Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:6 - ಕನ್ನಡ ಸತ್ಯವೇದವು J.V. (BSI)

6 ಅರಚಿಕೊಳ್ಳಿರಿ, ಯೆಹೋವನ ದಿನವು ಸಮೀಪವಾಯಿತು; ಅದು ಸರ್ವಶಕ್ತನಿಂದ ನಾಶರೂಪವಾಗಿ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು ಸರ್ವಶಕ್ತನಿಂದ ನಾಶವಾಗುವಂತೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪ್ರಲಾಪಿಸಿರಿ, ಸಮೀಪಿಸಿದೆ ಸರ್ವೇಶ್ವರನ ದಿನ; ಸನ್ನಿಹಿತವಾಗಿದೆ, ಸರ್ವನಾಶ ಮಾಡುವ ಸೇನಾಧೀಶ್ವರನ ದಿನ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನ ದಿನವು ಹತ್ತಿರವಾಗಿದೆ. ಆದ್ದರಿಂದ ದುಃಖಿಸಿರಿ, ರೋಧಿಸಿರಿ. ವೈರಿಯು ಬಂದು ನಿಮ್ಮ ಐಶ್ವರ್ಯವನ್ನು ಸೂರೆಮಾಡುವ ಸಮಯವು ಬರುತ್ತದೆ. ಸರ್ವಶಕ್ತನಾದ ದೇವರು ಅದನ್ನು ನೆರವೇರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ಗೋಳಾಡಿರಿ. ಏಕೆಂದರೆ, ಯೆಹೋವ ದೇವರ ದಿನವು ಸಮೀಪವಾಯಿತು. ಅದು ಸರ್ವಶಕ್ತರಿಂದ ನಾಶರೂಪವಾಗಿ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:6
39 ತಿಳಿವುಗಳ ಹೋಲಿಕೆ  

ಯೆಹೋವನ ದಿನವು ಸಮೀಪಿಸಿತು; ಅಯ್ಯೋ, ದಿನವೇ! ಅದು ಸರ್ವಶಕ್ತನಿಂದ ನಾಶನದಿನವಾಗಿಯೇ ಬರುವದು.


ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ; ಯೆಹೋವನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಮಡಿಮಾಡಿದ್ದಾನೆ.


ಯೆಹೋವನ ದಿನವನ್ನು ನಿರೀಕ್ಷಿಸಿಕೊಂಡಿರುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನ ದಿನವು ನಿಮಗೇಕೆ? ಅದು ಬೆಳಕಲ್ಲ, ಕತ್ತಲೆಯೇ.


ಇಗೋ, ಯೆಹೋವನ ದಿನವು ಬರುತ್ತಿದೆ; ಅದು ಭೂವಿುಯನ್ನು ಹಾಳುಮಾಡಿ ಪಾಪಿಗಳನ್ನು ನಿರ್ಮೂಲಪಡಿಸುವದಕ್ಕೆ [ಆತನ] ಕೋಪೋದ್ರೇಕದಿಂದಲೂ ತೀಕ್ಷ್ಣರೋಷದಿಂದಲೂ ಕ್ರೂರವಾಗಿರುವದು.


ಅಯ್ಯೋ, ಅಯ್ಯೋ, ಮಹಾಪಟ್ಟಣವೇ, ಬಾಬೆಲೇ, ಬಲಿಷ್ಠವಾದ ನಗರಿಯೇ, ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ಗಳಿಗೆಯಲ್ಲಿ ಬಂತಲ್ಲಾ ಎಂದು ಹೇಳುವರು.


ಯೆಹೋವನು ತನ್ನ ಸೈನ್ಯದ ಮುಂದೆ ದನಿಗೈಯುತ್ತಾನೆ; ಆತನ ದಂಡು ಬಹು ದೊಡ್ಡದು; ತನ್ನ ಮಾತನ್ನು ನೆರವೇರಿಸಿಕೊಳ್ಳುವಾತನು ಬಲಿಷ್ಟನಾಗಿದ್ದಾನೆ; ಯೆಹೋವನ ದಿನವು ಮಹತ್ತರವೂ ಅತಿ ಭಯಂಕರವೂ ಆಗಿದೆ; ಅದನ್ನು ತಾಳಿಕೊಳ್ಳುವವರು ಯಾರು?


ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಅರಿಚಿರಿ; ಅದರ ನೋವನ್ನು ನೀಗಿಸುವದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.


ಏಕಂದರೆ ಯೆಹೋವನು ಮುಯ್ಯಿತೀರಿಸುವ ದಿನವು ಬಂದಿದೆ; ಚೀಯೋನಿನ ವ್ಯಾಜ್ಯದಲ್ಲಿ [ಎದೋವಿುಗೆ] ದಂಡನೆವಿಧಿಸತಕ್ಕ ವರುಷವು ಒದಗಿದೆ.


ಸೇನಾಧೀಶ್ವರನಾದ ಯೆಹೋವನ [ನ್ಯಾಯನಿರ್ಣಯ] ದಿವಸವು ಗರ್ವದಿಂದ ಹೆಚ್ಚಿಕೊಂಡಿರುವ ಸಮಸ್ತಕ್ಕೂ ಸಂಭವಿಸುವದು; ಆಗ ಅದೆಲ್ಲಾ ತಗ್ಗುವದು.


ಧನಿಕರೇ, ಕೇಳಿರಿ; ನಿಮಗೆ ಬರುವ ದುರ್ದಶೆಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.


ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವದಕ್ಕೆ ಮುಂಚೆಯೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;


ಯೆಹೋವನ ಮಹಾದಿನವು ಹತ್ತಿರವಾಯಿತು, ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!


ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಮೊರೆಯಿಡಿರಿ; ಯಜ್ಞವೇದಿಯ ಸೇವಕರೇ, ಗೋಳಾಡಿರಿ; ನನ್ನ ದೇವರ ದಾಸರೇ, ಬನ್ನಿರಿ, ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದಿರ್ರಿ; ಧಾನ್ಯಪಾನನೈವೇದ್ಯಗಳು ನಿಮ್ಮ ದೇವರ ಆಲಯಕ್ಕೆ ಒದಗವು.


ಅಮಲೇರಿದವರೇ, ಎಚ್ಚರಗೊಳ್ಳಿರಿ, ಅಳಿರಿ; ಕುಡಿಕರೇ, ಅರಚಿಕೊಳ್ಳಿರಿ; ದ್ರಾಕ್ಷಾರಸವು ನಿಮ್ಮ ಬಾಯಿಗೆ ಇನ್ನು ಬೀಳದು.


ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕುಂದಿಹೋಗಿರಿ! ಬಡಗಲಿಂದ ಹೊಗೆಯು ಬರುತ್ತಿದೆ. ಆ ವ್ಯೂಹದಲ್ಲಿ ಹಿಂದು ಬೀಳುವವರಿಲ್ಲ.


ದೇವರಿಂದ ಬರುವ ವಿಪತ್ತಿಗೆ ಅಂಜಿಕೊಂಡಿದ್ದೆನಷ್ಟೆ, ಆತನ ಪ್ರಭಾವದ ದೆಸೆಯಿಂದ ನಾನು ಇಂಥ ಕೃತ್ಯವನ್ನು ಮಾಡುವದಕ್ಕಾಗಲಿಲ್ಲ.


ರೈತರೇ, ಕಂಗೆಡಿರಿ! ತೋಟಗಾರರೇ, ಗೋಳಾಡಿರಿ! ಗೋದಿಯೂ ಜವೆಗೋದಿಯೂ ಹಾಳಾಗಿವೆ; ಹೊಲದ ಬೆಳೆಯು ನಾಶವಾಗಿದೆ.


ನರಪುತ್ರನೇ, ಕೂಗಿಕೋ, ಗೋಳಾಡು! ಖಡ್ಗವು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಬಿದ್ದಿದೆ; ಆ ಪ್ರಭುಗಳು ನನ್ನ ಜನರೊಂದಿಗೆ ಖಡ್ಗಕ್ಕೆ ತುತ್ತಾಗಿದ್ದಾರೆ; ತೊಡೆಯನ್ನು ಬಡಿದುಕೋ.


ಹೆಷ್ಬೋನಿನವರೇ, ಗೋಳಾಡಿರಿ; ಆಯಿ ಎಂಬ ಊರು ಹಾಳಾಯಿತು! ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ; ಏಕಂದರೆ ಮಲ್ಕಾಮ್ ದೇವತೆಯೂ ಅದರ ಯಾಜಕರೂ ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.


ಇಗೋ, ನನ್ನ ಸೇವಕರು ಹೃದಯಾನಂದದಿಂದ ಹರ್ಷಧ್ವನಿಗೈಯುವರು, ನೀವೋ ಮನೋವ್ಯಥೆಯಿಂದ ಮೊರೆಯಿಟ್ಟು, ಆತ್ಮಕ್ಲೇಶದಿಂದ ಗೋಳಾಡುವಿರಿ.


ಈಗಲೂ ಅನ್ಯರು ನನ್ನ ಜನರನ್ನು ಹಕ್ಕಿಲ್ಲದೆ ಒಯ್ದಿರಲು ನಾನು ಇಲ್ಲಿ ಸುಮ್ಮನಿರುವದು ಹೇಗೆ? ನನ್ನ ಪ್ರಜೆಯನ್ನು ಆಳುವವರು [ರೌದ್ರದಿಂದ] ಕಿರಚುತ್ತಾರೆ; ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ.


ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಅಂಗಲಾಚಿರಿ! [ನಿಮ್ಮ ಆಶ್ರಯವು] ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. (ಕಿತ್ತೀಮ್ ದೇಶೀಯರಿಂದ ಅವುಗಳಿಗೆ ತಿಳಿಯಿತು).


ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ಮಣಿಗಳೇ, [ಬೂದಿಯಲ್ಲಿ] ಬಿದ್ದು ಹೊರಳಾಡಿರಿ! ನಿಮ್ಮನ್ನು ವಧಿಸುವ ಕಾಲವು ತುಂಬಿದೆ; ನಾನು ನಿಮ್ಮನ್ನು ಭಂಗಪಡಿಸುವೆನು; ನೀವು ಬಿದ್ದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ.


ದಂಡನೆಯ ದಿನದಲ್ಲಿಯೂ ದೂರದಿಂದ ಬರುವ ನಾಶನದಲ್ಲಿಯೂ ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?


ಬಹು ಸ್ವಲ್ಪ ಕಾಲದೊಳಗೆ [ನಿಮ್ಮ ಮೇಲಿನ] ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾಗುವದು.


ಮತ್ತು ಆ ಪ್ರದೇಶವನ್ನು ಜವುಗುನೆಲವನ್ನಾಗಿಯೂ ಮುಳ್ಳುಹಂದಿಗೆ ಸೊತ್ತನ್ನಾಗಿಯೂ ಮಾಡಿ ನಾಶನವೆಂಬ ಬರಲಿನಿಂದ ಗುಡಿಸಿಬಿಡುವೆನು ಎಂದು ಸೇನಾಧೀಶ್ವರನಾದ ಯೆಹೋವನು ಹೇಳಿದ್ದಾನೆ.


ಯೆಹೋವನು ಸಕಲ ಜನಾಂಗಗಳಲ್ಲಿ ಕೋಪಮಾಡಿ ಅವುಗಳ ಸೈನ್ಯದ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ನಿಶ್ಶೇಷವಾಗಿ ಸಂಹರಿಸಿದ್ದಾನಷ್ಟೆ.


ಹೀಗಿರಲು ನೀನು ಮಂತ್ರಿಸಿ ನಿವಾರಿಸಲಾರದ ಕೇಡು ನಿನಗೆ ಸಂಭವಿಸುವದು, ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನೀನು ತಪ್ಪಿಸಲರಿಯದ ನಾಶನವು ನಿನಗೇ ತಟ್ಟನೆ ಉಂಟಾಗುವದು.


ಯೆಹೋವನು ನೇವಿುಸಿರುವ ಶುಭವರುಷ, ನಮ್ಮ ದೇವರು ಮುಯ್ಯಿ ತೀರಿಸುವ ದಿನ, ಇವುಗಳನ್ನು ಪ್ರಚುರಗೊಳಿಸುವದಕ್ಕೂ


ಯೆಹೋವನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿಯ ಒಡಕುಗಳನ್ನೇರಲಿಲ್ಲ, ಇಸ್ರಾಯೇಲ್‍ವಂಶದ ರಕ್ಷಣೆಗಾಗಿ ಗೋಡೆಯನ್ನು ಗಟ್ಟಿಮಾಡಲೂ ಇಲ್ಲ.


ಆಗ ರಾಜನಾದ ಬೇಲ್ಶಚ್ಚರನು ಬಹಳ ಕಳವಳಗೊಂಡು ಕಳೆಗುಂದಿದನು, ಅವನ ಮುಖಂಡರೂ ಬೆಪ್ಪಾದರು.


ಇದರ ಅರ್ಥವು ಹೀಗಿದೆ ಮೆನೇ ಅಂದರೆ ದೇವರು ನಿನ್ನ ಆಳಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ;


ಆಹಾ, [ಚೀಯೋನೇ!] ಯೆಹೋವನು ನೇವಿುಸಿದ ದಿನವು ಬರುತ್ತಿದೆ; ಸೂರೆಯಾದ ನಿನ್ನ ಆಸ್ತಿಯು ಆಗ ನಿನ್ನ ಮಧ್ಯದಲ್ಲಿ ಹಂಚಿಕೆಯಾಗುವದು.


ಏಕಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರುಷವು ಒದಗಿತ್ತು.


ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧಪರ್ವತದಲ್ಲಿ ದನಿಗೈಯಿರಿ; ಸಮಸ್ತ ದೇಶನಿವಾಸಿಗಳು ನಡುಗಲಿ; ಯೆಹೋವನ ದಿನವು ಬರುತ್ತಲಿದೆ, ಸಮೀಪಿಸಿತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು