Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 11:13 - ಕನ್ನಡ ಸತ್ಯವೇದವು J.V. (BSI)

13 ಎಫ್ರಾಯೀವಿುನ ಹೊಟ್ಟೇಕಿಚ್ಚು ತೊಲಗುವದು, ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು; ಎಫ್ರಾಯೀಮು ಯೆಹೂದವನ್ನು ಮತ್ಸರಿಸದು, ಯೆಹೂದವು ಎಫ್ರಾಯೀಮನ್ನು ವಿರೋಧಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗುವುದು. ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು. ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದವು ಎಫ್ರಾಯೀಮನ್ನು ವಿರೋಧಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ತೊಲಗುವುದು ಎಫ್ರಯಿಮಿನ ಹೊಟ್ಟೆಕಿಚ್ಚು, ನಿರ್ಮೂಲವಾಗುವುದು ಜುದೇಯದ ವೈರಿಗಳ ಒಳಸಂಚು. ಎಫ್ರಯಿಮ್, ಜುದೇಯವನ್ನು ಮತ್ಸರಿಸದು; ಜುದೇಯ, ಎಫ್ರಯಿಮನ್ನು ವಿರೋಧಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆ ಸಮಯದಲ್ಲಿ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದಕ್ಕೆ ವೈರಿಗಳಿರುವದಿಲ್ಲ ಮತ್ತು ಎಫ್ರಾಯೀಮನಿಗೆ ಯೆಹೂದವು ತೊಂದರೆಯನ್ನು ಮಾಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗಿ, ಯೆಹೂದದ ವಿರೋಧಿಗಳು ಇಲ್ಲದಂತಾಗುವರು. ಹೀಗೆ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚು ಪಡುವುದಿಲ್ಲ; ಯೆಹೂದವು ಎಫ್ರಾಯೀಮಿಗೆ ವಿರೋಧವಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 11:13
8 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಯೆಹೂದವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವದು, ಎರಡೂ ಕಲೆತು ನಾನು ನಿಮ್ಮ ಪಿತೃಗಳಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಬಡಗಣ ಸೀಮೆಯೊಳಗಿಂದ ಬರುವವು.


ಯೆಹೂದ್ಯರೂ ಇಸ್ರಾಯೇಲ್ಯರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು.


ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮು ಮನಸ್ಸೆಯನ್ನು ತಿಂದು ಬಿಡುತ್ತದೆ, ಈ ಎರಡೂ ಯೆಹೂದಕ್ಕೆ ವಿರುದ್ಧವಾಗಿವೆ. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ಯೆಹೋವನು ತಾನು ಆರಿಸಿಕೊಂಡ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದಾನೆ ಎಂದು ಈ ಜನರು ಆಡಿಕೊಳ್ಳುವ ಮಾತು ನಿನ್ನ ಲಕ್ಷ್ಯಕ್ಕೆ ಬರಲಿಲ್ಲವೋ? ಇವರು ಜನಾಂಗವೇ ಅಲ್ಲ ಎನ್ನುವಷ್ಟು ನನ್ನ ಜನರನ್ನು ಅಸಡ್ಡೆಮಾಡುತ್ತಾರಲ್ಲಾ.


ಯೆಹೋವನು ಇಂತೆನ್ನುತ್ತಾನೆ - ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲ್ಯರೂ ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು ತಮ್ಮ ದೇವರಾದ ಯೆಹೋವನನ್ನು ಮರೆಹೊಗುವರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಜನಾಂಗಗಳಲ್ಲಿ ಚದರಿಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ ಎಲ್ಲಾ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ ಆ ಇಸ್ರಾಯೇಲ್ ವಂಶದವರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ಸ್ವದೇಶದಲ್ಲಿ ವಾಸಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು