Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:10 - ಕನ್ನಡ ಸತ್ಯವೇದವು J.V. (BSI)

10 ಆಕಾಶದ ತಾರೆಗಳೂ ನಕ್ಷತ್ರರಾಶಿಗಳೂ ಬೆಳಗವು, ಸೂರ್ಯನು ಮೂಡುತ್ತಲೇ ಕತ್ತಲಾಗುವನು, ಚಂದ್ರನು ಪ್ರಕಾಶಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಕಾಶದ ತಾರೆಗಳೂ, ನಕ್ಷತ್ರ ರಾಶಿಗಳೂ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ಪ್ರಕಾಶಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಕಾಶದ ತಾರೆಗಳು, ನಕ್ಷತ್ರಗಳು ಬೆಳಗವು, ಸೂರ್ಯನು ಅಂಧಕಾರಮಯನಾಗುವನು, ಚಂದ್ರನು ಕಾಂತಿಹೀನನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಕಾಶವು ಕತ್ತಲಾಗುವದು; ಸೂರ್ಯ, ಚಂದ್ರ, ನಕ್ಷತ್ರಾದಿಗಳು ಪ್ರಕಾಶವನ್ನು ಕಳೆದುಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ, ಆಕಾಶದ ನಕ್ಷತ್ರಗಳು ಮತ್ತು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:10
22 ತಿಳಿವುಗಳ ಹೋಲಿಕೆ  

ಆ ದಿನಗಳ ಸಂಕಟವು ತೀರಿದಕೂಡಲೆ ಸೂರ್ಯನು ಕತ್ತಲಾಗಿಹೋಗುವನು, ಚಂದ್ರನು ಬೆಳಕುಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.


ಇದಲ್ಲದೆ ಆ ದಿನಗಳಲ್ಲಿ ಆ ಸಂಕಟ ತೀರಿದ ಮೇಲೆ ಸೂರ್ಯನು ಕತ್ತಲಾಗಿ ಹೋಗುವನು;


ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ನಾಲ್ಕನೆಯ ದೇವದೂತನು ತುತೂರಿಯನ್ನೂದಿದಾಗ ಸೂರ್ಯ ಚಂದ್ರ ನಕ್ಷತ್ರಗಳೊಳಗೆ ಮೂರರಲ್ಲಿ ಒಂದು ಭಾಗವು ಬಡಿಯಲ್ಪಟ್ಟು ಕತ್ತಲಾಯಿತು. ಆದದರಿಂದ ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು. ರಾತ್ರಿಯು ಹಾಗೆಯೇ ಆಯಿತು.


ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೂವಿುಯ ಮೇಲೆ ಸಮುದ್ರದ ಮತ್ತು ತೆರೆಗಳ ಘೋಷದ ನಿವಿುತ್ತವಾಗಿ ಜನಗಳಿಗೆ ದಿಕ್ಕು ಕಾಣದೆ ಸಂಕಟವು ಉಂಟಾಗುವದು.


ಸೂರ್ಯಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಯನ್ನು ಅಡಗಿಸಿಕೊಳ್ಳುತ್ತವೆ.


ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರ ಮೇಲೆ ಗುರುಗುಟ್ಟುವರು; ದೇಶದಲ್ಲಿಯೋ, ಆಹಾ, ಅಂಧಕಾರವೂ ವ್ಯಾಕುಲವೂ ತುಂಬಿರುವವು, ಮೋಡ ಕವಿದು ಬೆಳಕು ಕತ್ತಲಾಗುವದು.


ಅವುಗಳ ಆಗಮನದಿಂದ ಭೂವಿುಯು ಕಂಪಿಸುತ್ತದೆ, ಆಕಾಶಮಂಡಲವು ನಡುಗುತ್ತದೆ, ಸೂರ್ಯಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಯನ್ನು ಅಡಗಿಸಿಕೊಳ್ಳುತ್ತವೆ;


ಮತ್ತು ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇವಿುನೊಳಗೆ ಆಳುವನಷ್ಟೆ. ಆತನ [ಪರಿವಾರದ] ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವದು.


ಆ ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸೈನ್ಯವನ್ನೂ ಭೂಮಂಡಲದ ನೆಲದೊಡೆಯರನ್ನೂ ದಂಡಿಸುವನು.


ಹುಟ್ಟಬೇಡವೆಂದು ಆತನು ಅಪ್ಪಣೆಕೊಟ್ಟರೆ ಸೂರ್ಯನು ಹುಟ್ಟುವದಿಲ್ಲ; ನಕ್ಷತ್ರಗಳನ್ನು ಮುಚ್ಚಿಟ್ಟು ಮುದ್ರೆಹಾಕುತ್ತಾನೆ.


ಆ ಕಷ್ಟದ ದಿನಗಳಲ್ಲಿ ಸೂರ್ಯನೂ ಬೆಳಕೂ ಚಂದ್ರನೂ ನಕ್ಷತ್ರಗಳೂ ಮೊಬ್ಬಾಗುವವು; ಮಳೆಯಾದ ಮೇಲೆಯೂ ಮೋಡಗಳು ಮತ್ತೆ ಬರುವವು.


ಕಸ್ದೀಯರ ನಗರಿಯೇ, ಮೌನವಾಗಿ ಕೂತುಕೋ, ಕತ್ತಲೊಳಗೆ ಹೊಗು, ನೀನು ಇನ್ನು ರಾಜ್ಯಗಳ ರಾಣಿ ಎನಿಸಿಕೊಳ್ಳೆ.


ಆಕಾಶಕ್ಕೆ ಅಂಧಕಾರವನ್ನು ಹೊದಿಸಿ ಗೋಣಿತಟ್ಟಿನ ಮುಸುಕನ್ನು ಹಾಕುತ್ತೇನೆ.


ಯೆಹೋವನ ದಿನವು ಕತ್ತಲೆಯೇ ಸರಿ, ಬೆಳಕಲ್ಲವಲ್ಲಾ; ಹೌದು, ಯಾವ ವಿುಣುಕೂ ಇಲ್ಲದ ಗಾಢಾಂಧಕಾರವೇ.


ಆದರೆ ತುಂಬಿತುಳುಕುವ ಜಲಪ್ರವಾಹದಿಂದಲೋ ಎಂಬಂತೆ ನಿನೆವೆಯ ಸ್ಥಾನವನ್ನು ತೀರಾ ಹಾಳುಮಾಡಿ ತನ್ನ ವಿರೋಧಿಗಳನ್ನು ಹಿಂದಟ್ಟಿ ಅಂಧಕಾರಕ್ಕೆ ತಳ್ಳುವನು.


ಆ ದಿನದಲ್ಲಿ ಬೆಳಕಿರದು, ಜ್ಯೋತಿಗಳು ಉಡುಗಿಹೋಗುವವು, ಇಂಥಾ ದಿನವು ಒಂದೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು