Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 11:14 - ಕನ್ನಡ ಸತ್ಯವೇದವು J.V. (BSI)

14 ಇವು ಪಡುವಲಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವವು, ಜೊತೆಯಾಗಿ ಮೂಡಣದವರನ್ನು ಸೂರೆಗೊಳ್ಳುವವು; ಎದೋವಿುನ ಮತ್ತು ಮೋವಾಬಿನ ಮೇಲೆ ಕೈಮಾಡುವವು; ಅಮ್ಮೋನ್ಯರು ಇವುಗಳಿಗೆ ಅಧೀನರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಅವರು ಪಶ್ಚಿಮದಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆಮಾಡುವರು. ಎದೋಮಿನ ಮತ್ತು ಮೋವಾಬಿನ ಮೇಲೆ ಕೈಮಾಡುವರು. ಅಮ್ಮೋನಿಯರು ಅವರಿಗೆ ಅಧೀನರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಒಟ್ಟಿಗೆ ಎರಗುವರು ಫಿಲಿಷ್ಟಿಯರ ಮೇಲೆ ಪಶ್ಚಿಮದಲ್ಲಿ; ಜೊತೆಯಾಗಿ ಸೂರೆಮಾಡುವರು ಜನರನ್ನು ಪೂರ್ವದಲ್ಲಿ; ಗೆಲ್ಲುವರು ಎದೋಮ್ ಮೊವಾಬ್ ನಾಡುಗಳನ್ನು; ಅಧೀನವಾಗಿಸುವರು ಅಮೋನ್ಯ ಜನರನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಎಫ್ರಾಯೀಮ್ಯರು ಮತ್ತು ಯೆಹೂದ್ಯರು ಒಟ್ಟುಸೇರಿ ಫಿಲಿಷ್ಟಿಯರನ್ನು ಎದುರಿಸುವರು. ನೆಲದ ಮೇಲೆ ಇರುವ ಸಣ್ಣ ಪ್ರಾಣಿಯನ್ನು ಹಿಡಿಯಲು ಆಕಾಶದಿಂದ ಬರುವ ಹಕ್ಕಿಗಳಂತೆ ಈ ಎರಡು ರಾಷ್ಟ್ರಗಳಿರುವವು. ಅವರು ಒಟ್ಟಾಗಿ ಪೂರ್ವದ ಜನರ ಐಶ್ವರ್ಯವನ್ನು ಕಿತ್ತುಕೊಳ್ಳುವರು. ಎಫ್ರಾಯೀಮ್ ಮತ್ತು ಯೆಹೂದಗಳು ಏದೋಮನ್ನು, ಮೋವಾಬನ್ನು ಮತ್ತು ಅಮ್ಮೋನನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಟಿಯರ ಇಳಿಜಾರು ಪ್ರದೇಶದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆ ಮಾಡುವರು, ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ದಾಳಿಮಾಡುವರು ಮತ್ತು ಅಮ್ಮೋನಿಯರು ಅವರಿಗೆ ಅಧೀನರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 11:14
30 ತಿಳಿವುಗಳ ಹೋಲಿಕೆ  

ಐಗುಪ್ತ್ಯರೂ ಎದೋಮ್ಯರೂ ಯೆಹೂದ್ಯರನ್ನು ಹಿಂಸಿಸಿ ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದರಿಂದ ಐಗುಪ್ತವು ಹಾಳುಬೀಳುವದು, ಎದೋಮು ಬೆಗ್ಗಾಡಾಗುವದು.


ಅಂದಚಂದದ ದೇಶಕ್ಕೂ ನುಗ್ಗುವನು; ಅನೇಕ ಸೀಮೆಗಳು ಅವನಿಂದ ಹಾಳಾಗುವವು; ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು, ಇವರುಗಳು ಅವನ ಕೈಯಿಂದ ತಪ್ಪಿಸಿಕೊಳ್ಳುವರು.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. ಏಳಿರಿ, ಕೇದಾರಿಗೆ ಹೋಗಿ ಮೂಡಣ ದೇಶದವರನ್ನು ಹಾಳುಮಾಡಿರಿ ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.


ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವದು; ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾನಿದ್ದಲ್ಲೇ ತುಳಿಯಲ್ಪಡುವದು.


ನನ್ನ ಜನರು ಎದೋವಿುನ ವಿುಕ್ಕ ಭಾಗವನ್ನೂ ಯೆಹೋವನ ಪ್ರಜೆ ಎನಿಸಿಕೊಂಡಿದ್ದ ಸಕಲ ಜನಾಂಗಗಳನ್ನೂ ಸ್ವಾಧೀನಮಾಡಿಕೊಳ್ಳುವ ಹಾಗೆ ಹಾಳಾದದ್ದನ್ನು ನಾನು ನಿಲ್ಲಿಸಿ ಪೂರ್ವಕಾಲದಲ್ಲಿದ್ದಂತೆ ಅದನ್ನು ತಿರಿಗಿ ಕಟ್ಟಿಸುವೆನು ಎಂಬದಾಗಿ ಈ ಕಾರ್ಯಗಳನ್ನು ನೆರವೇರಿಸುವ ಯೆಹೋವನು ನುಡಿದಿದ್ದಾನೆ.


ಇದಲ್ಲದೆ ನಿಮಗೆ ಹೇಳುವದೇನಂದರೆ ಮೂಡಣ ಪಡುವಣ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಎಂಬವರ ಸಂಗಡ ಊಟಕ್ಕೆ ಕೂಡ್ರುವರು;


ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ನಿವಾಸಿಯೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು.


ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾವಿುಯ ಚೀಯೋನ್ ಎಂದು ಕೊಂಡಾಡುವರು.


ಹೀಗಿರಲು ಪಡುವಣವರು ಯೆಹೋವನ ನಾಮಕ್ಕೆ ಹೆದರುವರು, ಮೂಡಣವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ;


ಸೂರೆಯಾಗದಿದ್ದರೂ ಸೂರೆಮಾಡಿದಿ, ಬಾಧೆಪಡದಿದ್ದರೂ ಬಾಧಿಸಿದಿ; ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ! ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.


ಈಗ ಯೆಹೋವನು ಹೇಳುವದೇನಂದರೆ - ಆಳಿನ ಒಂದೊಂದು ವರುಷ ವಾಯಿದೆಗೆ ಸರಿಯಾದ ಮೂರು ವರುಷಕ್ಕೇ ಮೋವಾಬಿನ ಮಹಿಮೆಯೂ ಅಲ್ಲಿನವರ ದೊಡ್ಡ ಗುಂಪೂ ಹೀನಾಯಕ್ಕೆ ಈಡಾಗುವವು; ಉಳಿದ ಜನವು ಹೆಚ್ಚದೆ ಕೇವಲ ಸ್ವಲ್ಪವಾಗಿಯೇ ಇರುವದು ಎಂಬದೇ.


ಒಬ್ಬಾತನನ್ನು ನೋಡುತ್ತಿದ್ದೇನೆ, ಆತನು ಈಗಿನವನಲ್ಲ; ಆತನು ಕಾಣಿಸುತ್ತಾನೆ, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬವಂಶದವರಲ್ಲಿ ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ; ಇಸ್ರಾಯೇಲ್ಯರಲ್ಲಿ ರಾಜದಂಡ ಹಿಡಿದವನು ಕಂಡುಬಂದಿದ್ದಾನೆ. ಅವನು ಮೋವಾಬ್ಯರ ತಲೆಯನ್ನು ಸೀಳಿಹಾಕಿದ್ದಾನೆ; ಯುದ್ಧವೀರರೆಲ್ಲರನ್ನೂ ಕೆಡವಿ ಬಿಟ್ಟಿದ್ದಾನೆ.


ಇವರು ಇಸ್ರಾಯೇಲ್ಯರನ್ನು ಬಾಯಿತೆರೆದು ನುಂಗಿದ್ದಾರೆ. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಹಾವಿನ ಬೀಜದಿಂದ ಮಹಾ ನಾಗವುಂಟಾಗುವದು, ಆ ಬೀಜದ ಸಂತತಿಯು ಹಾರುವ ಅಗ್ನಿಮಯಸರ್ಪವೇ.


ಮೋವಾಬಿನ ವಿಷಯವಾದ ದೈವೋಕ್ತಿ. ಒಂದು ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿರ್ಮೂಲವಾಯಿತಲ್ಲಾ! ಹೌದು, ಒಂದು ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವೂ ಹಾಳಾಗಿ ನಿರ್ಮೂಲವಾಯಿತು.


ಆಹಾ, ರಕ್ತವರ್ಣದ ಉಡುಪನ್ನುಟ್ಟು ಘನವಸ್ತ್ರಗಳನ್ನು ಧರಿಸಿಕೊಂಡು ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ ಎದೋವಿುನ ಬೊಚ್ರದಿಂದ ಬರುವ ಈತನು ಯಾರು? ಸತ್ಯಾನುಸಾರವಾಗಿ ಮಾತಾಡುವ, ರಕ್ಷಿಸಲು ಸಮರ್ಥನಾದ ನಾನೇ.


ಇದಲ್ಲದೆ ಅಮ್ಮೋನ್ಯರ ಮಧ್ಯದೊಳಗೂ ಮೋವಾಬ್ ಎದೋಮ್ ಮೊದಲಾದ ದೇಶಗಳಲ್ಲಿಯೂ ಚದರಿಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದದಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇವಿುಸಿದ್ದಾನೆಂಬ ವರ್ತಮಾನವನ್ನು ಕೇಳಿ


ಯೆಹೋವನು ಇಂತೆನ್ನುತ್ತಾನೆ - ಇಗೋ, ಮೋವಾಬಿನ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು.


ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋವಿುನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವದು.


ನಾನು ಎದೋವಿುಗೆ ನನ್ನ ಜನರಾದ ಇಸ್ರಾಯೇಲ್ಯರ ಕೈಯಿಂದ ಮುಯ್ಯಿತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತೀಕಾರವು ಎದೋವಿುನ ಅನುಭವಕ್ಕೆ ಬರುವದು; ಇದು ಕರ್ತನಾದ ಯೆಹೋವನ ನುಡಿ.


ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿವೆ, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅವರ ಸವಾರರು ಕುದುರೆಗಳನ್ನು ಕುಣಿದಾಡಿಸುವರು; ದೂರದಿಂದ ಹತ್ತಿಕೊಂಡು ಬರುವರು; ಕೊಳ್ಳೆಗೆ ಆತುರಪಡುವ ಹದ್ದಿನಂತೆ ಹಾರಾಡುವರು.


ಇಸ್ರಾಯೇಲ್ಯರ ದೇವರಾದ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಹೀಗಿರಲು, ನನ್ನ ಜೀವದಾಣೆ, ಸೊದೋವಿುನ ಗತಿಯೇ ಮೋವಾಬಿಗೂ ಆಗುವದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವದು; ಆ ಪ್ರಾಂತಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವವು; ನನ್ನ ಪ್ರಜೆಯಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು, ಅವು ನನ್ನ ಜನಶೇಷದವರಿಗೆ ಸ್ವಾಸ್ತ್ಯವಾಗುವವು.


ಇವರು ಬೀಜ ಬಿತ್ತಿದ ತರುವಾಯ ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಇವರಿಗೆ ವಿರೋಧವಾಗಿ ದಂಡೆತ್ತಿ ಬಂದು ಇಳುಕೊಂಡು


ಆದದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು ಯುದ್ಧಘೋಷಮಾಡುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವದು. ಇದು ಯೆಹೋವನ ನುಡಿ.


ಆ ಕರಾವಳಿಯು ಯೆಹೂದವಂಶಶೇಷದವರ ಪಾಲಾಗುವದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು