Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 12:1 - ಕನ್ನಡ ಸತ್ಯವೇದವು J.V. (BSI)

1 ಆ ದಿನದಲ್ಲಿ ನೀನು ಹೇಳುವದೇನಂದರೆ - ಯೆಹೋವನೇ, ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀಯಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಸಮಯದಲ್ಲಿ ನೀನು ಹೀಗೆನ್ನುವೆ: “ಯೆಹೋವನೇ, ನಾನು ನಿನ್ನನ್ನು ಸ್ತುತಿಸುವೆ! ನೀನು ನನ್ನ ಮೇಲೆ ಕೋಪಿಸಿಕೊಂಡಿರುವೆ. ಆದರೆ ಈಗ ನೀನು ನನ್ನ ಮೇಲೆ ಕೋಪಗೊಳ್ಳಬೇಡ! ನಿನ್ನ ಪ್ರೀತಿಯನ್ನು ನನ್ನ ಮೇಲೆ ತೋರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆ ದಿನದಲ್ಲಿ ನೀನು ಹೇಳುವುದೇನೆಂದರೆ: “ಯೆಹೋವ ದೇವರೇ, ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀವು ನನ್ನ ಮೇಲೆ ಕೋಪಗೊಂಡಿದ್ದರೂ, ಆ ನಿಮ್ಮ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 12:1
55 ತಿಳಿವುಗಳ ಹೋಲಿಕೆ  

ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವದು; ಸಂಜೆಗೆ ದುಃಖವೆಂಬದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ ಮುಂಜಾನೆ ಹರ್ಷಧ್ವನಿಯು ಕೇಳಿಸುವದು.


ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯಪ್ರಾಮಾಣಿಕತೆಗಳನ್ನು ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಗೊಳಿಸುವೆನು.


ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ.


ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವದು.


ಅವರು - ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.


ಯೆಹೋವನು ಚೀಯೋನನ್ನು ಸಂತೈಸೇ ಸಂತೈಸುವನು; ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ ಬೀಳುಭೂವಿುಯನ್ನು ಯೆಹೋವನ ವನದ ಹಾಗೂ ಕಳಕಳಿಸುವಂತೆ ಮಾಡುವನು; ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ, ಇವುಗಳು ಅಲ್ಲಿ ನೆಲೆಯಾಗಿರುವವು.


ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು; ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.


ಮತ್ತು ಯೆಹೋವನು ನಿಮ್ಮ ಸಂಕಟದಿಂದಲೂ ಕಳವಳದಿಂದಲೂ ಕಠಿನವಾದ ಬಿಟ್ಟಿಯ ಸೇವೆಯಿಂದಲೂ


ಆಕಾಶವೇ, ಹರ್ಷಧ್ವನಿಗೈ! ಭೂವಿುಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಕೋಲಾಹಲಮಾಡಿರಿ! ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುತ್ತಿದ್ದಾನೆ.


ಆ ದಿನದಲ್ಲಿ ಜನರು - ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನೇ ಯೆಹೋವನು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ, ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು ಎಂದು ಹೇಳಿಕೊಳ್ಳುವರು.


ಯಾಕಂದರೆ ಇಸ್ರಾಯೇಲ್ಯರನ್ನು ತಳ್ಳುವದರಿಂದ ಲೋಕವು ದೇವರ ಸಂಗಡ ಸಮಾಧಾನವಾಗುವದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದುಬಂದಂತಾಗುವದಲ್ಲವೇ.


ಆ ದಿನದಲ್ಲಿ - ಯೆಹೋವನಿಗೆ ಮೀಸಲು ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮದ ಗತಿಗೆ ಹೇಗೆ ತರಲಿ! ಚೆಬೋಯೀವಿುನಂತೆ ಹೇಗೆ ನಾಶಮಾಡಲಿ! ನನ್ನೊಳಗೆ ಮನಸ್ಸು ತಿರುಗಿತು, ಕರುಳು ತೀರಾ ಮರುಗಿತು.


ತಾಯಿ ಮಗನನ್ನು ಸಂತೈಸುವ ಪ್ರಕಾರ ನಾನು ನಿಮ್ಮನ್ನು ಸಂತೈಸುವೆನು; ಯೆರೂಸಲೇವಿುನಲ್ಲೇ ನಿಮಗೆ ದುಃಖಶಮನವಾಗುವದು.


ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಗೀತವನ್ನು ಹಾಡುವರು - ನಮಗೆ ಬಲವಾದ ಪಟ್ಟಣವಿದೆ. [ಯೆಹೋವನು ತನ್ನ] ರಕ್ಷಣೆಯನ್ನು ಕೋಟೆಯನ್ನಾಗಿಯೂ ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.


ಇದಲ್ಲದೆ ಇಸ್ರಾಯೇಲ್ಯರು ಐಗುಪ್ತ ದೇಶದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಮಾರ್ಗವು ಹೇಗೆ ಸಿದ್ಧವಾಯಿತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿಕೊಂಡು ಬರುವ ಆತನ ಜನಶೇಷಕ್ಕೆ ರಾಜಮಾರ್ಗವು ಸಿದ್ಧವಾಗುವದು.


ಬಹು ಸ್ವಲ್ಪ ಕಾಲದೊಳಗೆ [ನಿಮ್ಮ ಮೇಲಿನ] ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾಗುವದು.


ಸಾಮಾನ್ಯರ ಗರ್ವದೃಷ್ಟಿಯು ತಗ್ಗಿಹೋಗುವದು, ಮುಖಂಡರ ಅಹಂಕಾರವು ಕುಗ್ಗಿಹೋಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಕೈದಿಗಳ [ಕಾಲ] ಕೆಳಗೆ ಮುದುರಿಕೊಂಡು ಹತರಾದವರ ಕೆಳಗೆ ಬಿದ್ದಿರುವದೇ ಇವರ ಗತಿ! ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ಭ್ರಷ್ಟನು ಆತನ ಮುಂದೆ ಬರುವದಿಲ್ಲವೆಂಬದೇ ನಾನು ರಕ್ಷಣೆಯನ್ನು ಹೊಂದುವೆನೆಂಬದಕ್ಕೆ ಆಧಾರವಾಗಿದೆ.


ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.


ನನ್ನ ಗೌರವವನ್ನು ಹೆಚ್ಚಿಸು; ನನಗೆ ಅಭಿಮುಖನಾಗಿ ಸಂತೈಸು.


ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾಕೃಪೆಯಿಂದ ಸೇರಿಸಿಕೊಳ್ಳುವೆನು.


ನಿನ್ನನ್ನು ತ್ಯಜಿಸಿದ್ದು ನನಗೆ ನೋಹನ ಕಾಲದ ಜಲಪ್ರಲಯದಂತಿದೆ; ಇಂಥಾ ಜಲಪ್ರಲಯವು ಭೂವಿುಯನ್ನು ತಿರಿಗಿ ಆವರಿಸುವದಿಲ್ಲವೆಂದು ನಾನು ಹೇಗೆ ಪ್ರಮಾಣಮಾಡಿದೆನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವದಿಲ್ಲ, ಗದರಿಸುವದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವದು; ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನಲ್ಲಾ.


ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದೀ; ನಮ್ಮ ಮೇಲಾದರೋ ರೋಷಗೊಂಡಿದ್ದೀ; ಆದರೂ ನಾವು ಪಾಪವನ್ನು ನಡಿಸುತ್ತಾ ಬಂದೆವು; ಬಹುಕಾಲದಿಂದ ಪಾಪದಲ್ಲಿ ಮುಣುಗಿರುವ ನಮಗೆ ರಕ್ಷಣೆಯಾದೀತೇ?


ನಾನು ಮಾಡುವ ಸೃಷ್ಟಿಕಾರ್ಯದಲ್ಲಿಯೇ ಹರ್ಷಗೊಂಡು ಸದಾ ಉಲ್ಲಾಸಿಸಿರಿ; ಆಹಾ, ನಾನು ಯೆರೂಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಯೂ ಅದರ ಜನರನ್ನು ಹರ್ಷಭರಿತರನ್ನಾಗಿಯೂ ಮಾಡುವೆನು.


ಅವುಗಳೊಳಗಿಂದ ಸ್ತೋತ್ರವೂ ವಿನೋದಪಡುವವರ ಧ್ವನಿಯೂ ಕೇಳಿಸುವವು; ನಾನು ಆ ಜನರನ್ನು ಹೆಚ್ಚಿಸುವೆನು, ಇನ್ನು ಕೊಂಚವಾಗಿರರು, ಅವರನ್ನು ಘನಪಡಿಸುವೆನು, ಇನ್ನು ಹೀನರಾಗಿರರು.


ಇಂದಿನಿಂದಲೋ ಈ ಜನಶೇಷದವರ ವಿಷಯದಲ್ಲಿ ನಾನು ಪೂರ್ವಕಾಲದಲ್ಲಿ ಇದ್ದಂತೆ ಇರೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ, ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನುಂಟುಮಾಡುವವು; ಹೀಗಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.


ಇದಲ್ಲದೆ ಎಜ್ರನು ಅವರಿಗೆ - ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿರಿ; ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಭಾಗಗಳನ್ನು ಕಳುಹಿಸಿರಿ. ಈ ದಿನವು ನಮ್ಮ ಕರ್ತನಿಗೆ ಪ್ರತಿಷ್ಠಿತ ದಿನವಾಗಿರುವದರಿಂದ ವ್ಯಸನಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಆಶ್ರಯವಾಗಿದೆ ಅಂದನು.


ನಿನ್ನ ಕಷ್ಟವನ್ನು ಮರೆತುಬಿಡುವಿ; ಹರಿದುಹೋದ ನೀರನ್ನೋ ಎಂಬಂತೆ ಅದನ್ನು ಜ್ಞಾಪಿಸಿಕೊಳ್ಳುವಿ.


ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು.


ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; ನನ್ನ ಹಗೆಗಾರರು ನೋಡಿ - ಯೆಹೋವನು ನೆರವಾಗಿ ಇವನನ್ನು ಸಂತೈಸಿದ್ದಾನೆಂದು ನಾಚಿಕೆಪಡಲಿ.


ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಕಟ್ಟುವರು, ಅವರ ಅರಸರು ನಿನ್ನನ್ನು ಸೇವಿಸುವರು; ನನ್ನ ಕೋಪದಿಂದ ನಿನ್ನನ್ನು ಹೊಡೆದುಬಿಟ್ಟು ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ.


ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು; ಯುವಕರೂ ವೃದ್ಧರೂ ಜೊತೆಯಾಗಿ ಹರ್ಷಿಸುವರು; ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನುಂಟುಮಾಡಿ ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು.


ಹೀಗಿರಲು ಯೆಹೋವನು ಇಂತೆನ್ನುತ್ತಾನೆ - ನಾನು ಕನಿಕರವುಳ್ಳವನಾಗಿ ಯೆರೂಸಲೇವಿುಗೆ ಹಿಂದಿರುಗಿದ್ದೇನೆ; ನನ್ನ ಆಲಯವು ಅಲ್ಲಿ ಕಟ್ಟಲ್ಪಡುವದು; ಯೆರೂಸಲೇವಿುನಲ್ಲಿ ನೂಲು ಎಳೆಯಲ್ಪಡುವದು; ಇದು ಸೇನಾಧೀಶ್ವರ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು