Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:8 - ಕನ್ನಡ ಸತ್ಯವೇದವು J.V. (BSI)

8 ಅವರು ಬೆಚ್ಚಿಬೀಳುವರು, ಯಾತನೆವೇದನೆಗಳು ಅವರನ್ನಾಕ್ರವಿುಸುವವು. ಹೆರುವ ಹೆಂಗಸಿನಂತೆ ಸಂಕಟಪಡುವರು; ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು, ಅವರ ಮುಖಗಳು [ತಲ್ಲಣದಿಂದ] ಬೆಂಕಿಬೆಂಕಿಯಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ಭಯಪಡುವರು. ಪ್ರಸವ ವೇದನೆಯಲ್ಲಿರುವ ಸ್ತ್ರೀಯಂತೆ ಯಾತನೆ, ಸಂಕಟಗಳನ್ನು ಅನುಭವಿಸುವರು. ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು. ಅವರ ಮುಖಗಳು ತಲ್ಲಣಗೊಂಡು ಬೆಂಕಿಯಿಂದ ಉರಿಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಭಯಭ್ರಾಂತರಾಗುವರು ಅವರೆಲ್ಲರು; ಆಕ್ರಮಿಸುವುವು ಅವರನ್ನು ಯಾತನೆ ವೇದನೆಗಳು. ಸಂಕಟಪಡುವರವರು ಹೆರುವ ಹೆಂಗಸಿನಂತೆ; ಒಬ್ಬರನ್ನೊಬ್ಬರು ನೋಡುವರು ದಿಗ್ಭ್ರಾಂತರಾದವರಂತೆ; ಅವರ ಮುಖಗಳು ಕೆಂಪೇರುವುವು ಬೆಂಕಿಯಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪ್ರತಿಯೊಬ್ಬರೂ ಭಯಪೀಡಿತರಾಗುವರು. ಯಾತನೆವೇದನೆಗಳು ಅವರನ್ನು ಆಕ್ರಮಿಸುವವು. ಪ್ರಸವವೇದನೆಯಿಂದ ನರಳುವ ಹೆಂಗಸಿನಂತೆ ಅವರ ಹೊಟ್ಟೆಯಲ್ಲಿ ನೋವು ಉಂಟಾಗುವದು; ಅವರ ಮುಖಗಳು ಬೆಂಕಿಯಂತೆ ಕೆಂಪಗಾಗುವವು. ಭಯದ ಮುಖವು ತಮ್ಮ ನೆರೆಯವರಲ್ಲಿಯೂ ಇರುವದನ್ನು ನೋಡಿ ಜನರು ಆಶ್ಚರ್ಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಭಯಪಡುವರು. ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವುವು. ಪ್ರಸವವೇದನೆಯಲ್ಲಿರುವ ಸ್ತ್ರೀಯರಂತೆ ಸಂಕಟಪಡುವರು. ಅವರು ಒಬ್ಬರಿಗೊಬ್ಬರು ಭ್ರಮೆ ಪಡುವರು. ಅವರ ಮುಖಗಳು ಜ್ವಾಲೆಯಂತಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:8
21 ತಿಳಿವುಗಳ ಹೋಲಿಕೆ  

ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ನಗರಿಯು ಬರಿದಾಗಿದೆ, ಬಟ್ಟಬರಿದಾಗಿ ಬೀಳುಬಿದ್ದಿದೆ; ಎದೆಯು ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ.


ಹೆರಿಗೆ ಹತ್ತಿರವಾದ ಗರ್ಭಿಣಿಯು ಯಾತನೆಪಡುತ್ತಾ ಬೇನೆಯಿಂದ ಅರಚುವಂತೆ ಯೆಹೋವನೇ, ನಾವು ನಿನ್ನ ಮುಂದೆ ಅರಚಿದ್ದೇವೆ;


ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲ ಬಂತೆಂದು ಆಕೆಗೆ ದುಃಖವಾಗುತ್ತದೆ; ಆದರೆ ಕೂಸನ್ನು ಹೆತ್ತ ಮೇಲೆ ಲೋಕದಲ್ಲಿ ಒಬ್ಬ ಮನುಷ್ಯನು ಹುಟ್ಟಿದನೆಂಬ ಆನಂದದಿಂದ ಆ ಬೇನೆಯನ್ನು ನೆನಸುವದಿಲ್ಲ.


ಅವುಗಳ ದೆಸೆಯಿಂದ ಜನಾಂಗಗಳು ಸಂಕಟಪಡುತ್ತವೆ; ಎಲ್ಲರ ಮುಖಗಳೂ ಬಾಡಿಹೋಗುತ್ತವೆ.


ಬಾಬೆಲಿನ ಅರಸನು ಅದರ ಸುದ್ದಿಯನ್ನು ಕೇಳಿದನು, ಅವನ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ಅವನನ್ನು ಹಿಡಿದಿದೆ.


ವಿಚಾರಿಸಿ ನೋಡಿರಿ, ಗಂಡಸು ಪ್ರಸವವೇದನೆ ಪಡುವದುಂಟೇ? ಪ್ರತಿಯೊಬ್ಬನು ಹೆರುವವಳಂತೆ ಸೊಂಟವನ್ನು ಹಿಸಕಿಕೊಳ್ಳುವದು, ಎಲ್ಲಾ ಮುಖಗಳು ಬಿಳಿಚಿಕೊಂಡಿರುವದು, ಇವು ಏಕೆ ನನ್ನ ಕಣ್ಣಿಗೆ ಬೀಳುತ್ತವೆ?


ಚೀಯೋನ್ ನಗರಿಯು ಬೇನೆ ತಿನ್ನುವವಳಂತೆ, ಚೊಚ್ಚಲಹೆರಿಗೆಯ ವೇದನೆಯನ್ನು ಅನುಭವಿಸುವವಳ ಹಾಗೆ ಕೂಗಿಕೊಳ್ಳುವದನ್ನು ನಾನು ಕೇಳಿದ್ದೇನೆ; ಏದುತ್ತಾ ಕೈಚಾಚಿ - ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ಕೊಲೆಗಾರರಿಂದ ನನ್ನ ಆತ್ಮವು ಉಡುಗುತ್ತದೆ ಎಂದು ಬಡುಕೊಳ್ಳುತ್ತಾಳೆ.


ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಕಾಯಿಪಲ್ಯಕ್ಕೂ ಎಳೆಗರಿಕೆಗೂ ಮಾಳಿಗೆಯ ಮೇಲಣ ಹುಲ್ಲಿಗೂ ಹೊಡೆಹಾಯುವದಕ್ಕಿಂತ ಮೊದಲೇ ಒಣಗಿಹೋದ ಪೈರಿಗೂ ಸಮಾನರಾದರು.


ನಿನ್ನಲ್ಲಿ ಬಳಿಕೆಗೊಳ್ಳುವಂತೆ ನೀನು ಅಭ್ಯಾಸಮಾಡಿಸಿದವರನ್ನು [ಯೆಹೋವನು] ನಿನಗೆ ತಲೆಯಾಗಿ ನೇವಿುಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವದಲ್ಲವೆ.


ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನು ಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತುಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.


ಪಟ್ಟಣಗಳನ್ನು ಹಿಡಿದಿದ್ದಾನೆ, ಕೋಟೆಗಳನ್ನು ಆಕ್ರವಿುಸಿದ್ದಾನೆ; ಆ ದಿನದಲ್ಲಿ ಮೋವಾಬಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವದು.


ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋವಿುನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವದು.


ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನಾವ್ಯಥೆಗಳಿಗೆ ಒಳಗಾಗಿದೆ.


ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಅಬಲರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; ಅದರ ಮನೆಗಳಿಗೆ ಬೆಂಕಿಯಿಕ್ಕಿದೆ, ಅದರ ಅಗುಳಿಗಳು ಮುರಿದುಹೋಗಿವೆ;


ಯೆಹೋವನ ಮಾತನ್ನು ಕೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು, ಅದು ನಿನ್ನಲ್ಲಿನ ಎಲ್ಲಾ ಹಸುರುಮರಗಳನ್ನೂ ಒಣಮರಗಳನ್ನೂ ನುಂಗಿಬಿಡುವದು; ಧಗಧಗಿಸುವ ಉರಿಯು ಆರದೆ ತೆಂಕಲಿಂದ ಬಡಗಲವರೆಗೆ ಎಲ್ಲರ ಮುಖಗಳನ್ನು ಕಂದಿಸುವದು.


ಅದಕ್ಕೆ ಪ್ರಸವವೇದನೆಯಾಗುತ್ತಾ ಇದೆ; ಅದು ಮಂಕು ಮಗು; ಈ ಸಮಯವು ಗರ್ಭದ್ವಾರದಲ್ಲಿ ನಿಲ್ಲತಕ್ಕ ಸಮಯವಲ್ಲ.


ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು