Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:8 - ಕನ್ನಡ ಸತ್ಯವೇದವು J.V. (BSI)

8 ಅದು ಅಂದುಕೊಳ್ಳುವದೇನಂದರೆ - ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಹೇಳುವುದೇನೆಂದರೆ, “ನನ್ನ ಅಧಿಪತಿಗಳೆಲ್ಲಾ ಅರಸರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ನನ್ನ ದಂಡನಾಯಕರೆಲ್ಲ ಅರಸರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಶ್ಶೂರವು ಹೀಗೆ ಹೇಳುತ್ತದೆ: ‘ನನ್ನ ನಾಯಕರೆಲ್ಲಾ ರಾಜರಂತಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ಅವನು, ‘ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:8
11 ತಿಳಿವುಗಳ ಹೋಲಿಕೆ  

ಇದೂ ನಿನಗೆ ಅಸಾಧ್ಯವಾಗುವದಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವದು ಹೇಗೆ? ರಥಾಶ್ವಬಲಗಳ ವಿಷಯವಾಗಿ ಐಗುಪ್ತ್ಯರನ್ನು ನಂಬಿರುತ್ತೀಯೆಂದು ಕಾಣುತ್ತದೆ.


ಅವರ ಮುಖಾಂತರವಾಗಿ ಅವನಿಗೆ - ನೀನು ನಂಬುವ ದೇವರು - ನಾನು ಯೆರೂಸಲೇಮನ್ನು ಅಶ್ಶೂರದ ಅರಸನ ಕೈಗೆ ಒಪ್ಪಿಸುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.


ಅರಸೇ, ನೀನು ರಾಜಾಧಿರಾಜ, ಪರಲೋಕದೇವರು ನಿನಗೆ ರಾಜ್ಯಬಲಪರಾಕ್ರಮ ವೈಭವಗಳನ್ನು ದಯಪಾಲಿಸಿದ್ದಾನೆ;


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಅಶ್ವ, ರಥ, ರಾಹುತ, ಬಹುಜನಪರಿವಾರ ಇವುಗಳಿಂದ ಕೂಡಿದವನನ್ನಾಗಿ ನಾನು ಬಡಗಲಿಂದ ತೂರಿನ ಮೇಲೆ ಬರಮಾಡುವೆನು.


ನನ್ನ ಒಡೆಯನಾದ ಅಶ್ಶೂರದ ಅರಸನೊಂದಿಗೆ ಪಂಥಹಾಕುವದಕ್ಕೆ ನಿನಗೆ ಮನಸ್ಸುಂಟೋ? ಹಾಗಾದರೆ ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ; ನೀನು ಅಷ್ಟು ಮಂದಿ ಸವಾರರನ್ನು ಅವುಗಳ ಮೇಲೆ ಕುಳ್ಳಿರಿಸುವಿಯೋ?


ಅದರ ಅಭಿಪ್ರಾಯವೋ ಹಾಗಲ್ಲ; ಅನೇಕಾನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲಮಾಡುವೆನೆಂಬದೇ ಹೊರತು ಈ ಯೋಚನೆಯು ಅದರ ಮನಸ್ಸಿನಲ್ಲಿ ಇಲ್ಲವೇ ಇಲ್ಲ.


ಕರ್ಕೆಮೀಷಿನ ಗತಿಯು ಕಲ್ನೋವಿಗೂ ಆಯಿತಲ್ಲವೆ, ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಷ್ಟೆ; ದಮಸ್ಕದ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತಲ್ಲಾ.


ಯೆಹೋವನು ಹೀಗನ್ನುತ್ತಾನೆ - ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರವಿುಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ;


ಅದು ಜನಾಂಗಗಳೊಳಗೆ ವಿುಂಡರನ್ನು ಸಂಪಾದಿಸಿದರೂ ಅದನ್ನು ನಾನು ಈಗ ಸೆರೆಕೂಡುವೆನು; ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿಕ್ಕೆ ಆರಂಭವಾಗುವದು.


ದೇವರು ಅವರಿಗೆ ಅಭಯವನ್ನು ಕೊಟ್ಟದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವದು.


ಹೀಗಿರಲು ಆ ವೃಕ್ಷವು ಅಡವಿಯ ಎಲ್ಲಾ ಮರಗಳಿಗಿಂತಲೂ ಅತ್ಯುನ್ನತವಾಗಿತ್ತು; ಅದರ ಕೊಂಬೆಗಳು ನಿಬಿಡವಾಗಿದ್ದವು; ಅಲ್ಲಿ ನೀರಾವರಿಯಿದ್ದ ಕಾರಣ ಅದರ ರೆಂಬೆಗಳು ಉದ್ದವಾಗಿ ಚಾಚಿಕೊಂಡಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು