Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:7 - ಕನ್ನಡ ಸತ್ಯವೇದವು J.V. (BSI)

7 ಅದರ ಅಭಿಪ್ರಾಯವೋ ಹಾಗಲ್ಲ; ಅನೇಕಾನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲಮಾಡುವೆನೆಂಬದೇ ಹೊರತು ಈ ಯೋಚನೆಯು ಅದರ ಮನಸ್ಸಿನಲ್ಲಿ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನ ಅಭಿಪ್ರಾಯವೋ, ಹಾಗಲ್ಲ. ಅನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲ ಮಾಡುವೆನೆಂಬುದೇ ಹೊರತು ಈ ಯೋಚನೆಯು ಅವನ ಮನಸ್ಸಿನಲ್ಲಿ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೆ ಅಸ್ಸೀರಿಯದ ಆಲೋಚನೆಯೇ ಬೇರೆ. ಅನೇಕಾನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲಮಾಡಬೇಕೆಂಬ ಯೋಜನೆ ಅದರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಆದರೆ ನಾನು ಅಶ್ಶೂರವನ್ನು ಉಪಯೋಗಿಸುತ್ತೇನೆಂದು ಅದಕ್ಕೆ ತಿಳಿಯದು. ಅಶ್ಶೂರಕ್ಕೆ ತಾನು ನನ್ನ ಕೈಯಲ್ಲಿರುವ ಒಂದು ಸಾಧನವೆಂದು ಗೊತ್ತಿರದು. ಅನೇಕಾನೇಕ ಜನಾಂಗಗಳನ್ನು ನಾಶಮಾಡಲು ಅಶ್ಶೂರವು ಬಯಸುತ್ತದೆ ಮತ್ತು ಅದಕ್ಕಾಗಿ ಯೋಜನೆಗಳನ್ನು ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದರ ಅಭಿಪ್ರಾಯವೋ ಹಾಗಲ್ಲ. ಅದರ ಹೃದಯವು ಈ ಪ್ರಕಾರ ಆಲೋಚಿಸುವುದಿಲ್ಲ. ಜನಾಂಗಗಳನ್ನು ಕಡಿದುಬಿಡುವುದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವುದು ಅದರ ಹೃದಯದ ಉದ್ದೇಶವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:7
13 ತಿಳಿವುಗಳ ಹೋಲಿಕೆ  

ಆದರೆ ದೇವರು ಮೇಲಾಗಬೇಕೆಂದು ಸಂಕಲ್ಪಿಸಿದನು. ಈಗ ಅನುಭವಕ್ಕೆ ಬಂದ ಪ್ರಕಾರವೇ ಅನೇಕ ಪ್ರಾಣಿಗಳಿಗೆ ಸಂರಕ್ಷಣೆಯುಂಟಾಗುವಂತೆ ಮಾಡಿದನು.


ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ ಭವಿಷ್ಯದ್‍ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿಸಿ ಕೊಂದಿರಿ.


ಆತನನ್ನು ದೇವರು ಮರಣವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಯಾಕಂದರೆ ಮರಣವು ಆತನನ್ನು ಹಿಡುಕೊಂಡಿರುವದು ಅಸಾಧ್ಯವಾಗಿತ್ತು.


ಅದು ಅಂದುಕೊಳ್ಳುವದೇನಂದರೆ - ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೆ.


ಇಗೋ, ಕಸ್ದೀಯರ ದೇಶವು! ಈ ಜನಾಂಗವು ನಿರ್ನಾಮವಾಯಿತು; ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು; ಬುರುಜುಗಳನ್ನು ಕಟ್ಟಿಕೊಂಡು ಇದರ ಕೋಟೆಗಳನ್ನು ಕೆಡವಿ ಇದನ್ನು ನಾಶಪಡಿಸಿದರು.


ಅವನು ಸೈನ್ಯಸಮೇತನಾಗಿ ನನಗೋಸ್ಕರ ಸೇವೆಮಾಡಿದ್ದರಿಂದ ಅವನು ಪಟ್ಟ ಶ್ರಮಕ್ಕೆ ಪ್ರತಿಫಲವಾಗಿ ನಾನು ಐಗುಪ್ತ ದೇಶವನ್ನು ಅವನಿಗೆ ಕೊಟ್ಟಿದ್ದೇನೆ; ಇದು ಕರ್ತನಾದ ಯೆಹೋವನ ನುಡಿ.


[ನಿನೆವೆಯೇ,] ಯೆಹೋವನಿಗೆ ವಿರುದ್ಧವಾಗಿ ದುರಾಲೋಚನೆಮಾಡಿ ಕೇಡನ್ನು ಸಂಕಲ್ಪಿಸುವವನು ನಿನ್ನೊಳಗಿಂದ ಹೊರಟಿದ್ದಾನೆ.


ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ, ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ; ಆದದರಿಂದಲೇ ಅವು ಅವರಿಂದ ಹಾಳಾದವು.


ಅದರಿಂದ ಅವನ ಮನಸ್ಸು ಉಬ್ಬಿಕೊಳ್ಳುವದು; ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು