ಯೆಶಾಯ 10:34 - ಕನ್ನಡ ಸತ್ಯವೇದವು J.V. (BSI)34 ಎತ್ತರ ಮರಗಳು ನೆಲದ ಪಾಲಾಗುವವು; ಆತನು ಅಡವಿಯ ಪೊದೆಗಳನ್ನು ಕಬ್ಬಿಣದ ಮುಟ್ಟಿನಿಂದ ಕಡಿದುಬಿಡುವನು; ಲೆಬನೋನಿನ ವನವು ಆ ಬಲಿಷ್ಠನಿಂದ ಬಿದ್ದುಹೋಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆತನು ಅಡವಿಯ ಪೊದೆಗಳನ್ನು ಕಬ್ಬಿಣದ ಕೊಡಲಿಯಿಂದ ಕಡಿದುಬಿಡುವನು. ಲೆಬನೋನಿನ ವನವು ಬಲಿಷ್ಠನಾದವನ ಮುಂದೆ ಬಿದ್ದುಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಕಾಡಿನ ಪೊದೆಗಳನ್ನು ಕೊಡಲಿಯಿಂದ ಕಡಿದುಬಿಡುವರು. ಲೆಬನೋನಿನ ಭವ್ಯ ಮರಗಳು ಬಿದ್ದುಹೋಗುವುವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಯೆಹೋವನು ತನ್ನ ಕೊಡಲಿಯಿಂದ ಅಡವಿಯನ್ನು ಕಡಿದುಹಾಕುವನು. ಲೆಬನೋನಿನ ಉನ್ನತ ಮರಗಳು (ಪ್ರಮುಖರು) ಉರುಳಿಬೀಳುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಅವರು ಅಡವಿಯ ಪೊದೆಗಳನ್ನು ಕೊಡಲಿಯಿಂದ ಕಡಿದುಬಿಡುವರು. ಲೆಬನೋನು ಪರಾಕ್ರಮಿಯಾಗಿರುವವರ ಮುಂದೆ ಬಿದ್ದುಹೋಗುವುದು. ಅಧ್ಯಾಯವನ್ನು ನೋಡಿ |
ಅನಿವಿುಷನಾದ ದೇವದೂತನು ಆಕಾಶದಿಂದಿಳಿದು - ವೃಕ್ಷವನ್ನು ಕಡಿದು ಹಾಳುಮಾಡಿರಿ; ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ ತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ, ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಅದಕ್ಕೆ ಏಳು ವರುಷ ಕಳೆಯುವ ತನಕ ಕಾಡುಮೃಗಗಳ ಸಹವಾಸದ ಗತಿಯು ಬರಲಿ ಎಂದು ಸಾರುವದನ್ನು ರಾಜನಾದ ನೀನು ನೋಡಿದಿಯಲ್ಲಾ;