ಯೆಶಾಯ 11:11 - ಕನ್ನಡ ಸತ್ಯವೇದವು J.V. (BSI)11 ಆ ದಿನದಲ್ಲಿ ಕರ್ತನು ತನ್ನ ಜನಶೇಷವನ್ನು ಬಿಡಿಸಿಕೊಳ್ಳುವದಕ್ಕೆ ಎರಡನೆಯ ಸಾರಿ ಕೈಹಾಕಿ ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್, ಸಮುದ್ರದ ಕರಾವಳಿ, ಈ ಸ್ಥಳಗಳಲ್ಲಿ ಉಳಿದವರನ್ನು ಬರಮಾಡಿಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆ ಸಮಯದಲ್ಲಿ ನನ್ನ ಒಡೆಯನು ಎರಡನೆ ಸಾರಿ ಕೈಚಾಚಿ, ಉಳಿದ ತನ್ನ ಜನರನ್ನು ತೆಗೆದುಕೊಳ್ಳುವನು. ಇವರು ಅಶ್ಶೂರ, ಉತ್ತರ ಈಜಿಪ್ಟ್, ದಕ್ಷಿಣ ಈಜಿಪ್ಟ್, ಇಥಿಯೋಪ್ಯ, ಏಲಾಮ್, ಬಾಬಿಲೋನಿಯ, ಹಮಾಥ್ ಮತ್ತು ಕರಾವಳಿ ಪ್ರದೇಶಗಳಲ್ಲಿರುವ ಎಲ್ಲಾ ಜನಾಂಗಗಳವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿ |