ಯೆಶಾಯ 10:33 - ಕನ್ನಡ ಸತ್ಯವೇದವು J.V. (BSI)33 ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸಿ ಢಮ್ಮನೆ ಬೀಳಿಸುವನು; ಉನ್ನತ ವೃಕ್ಷಗಳು ಕಡಿದುಹೋಗುವವು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು. ಉನ್ನತವಾದ ವೃಕ್ಷಗಳು ಕಡಿದು ಕೆಳಗೆ ಬೀಳುವವು. ಎತ್ತರವಾದ ಮರಗಳು ನೆಲದ ಪಾಲಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಇಗೋ, ಪ್ರಭುವಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿ ಮರದ ಕೊಂಬೆಗಳನ್ನು ದುಡುಮ್ಮನೆ ಬೀಳಿಸುವರು. ಉನ್ನತವಾದ ವೃಕ್ಷಗಳನ್ನು ಕಡಿದುಹಾಕುವರು. ಎತ್ತರದ ಮರಗಳನ್ನು ನೆಲಕ್ಕೆ ಉರುಳಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ನಮ್ಮ ಸರ್ವಶಕ್ತನೂ ಒಡೆಯನೂ ಆಗಿರುವ ಯೆಹೋವನು ಆ ದೊಡ್ಡ ಮರವನ್ನು (ಅಶ್ಶೂರವನ್ನು) ಕಡಿದುಹಾಕುವದನ್ನು ನೋಡು! ತನ್ನ ಮಹಾಶಕ್ತಿಯಿಂದ ಆತನು ಮಹಾವೀರರೂ ದೊಡ್ಡಜನರೂ ಎನ್ನದೆ ಎಲ್ಲರನ್ನೂ ಕಡಿದುಹಾಕುವನು. ಇನ್ನುಮೇಲೆ ಅವರು ಮಹಾಜನರೆಂದು ಕರೆಯಲ್ಪಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಇಗೋ, ಕರ್ತದೇವರು ಆಗಿರುವ ಸೇನಾಧೀಶ್ವರ ಯೆಹೋವ ದೇವರು ಭಯಂಕರವಾಗಿ ಕೊಂಬೆಯನ್ನು ಕತ್ತರಿಸುವರು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವುವು, ಎತ್ತರದ ಮರಗಳನ್ನು ನೆಲಕ್ಕೆ ಉರುಳಿಸುವರು. ಅಧ್ಯಾಯವನ್ನು ನೋಡಿ |