Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:11 - ಕನ್ನಡ ಸತ್ಯವೇದವು J.V. (BSI)

11 ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲವನ್ನೂ ತಿನ್ನಿಸಿ ಸೊಕ್ಕಿದವರ ಸೊಕ್ಕನ್ನು ಅಡಗಿಸಿ ಭಯಂಕರರ ಹೆಮ್ಮೆಯನ್ನು ತಗ್ಗಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಲೋಕದವರಿಗೆ ಪಾಪದ ಫಲವನ್ನೂ ದುರುಳರಿಗೆ ದುಷ್ಕೃತ್ಯಗಳ ಫಸಲನ್ನೂ ತಿನ್ನಿಸುವೆನು. ಸೊಕ್ಕಿದವನ ಕೊಬ್ಬನ್ನು ಕರಗಿಸುವೆನು. ಬಲಾತ್ಕಾರ ಮಾಡುವವರ ಹೆಮ್ಮೆಯನ್ನು ಅಡಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರು ಹೇಳುವುದೇನೆಂದರೆ: “ಈ ಲೋಕಕ್ಕೆ ನಾನು ಕೆಡುಕನ್ನು ಉಂಟುಮಾಡುವೆನು. ದುಷ್ಟಜನರನ್ನು ಅವರ ಪಾಪಗಳಿಗಾಗಿ ನಾನು ಶಿಕ್ಷಿಸುವೆನು. ಅಹಂಕಾರಿಗಳು ಗರ್ವವನ್ನು ಕಳೆದುಕೊಳ್ಳುವಂತೆ ಮಾಡುವೆನು; ಕೀಳುಜನರ ಹೊಗಳಿಕೆಗಳನ್ನು ನಿಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರ ಕೆಟ್ಟ ಕಾರ್ಯಗಳಿಗೋಸ್ಕರವೂ, ದುಷ್ಟರ ಅಪರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸುವೆನು, ಗರ್ವಿಷ್ಠರ ಅಹಂಕಾರವನ್ನು ನಿಲ್ಲಿಸಿಬಿಡುವೆನು. ಭಯಂಕರವಾದವರ ಹೆಮ್ಮೆಯನ್ನು ತಗ್ಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:11
30 ತಿಳಿವುಗಳ ಹೋಲಿಕೆ  

ಸಾಮಾನ್ಯರ ಗರ್ವದೃಷ್ಟಿಯು ತಗ್ಗಿಹೋಗುವದು, ಮುಖಂಡರ ಅಹಂಕಾರವು ಕುಗ್ಗಿಹೋಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಕುಲಹೀನರು ಬೊಗ್ಗುವರು, ಕುಲೀನರು ಕುಗ್ಗುವರು, ಉನ್ನತರ ದೃಷ್ಟಿಯು ತಗ್ಗುವದು.


ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂವಿುಯು ತನ್ನಲ್ಲಿ ಇಂಗಿದ್ದ ರಕ್ತವನ್ನು ವ್ಯಕ್ತಗೊಳಿಸುವದು, ತನ್ನ ನಿವಾಸಿಗಳಲ್ಲಿ ಹತರಾಗಿದ್ದವರನ್ನು ಇನ್ನು ಮರೆಮಾಜದು.


ಪಿತೃಗಳ ಅಧರ್ಮದ ನಿವಿುತ್ತ ಇವನ ಮಕ್ಕಳಿಗೂ ವಧ್ಯಸ್ಥಾನವನ್ನು ಸಿದ್ಧಮಾಡಿರಿ! ಅವರು ತಲೆಯೆತ್ತಿ ಲೋಕವನ್ನು ವಶಪಡಿಸಿಕೊಂಡು ಭೂಮಂಡಲದ ಮೇಲೆಲ್ಲಾ ಪಟ್ಟಣಗಳನ್ನು ಕಟ್ಟಿಕೊಳ್ಳದಿರಲಿ!


ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು, ಲೋಕದ ದೀನರಿಗೋಸ್ಕರ ಧರ್ಮವಾಗಿ ನಿರ್ಣಯಿಸುವನು; ಲೋಕವನ್ನು ತನ್ನ ಬಾಯ ದಂಡದಿಂದ ದಂಡಿಸುವನು, ದುಷ್ಟರನ್ನು ತನ್ನ ಬಾಯುಸುರಿನಿಂದ ಕೊಲ್ಲುವನು.


ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ಲಭಿಸುವದಲ್ಲವೆ.


ಸಾಮಾನ್ಯರ ಗರ್ವವು ಕುಗ್ಗುವದು, ಮುಖಂಡರ ಅಹಂಕಾರವೂ ತಗ್ಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಕುಗ್ಗಿಸಿ ದುಷ್ಟರನ್ನು ತಟ್ಟನೆ ಕೆಡವಿಬಿಡು.


ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.


ಜನಗಳನ್ನು ಕೋಪೋದ್ರೇಕದಿಂದ ಎಡೆಬಿಡದೆ ಹೊಡೆದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ


ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗೆ ಗೋಚರಪಡಿಸಿದ್ದೇನಂದರೆ - ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ ಎಂಬದೇ.


ಗರ್ವದ ಸಕಲ ವೈಭವವನ್ನು ಹೊಲಸುಮಾಡಬೇಕೆಂತಲೂ ಲೋಕಮಾನ್ಯರೆಲ್ಲರನ್ನು ಅವಮಾನ ಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.


ಆ ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸೈನ್ಯವನ್ನೂ ಭೂಮಂಡಲದ ನೆಲದೊಡೆಯರನ್ನೂ ದಂಡಿಸುವನು.


ಆದಕಾರಣ ಬಲಿಷ್ಠವಾದ ಜನಾಂಗವು ನಿನ್ನನ್ನು ಘನಪಡಿಸುವದು, ಭಯಂಕರ ಜನರ ಪಟ್ಟಣವು ನಿನಗೆ ಅಂಜುವದು.


ಗುಂಪುಗುಂಪಾಗಿ ಕೂಡಿರುವ ನಿನ್ನ ಶತ್ರುಗಳು ಸೂಕ್ಷ್ಮ ದೂಳಿಯಂತೆಯೂ ತಂಡೋಪತಂಡವಾಗಿ ಬಂದಿರುವ ಭಯಂಕರರು ಹಾರಿಹೋಗುವ ಹೊಟ್ಟಿನ ಹಾಗೂ ಆಗುವರು; ತಟ್ಟನೆ ಕ್ಷಣದಲ್ಲಿ ಲಯಹೊಂದುವರು.


ಏಕಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು,


ಇವರೂ ಇವರ ಪಿತೃಗಳೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ ನನ್ನನ್ನು ಹೀನೈಸಿ ನಡಿಸಿದ ಅಪರಾಧಗಳ ಪ್ರತಿಫಲವನ್ನು ಇವರ ಮಡಲಿಗೆ ಹಾಕುವೆನು; ಹೌದು, ಇವರ ಕಾರ್ಯದ ಫಲವನ್ನು ಅಳತೆಗೆ ಸರಿಯಾಗಿ ಮೊಟ್ಟಮೊದಲೇ ಇವರ ಮಡಲಿಗೆ ಸುರಿಯುವೆನು ಎಂದು ಯೆಹೋವನು ಹೇಳುತ್ತಾನೆ.


ಮೋವಾಬ್ಯರಿಗೆ ಬಹು ಸೊಕ್ಕೇರಿದೆ ಎಂಬ ಅವರ ಹೆಮ್ಮೆಯ ಸುದ್ದಿಯೂ ಅವರ ಡಂಭ, ಅಹಂಕಾರ, ಸ್ವಾಭಿಮಾನ ಸ್ವಪ್ರತಿಷ್ಠೆ ಇವುಗಳ ಸಮಾಚಾರವೂ ನಮ್ಮ ಕಿವಿಗೆ ಬಿದ್ದಿವೆ.


ಇಗೋ, ಆ ದುಷ್ಟನ ಅಂತರಾತ್ಮವು ಉಬ್ಬಿಕೊಂಡಿದೆ, ಯಥಾರ್ಥವಲ್ಲ; ನೀತಿವಂತನೋ ತನ್ನ ನಂಬಿಕೆಯಿಂದಲೇ ಬದುಕುವನು.


ಶಿಷ್ಟನೇ ಭೂವಿುಯಲ್ಲಿ ತನ್ನ ಕ್ರಿಯಾಫಲವನ್ನು ಅನುಭವಿಸುವಲ್ಲಿ ದುಷ್ಟನೂ ಪಾಪಿಯೂ ಅನುಭವಿಸುವರು ಎಂದು ಹೇಳಬೇಕಾಗಿಲ್ಲ.


ಸೇನಾಧೀಶ್ವರನಾದ ಯೆಹೋವನ [ನ್ಯಾಯನಿರ್ಣಯ] ದಿವಸವು ಗರ್ವದಿಂದ ಹೆಚ್ಚಿಕೊಂಡಿರುವ ಸಮಸ್ತಕ್ಕೂ ಸಂಭವಿಸುವದು; ಆಗ ಅದೆಲ್ಲಾ ತಗ್ಗುವದು.


[ಮೇಘವು] ಒಣನೆಲದ ಕಾವನ್ನು ಆರಿಸುವಂತೆ ನೀನು ಅನ್ಯರ ಗದ್ದಲವನ್ನು ಅಣಗಿಸುವಿ; ಮೋಡದ ನೆರಳಿನಿಂದ ಬಿಸಿಲು ಹೇಗೋ ಹಾಗೆಯೇ ನಿನ್ನಿಂದ ಭೀಕರರ ಉತ್ಸಾಹಗಾನವು ನಿಂತುಹೋಗುವದು.


ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. ಆಗ ನಾನು ಪರಾತ್ಪರನನ್ನು ಕೊಂಡಾಡಿ ಸದಾ ಜೀವಿಸುವಾತನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ನಿಲ್ಲುವದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು