Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:17 - ಕನ್ನಡ ಸತ್ಯವೇದವು J.V. (BSI)

17 ಇಗೋ, ಅವರಿಗೆ ವಿರುದ್ಧವಾಗಿ ಮೇದ್ಯರನ್ನು ಎಬ್ಬಿಸುವೆನು; ಇವರು ಬೆಳ್ಳಿಯನ್ನು ಲಕ್ಷಿಸರು, ಬಂಗಾರವನ್ನು ಪ್ರೀತಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇಗೋ, ಅವರ ವಿರುದ್ಧವಾಗಿ ಮೇದ್ಯರನ್ನು ಎಬ್ಬಿಸುವೆನು. ಇವರು ಬೆಳ್ಳಿಯನ್ನು ಲಕ್ಷಿಸರು. ಬಂಗಾರವನ್ನು ಪ್ರೀತಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಇಗೋ, ಬಾಬಿಲೋನಿಯದ ಜನರಿಗೆ ವಿರುದ್ಧವಾಗಿ ಮೇದ್ಯರನ್ನು ಎತ್ತಿಕಟ್ಟುವೆನು. ಇವರು ಬೆಳ್ಳಿಬಂಗಾರಕ್ಕೆ ಮಾರುಹೋಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದೇವರು ಹೇಳುವುದೇನೆಂದರೆ: “ಮೇದ್ಯರ ಸೈನ್ಯವು ಬಾಬಿಲೋನನ್ನು ಮುತ್ತುವಂತೆ ಮಾಡುವೆನು. ಮೇದ್ಯರ ಸೈನ್ಯಕ್ಕೆ ಬೆಳ್ಳಿಬಂಗಾರ ಸುರಿಸಿದರೂ ಅವರು ಬಾಬಿಲೋನಿನ ಮೇಲೆ ಧಾಳಿ ಮಾಡುವದನ್ನು ನಿಲ್ಲಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇಗೋ, ಬೆಳ್ಳಿಯನ್ನು ಲಕ್ಷಿಸದೆ, ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧವಾಗಿ ನಾನು ಎಬ್ಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:17
14 ತಿಳಿವುಗಳ ಹೋಲಿಕೆ  

ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರಿಸಿದ್ದಾನೆ; ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ; [ಮೇದ್ಯರೇ,] ಬಾಣಗಳನ್ನು ಮಸೆಯಿರಿ, ಸನ್ನದ್ಧರಾಗಿರಿ!


ನಾನು ಬಡಗಲಿಂದ ಒಬ್ಬನನ್ನು ಎಬ್ಬಿಸಿ ಕರತಂದಿದ್ದೇನೆ, ನನ್ನ ನಾಮವನ್ನು ಪ್ರಚುರಪಡಿಸತಕ್ಕವನು ಮೂಡಲಿಂದ ಬಂದಿದ್ದಾನೆ; ಅವನು ಉಪರಾಜರನ್ನು ಮಣ್ಣೇ ಎಂದು ಭಾವಿಸಿ ಮೇಲೆ ಬಿದ್ದು ಕುಂಬಾರನು ಜೇಡಿಯನ್ನು ತುಳಿಯುವ ಹಾಗೆ ತುಳಿಯುವನು.


ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ; ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತು! ನಿಮ್ಮ ನಿಟ್ಟುಸುರನ್ನು ನಿಲ್ಲಿಸಿಬಿಟ್ಟಿದ್ದೇನೆ.


ಇಗೋ, ನಾನು ಮಹಾ ಜನಾಂಗಗಳ ಸಮೂಹವನ್ನು ಎಬ್ಬಿಸಿ ಬಡಗಲಿಂದ ಬಾಬೆಲಿನ ಮೇಲೆ ಬೀಳಮಾಡುವೆನು; ಅವು ಬಾಬೆಲಿಗೆ ವಿರುದ್ಧವಾಗಿ ವ್ಯೂಹ ಕಟ್ಟಿ ಅದನ್ನು ಸ್ಥಳದೊಳಗಿಂದ ಕಿತ್ತುಬಿಡುವವು; ಅವುಗಳ ಬಾಣಗಳು ಸುಮ್ಮನೆ ಹಿಂದಿರುಗದ ಯುದ್ಧಪ್ರವೀಣ ಶೂರನಂತಿರುವವು.


ಅದು ಹೋಶೇಯನ ಆಳಿಕೆಯ ಒಂಭತ್ತನೆಯ ವರುಷದಲ್ಲಿ ಅವನ ಸ್ವಾಧೀನವಾಗಲು ಅವನು ಎಲ್ಲಾ ಇಸ್ರಾಯೇಲ್ಯರನ್ನು ಅಶ್ಶೂರ್‍ದೇಶಕ್ಕೆ ಒಯ್ದು ಹಲಹು ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಜಿಮ್ರಿಯ ಎಲ್ಲಾ ಅರಸರು, ಏಲಾವಿುನ ಎಲ್ಲಾ ಅರಸರು,


ಒಂದು ಜನಾಂಗವು ಬಡಗಲಿಂದ ಬಾಬೆಲಿನ ಮೇಲೆ ಬರುತ್ತಿದೆ, ಅದು ಬಾಬೆಲ್ ದೇಶವನ್ನು ಹಾಳುಮಾಡುವದು, ಅಲ್ಲಿ ಯಾರೂ ವಾಸಿಸರು, ಪಶುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.


ಆದಕಾರಣ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು; ಇದು ಯೆಹೋವನ ನುಡಿ.


ಬಿಲ್ಲನ್ನೂ ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ ಎಂದು ಯೆಹೋವನು ಅನ್ನುತ್ತಾನೆ.


ಇದರ ಅರ್ಥವು ಹೀಗಿದೆ ಮೆನೇ ಅಂದರೆ ದೇವರು ನಿನ್ನ ಆಳಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು