ಯೆಶಾಯ 13:5 - ಕನ್ನಡ ಸತ್ಯವೇದವು J.V. (BSI)5 ಯೆಹೋವನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ, ಭೂವಿುಯನ್ನೆಲ್ಲಾ ಹಾಳುಮಾಡುವದಕ್ಕಾಗಿ ಬಂದಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನು ತಾನು ನ್ಯಾಯ ತೀರಿಸುವ ಆಯುಧಗಳೊಡನೆ ದೂರ ದೇಶದಿಂದ ಅಂದರೆ, ಆಕಾಶ ಮಂಡಲದ ಕಟ್ಟಕಡೆಯಿಂದ ಭೂಮಿಯನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವರು ಬಂದಿರುವುದು ಭೂಮಿಯ ಕಟ್ಟಕಡೆಯ ನಾಡುಗಳಿಂದ; ಇಡೀ ರಾಷ್ಟ್ರವನ್ನು ಹಾಳುಮಾಡಲಿರುವರು ಸರ್ವೇಶ್ವರ ಕೋಪೋದ್ರೇಕದಿಂದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋವನೂ ಆ ಸೈನ್ಯವೂ ದೂರದಿಂದ ಬರುತ್ತಿದ್ದಾರೆ. ದಿಗಂತದ ಆಚೆಯಿಂದ ಅವರು ಬರುತ್ತಿದ್ದಾರೆ. ತನ್ನ ಸಿಟ್ಟನ್ನು ಪ್ರದರ್ಶಿಸುವದಕೋಸ್ಕರ ಯೆಹೋವನು ಈ ಸೈನ್ಯವನ್ನು ಉಪಯೋಗಿಸುವನು. ಈ ಸೈನ್ಯವು ಇಡೀ ಭೂಮಿಯನ್ನು ಹಾಳು ಮಾಡುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರು ಮತ್ತು ಅವರ ರೋಷಕ್ಕೆ ಆಯುಧಗಳಾದವರು ದೂರದೇಶದಿಂದ ಎಂದರೆ, ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾರೆ. ಅಧ್ಯಾಯವನ್ನು ನೋಡಿ |