Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:3 - ಕನ್ನಡ ಸತ್ಯವೇದವು J.V. (BSI)

3 ನಾನು ಆರಿಸಿಕೊಂಡವರಿಗೆ ಅಪ್ಪಣೆಮಾಡಿದ್ದೇನೆ. ಹೌದು, ಉತ್ಸಾಹದಿಂದ ಮೆರೆಯುವ ಆ ನನ್ನ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರನ್ನು ಕರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಆರಿಸಿಕೊಂಡ ಪರಿಶುದ್ಧರಿಗೆ ಅಪ್ಪಣೆ ಕೊಟ್ಟಿದ್ದೇನೆ. ಹೌದು, ನನ್ನ ಜಯದಲ್ಲಿ ಹೆಮ್ಮೆಪಡುವವರು, ನನ್ನ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಯ್ಕೆಯಾದವರಿಗೆ ಅಪ್ಪಣೆಮಾಡಿದ್ದೇನೆ: ಹೌದು, ಹೆಮ್ಮೆಯಿಂದ ಮೆರೆಯುವ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆನೀಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ನಾನು ಅವರನ್ನು ಆ ಜನರಿಂದ ಪ್ರತ್ಯೇಕಿಸಿದ್ದೇನೆ; ನಾನೇ ಅವರಿಗೆ ಆಜ್ಞಾಪಿಸುವೆನು. ನಾನು ಕೋಪಗೊಂಡಿರುವುದರಿಂದ ಆ ಜನರನ್ನು ಶಿಕ್ಷಿಸಲು ನನ್ನ ಉತ್ತಮವಾದ ಜನರನ್ನು ಒಟ್ಟಾಗಿ ಸೇರಿಸಿದ್ದೇನೆ. ಉತ್ಸಾಹಶಾಲಿಗಳಾದ ನನ್ನ ಜನರ ಬಗ್ಗೆ ನಾನು ಹೆಮ್ಮೆಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ, ನನ್ನ ಜಯದಲ್ಲಿ ಉಲ್ಲಾಸಿಸುವವರನ್ನೂ, ನನ್ನ ಶೂರರನ್ನೂ ಸಹ ನನ್ನ ಕೋಪವನ್ನು ತೆಗೆದುಕೊಂಡು ಹೋಗಲು ಕರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:3
20 ತಿಳಿವುಗಳ ಹೋಲಿಕೆ  

ಸುತ್ತಣ ಜನಾಂಗಗಳೇ, ತ್ವರೆಪಡಿರಿ, ನೀವೆಲ್ಲರೂ ಬನ್ನಿರಿ, ಕೂಡಿಕೊಳ್ಳಿರಿ; ಯೆಹೋವನೇ, ನಿನ್ನ ಶೂರರನ್ನು [ರಣರಂಗಕ್ಕೆ] ಇಳಿಸು.


ಪರಲೋಕವೇ, ಆನಂದಪಡು; ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ, ಇವಳು ನಿಮಗೆ ಅನ್ಯಾಯಮಾಡಿದ್ದಕ್ಕಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದರಿಂದ ಆನಂದಪಡಿರಿ ಎಂದು ಆ ಶಬ್ದ ಹೇಳಿತು.


ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ; ಕಾನಾನಿನ ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಅಪ್ಪಣೆಕೊಟ್ಟಿದ್ದಾನೆ;


ಇಸ್ರಾಯೇಲ್ಯರು ತಮ್ಮ ಸೃಷ್ಟಿಕರ್ತನಲ್ಲಿ ಹೆಚ್ಚಳಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ.


ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ ಅವರನ್ನು ಭೂಲೋಕದ ಅಂಚಿನಲ್ಲಿಂದ ಸಿಳ್ಳುಹಾಕಿ ಕರೆಯುವನು; ಇಗೋ, ತ್ವರೆಪಟ್ಟು ವೇಗವಾಗಿ ಬರುತ್ತಾರೆ!


ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.


ನಿಮ್ಮ ಎದೆಯು ಕುಂದದಿರಲಿ, ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಯು ನಿಮ್ಮನ್ನು ಹೆದರಿಸದಿರಲಿ; ಒಂದು ವರುಷ ಒಂದು ಸುದ್ದಿಯು, ಮತ್ತೊಂದು ವರುಷ ಮತ್ತೊಂದು ಸುದ್ದಿಯು ಹರಡುತ್ತಿರುವವು; ಬಲಾತ್ಕಾರವು ದೇಶದಲ್ಲಿ ಪ್ರಬಲವಾಗುವದು, ಅಧಿಕಾರಿಯು ಅಧಿಕಾರಿಗೆ ವಿರೋಧಿಯಾಗುವನು.


ಬಾಬೆಲು ಆಕಾಶದ ತನಕ ಬೆಳೆದು ಎತ್ತರವಾಗಿಯೂ ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು. ಇದು ಯೆಹೋವನ ನುಡಿ.


ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ; ಯೆಹೋವನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಮಡಿಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು