Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 11:10 - ಕನ್ನಡ ಸತ್ಯವೇದವು J.V. (BSI)

10 ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಮ ಸ್ಥಾನವು ವೈಭವವುಳ್ಳದ್ದಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಸಮಯದಲ್ಲಿ ಇಷಯನ ವಂಶದಿಂದ ಒಬ್ಬ ವಿಶೇಷ ವ್ಯಕ್ತಿಯು ಹುಟ್ಟುವನು. ಆತನು ಒಂದು ಧ್ವಜದಂತಿರುವನು. ಎಲ್ಲಾ ಜನಾಂಗಗಳು ಆತನ ಸುತ್ತಲೂ ಸೇರಿಬರಬೇಕೆಂದು ಈ ಧ್ವಜವು ತೋರಿಸುವುದು. ಆ ಜನಾಂಗಗಳು ತಾವು ಏನು ಮಾಡಬೇಕೆಂದು ಕೇಳುವರು. ಆತನಿರುವ ಸ್ಥಳವು ಮಹಿಮೆಯಿಂದ ತುಂಬುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆ ದಿನದಲ್ಲಿ ಇಷಯನ ವಂಶದಿಂದ ಜನರಿಗೆ ಒಂದು ಬೇರು ಗುರುತಿನ ಧ್ವಜವಾಗಿ ನಿಲ್ಲುವುದು. ಅವರ ವಿಶ್ರಾಂತಿ ಸ್ಥಳವು ಮಹಿಮೆಯುಳ್ಳದ್ದಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 11:10
46 ತಿಳಿವುಗಳ ಹೋಲಿಕೆ  

ಆತನು ಅನ್ಯದೇಶದವರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಯಾದ ಇಸ್ರಾಯೇಲ್ಯರಿಗೆ ಕೀರ್ತಿ, ಅಂದನು.


ಇಷಯನ ಬುಡದಿಂದ ಒಂದು ಚಿಗುರು ಒಡೆಯುವದು, ಅದರ ಬೇರಿನಿಂದ ಹೊರಟ ತಳಿರು ಫಲಿಸುವದು;


ಆದರೆ ನಾನು ಭೂವಿುಯಲ್ಲಿಂದ ಮೇಲಕ್ಕೆ ಎತ್ತಲ್ಪಟ್ಟಾಗ ಎಲ್ಲರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಎಂದು ಹೇಳಿದನು.


ಅನ್ಯಜನರು ಈತನ ಹೆಸರನ್ನು ಕೇಳಿ ನಿರೀಕ್ಷೆಯಿಂದಿರುವರು.


ಇದಲ್ಲದೆ ನಿಮಗೆ ಹೇಳುವದೇನಂದರೆ ಮೂಡಣ ಪಡುವಣ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಎಂಬವರ ಸಂಗಡ ಊಟಕ್ಕೆ ಕೂಡ್ರುವರು;


ಹೀಗೆಂದ ಮಾತುಗಳನ್ನು ಆ ಸುನ್ನತಿಯವರು ಕೇಳಿ ಆಕ್ಷೇಪಣೆ ಮಾಡುವದನ್ನು ಬಿಟ್ಟು - ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ ಎಂದು ದೇವರನ್ನು ಕೊಂಡಾಡಿದರು.


ಯೇಸುವೆಂಬ ನಾನು ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ವಿಷಯದಲ್ಲಿ ನಿಮಗೆ ಸಾಕ್ಷಿಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದವಂಶವೆಂಬ ಬುಡದಿಂದ ಹುಟ್ಟಿದ ಚಿಗುರೂ ಅವನ ಸಂತತಿಯೂ ಉದಯಸೂಚಕವಾದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.


ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವದು; ಇದು ಸೇನಾಧೀಶ್ವರ ಯೆಹೋವನ ನುಡಿ; ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು, ಇದು ಸೇನಾಧೀಶ್ವರ ಯೆಹೋವನ ನುಡಿ.


ಕರ್ತನಾದ ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಜನಾಂಗಗಳಿಗೆ ಕೈಸನ್ನೆಮಾಡಿ ದೇಶಾಂತರಗಳವರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಎದೆಗಪ್ಪಿಕೊಂಡು ಬರುವರು, ನಿನ್ನ ಕುಮಾರ್ತೆಯರನ್ನು ಹೆಗಲ ಮೇಲೆ ಕರತರುವರು.


ಪರಾತ್ಪರನ ಮರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.


ಜನಾಂಗಗಳು ನಿನ್ನ ಬೆಳಕಿಗೆ ನೆರೆಯುವವು, ಅರಸರು ನಿನ್ನಲ್ಲಿನ ಉದಯಪ್ರಕಾಶಕ್ಕೆ ಬರುವರು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.


ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನವು ಇನ್ನೂ ಇರುವಲ್ಲಿ ನಿಮ್ಮೊಳಗೆ ಯಾವನಾದರೂ ಆ ವಾಗ್ದಾನದ ಫಲವನ್ನು ಹೊಂದದೆ ತಪ್ಪುವವನಾದಾನೋ ಎಂದು ನಾವು ಭಯಪಡೋಣ.


ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು ಎಂದು ಹೇಳಿದನು.


ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪ ನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.


ನೀನು ನೋಡಿ ಕಳೆಗೊಳ್ಳುವಿ, ನಿನ್ನ ಹೃದಯವು ಅದರುತ್ತಾ ಉಬ್ಬುವದು; ಏಕಂದರೆ ಸಮುದ್ರವ್ಯಾಪಾರ ಸಮೃದ್ಧಿಯು ನಿನ್ನ ಕಡೆಗೆ ತಿರುಗುವದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವದು.


ಹೀಗಿರಲು ಪಡುವಣವರು ಯೆಹೋವನ ನಾಮಕ್ಕೆ ಹೆದರುವರು, ಮೂಡಣವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ;


ಆತನು ಮೊದಲು - ಇದೇ ನಿಮಗೆ ಆವಶ್ಯಕವಾದ ವಿಶ್ರಾಂತಿ, ಬಳಲಿದವರನ್ನು ವಿಶ್ರಮಗೊಳಿಸಿರಿ, ನಿಮಗೆ ಅನುಕೂಲವಾದ ಉಪಶಮನವು ಇದೇ ಎಂದು ಹೇಳಿದಾಗ ಇವರು ಕೇಳಲೊಲ್ಲದೆ ಹೋದರು.


ಸಾಮಾನ್ಯರ ಗರ್ವದೃಷ್ಟಿಯು ತಗ್ಗಿಹೋಗುವದು, ಮುಖಂಡರ ಅಹಂಕಾರವು ಕುಗ್ಗಿಹೋಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ; ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ.


ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ.


ಆತನು ನಿನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು; ಆತನ ಪಕ್ಕಗಳ ಮರೆಯನ್ನು ಆಶ್ರಯಿಸಿಕೊಳ್ಳುವಿ. ಆತನ ಸತ್ಯತೆಯೇ ನಿನಗೆ ಖೇಡ್ಯವೂ ಗುರಾಣಿಯೂ ಆಗಿದೆ.


ಯೆಹೋವನು ಹೀಗೆ ನುಡಿಯುತ್ತಾನೆ - ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವವು, ಆ ಸನ್ಮಾರ್ಗವು ಎಲ್ಲಿ ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವದು (ಎಂದು ನಾನು ಅಪ್ಪಣೆಕೊಟ್ಟಾಗ) ಅದರಲ್ಲಿ ನಾವು ನಡೆಯುವದೇ ಇಲ್ಲವೆಂದರು.


ಮತ್ತು ಯೆಹೋವನು ನಿಮ್ಮ ಸಂಕಟದಿಂದಲೂ ಕಳವಳದಿಂದಲೂ ಕಠಿನವಾದ ಬಿಟ್ಟಿಯ ಸೇವೆಯಿಂದಲೂ


ಅಳಬೇಡ; ಅಗೋ, ಯೂದಾ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಜಯಹೊಂದಿದನು; ಆತನು ಆ ಸುರುಳಿಯನ್ನೂ ಅದರ ಏಳು ಮುದ್ರೆಗಳನ್ನೂ ಬಿಚ್ಚುವನು ಎಂದು ಹೇಳಿದನು.


ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳುಕೊಳ್ಳತಕ್ಕ ಸ್ಥಳವನ್ನು ನೋಡುವದಕ್ಕೋಸ್ಕರ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿವಸ ಅವರ ಮುಂದಾಗಿ ಹೋಗುತ್ತಿತ್ತು.


ಅವನು ಜನಾಂಗಗಳಿಗೆ ಧ್ವಜವನ್ನೆತ್ತಿ ಇಸ್ರಾಯೇಲ್ಯರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ ಯೆಹೂದದಿಂದ ಚದರಿದವರನ್ನೂ ಭೂವಿುಯ ಚತುರ್ದಿಕ್ಕುಗಳಿಂದಲೂ ಕೂಡಿಸಿಕೊಳ್ಳುವನು.


ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಎತ್ತರಿಸಿರಿ, ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಿಗೆ ಧ್ವಜವನ್ನೆತ್ತಿರಿ!


ಹೌದು, ಅವನೇ ಯೆಹೋವನ ಆಲಯವನ್ನು ಕಟ್ಟಿಸಿ ರಾಜವೈಭವವನ್ನು ತಾಳಿ ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು; ಮತ್ತು ಯಾಜಕನು ತನ್ನ ಸಿಂಹಾಸನದಲ್ಲಿ ಕೂಡ್ರುವನು; ಅವರಿಬ್ಬರೂ ಸಮ್ಮತಿಸಮಾಧಾನಗಳಿಂದಿರುವರು.


ಸಲ್ಮನು ಬೋವಜನನ್ನು ಪಡೆದನು; ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು.


ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು; ನಿನ್ನ ಪ್ರತಾಪವನ್ನು ವರ್ಣಿಸುವರು.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಸಕಲದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ಹೊರಟುಬಂದ ಬಹು ಜನಾಂಗದವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ, ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.


ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ ಜಜ್ಜಿಹೋಗದೆಯೂ [ತನ್ನ ಕಾರ್ಯದಲ್ಲಿ ನಿರತನಾಗಿರುವನು]; ದ್ವೀಪದ್ವೀಪಾಂತರಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು