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಚೀಯೋನ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ ಎಂದು ಯೆಹೋವನು ಅನ್ನುತ್ತಾನೆ.


[ಶತ್ರುಗಳು] ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ ಬೋಳುಬೆಟ್ಟದ ಮೇಲೆ ಧ್ವಜವೆತ್ತಿರಿ, ಕೂಗಿ ಅವರನ್ನು ಕರೆಯಿರಿ, ಕೈಸನ್ನೆಮಾಡಿರಿ.


ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶನಮಾಡುವನು; ಯೂಫ್ರೇಟೀಸ್ ನದಿಯ ಮೇಲೆ ಕೈ ಝಾಡಿಸಿ ತನ್ನ ಬಿಸಿಗಾಳಿಯಿಂದ ಅದನ್ನು ಏಳು ತೊರೆಗಳನ್ನಾಗಿ ಒಡೆದು ಜನರು ಕೆರ ಮೆಟ್ಟಿ ದಾಟುವಂತೆ ಮಾಡುವನು.


ಇಂತಿರಲು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ - ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತ್ಯರು ನಿಮಗೆ ಮಾಡಿದಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನೆತ್ತುವ ಅಶ್ಶೂರ್ಯರಿಗೆ ಭಯಪಡಬೇಡಿರಿ.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಸಕಲದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ಚೀಯೋನ್ ನಗರಿಯೊಂದೇ ಉಳಿದು ದ್ರಾಕ್ಷೇತೋಟದ ಮಂಚಿಕೆಯಂತೆಯೂ ಸವುತೆಯ ಹೊಲದ ಗುಡಸಲಿನ ಹಾಗೂ ಮುತ್ತಿದ ಪಟ್ಟಣದೋಪಾದಿಯಲ್ಲಿಯೂ ಇದೆ.


ಬೇತೇಲ್ ಎಂಬ ಊರುಗಳೂ, ಅನಾತೋತ್,


ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು - ಇಷಯನ ಮಗನು ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ಕಂಡೆನು.


ಅನಾತೋತೇ, ಪ್ರತಿಧ್ವನಿ ಕೊಡು! ಮದ್ಮೇನ ದಿಕ್ಕಾಪಾಲಾಯಿತು; ಗೇಬೀವಿುನ ನಿವಾಸಿಗಳು ವಲಸೆಹೋದರು;


ದೇಶವನ್ನಾಳುವವನಿಗೆ ಕಪ್ಪವಾಗಿ ಕೊಡತಕ್ಕ ಕುರಿಗಳನ್ನು ಅರಣ್ಯದ ಕಡೆಯಿರುವ ಸೆಲದಿಂದ ಚೀಯೋನ್ ನಗರಿಯ ಪರ್ವತಕ್ಕೆ ಕಳುಹಿಸಿರಿ.


ಅರಸನು ಒಂದು ಕೆಲಸವನ್ನು ಆಜ್ಞಾಪಿಸಿ ಇದನ್ನು ಯಾರಿಗೂ ತಿಳಿಸಬಾರದೆಂದು ಕಟ್ಟುಮಾಡಿ ನನ್ನನ್ನು ಕಳುಹಿಸಿದ್ದಾನೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದೇನೆ.


ಈ ಭಕ್ತಿಕಾರ್ಯಗಳಾದನಂತರ ಅಶ್ಶೂರದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಯೆಹೂದದಲ್ಲಿ ನುಗ್ಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆಹಾಕಿದನು.


ದೇಶದೊಳಗೆ ನುಗ್ಗಿದ ಸನ್ಹೇರೀಬನು ಯೆರೂಸಲೇವಿುನ ಮೇಲೆಯೂ ಯುದ್ಧಕ್ಕಾಗಿ ಬರಬೇಕೆಂದಿರುವದು ಹಿಜ್ಕೀಯನಿಗೆ ಗೊತ್ತಾಗಲು


ಅದು ತನ್ನ ಪಾತ್ರವನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ ಯೆಹೂದದಲ್ಲಿಯೂ ನುಗ್ಗಿ ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವದು; ಇಮ್ಮಾನುವೇಲನೇ! ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲದಲ್ಲೆಲ್ಲಾ ಮುತ್ತಿಬಿಡುವವು.


ಆ ಪಟ್ಟಣವು ನನಗೆ ಅರೀಯೇಲಾಗಿಯೇ ಪರಿಣವಿುಸುವದು.


ಸಮಾರ್ಯಕ್ಕೆ ಬಿದ್ದ ಪೆಟ್ಟು ಗಡಸು; ಅದು ಯೆಹೂದಕ್ಕೂ ತಾಕಿದೆ; ನನ್ನ ಜನರ ಆಲೋಚನಾಸ್ಥಾನವಾದ ಯೆರೂಸಲೇವಿುಗೆ ಮುಟ್ಟಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು