Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:11 - ಕನ್ನಡ ಸತ್ಯವೇದವು J.V. (BSI)

11 ನಿನ್ನ ವೈಭವವೂ ವೀಣಾನಾದವೂ ಪಾತಾಳಕ್ಕೆ ತಳ್ಳಲ್ಪಟ್ಟಿವೆ; ನಿನಗೆ ಹುಳಗಳೇ ಹಾಸಿಗೆ, ಕ್ರಿವಿುಗಳೇ ಹೊದಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿನ್ನ ವೈಭವವೂ ವೀಣಾನಾದದೊಂದಿಗೆ ಪಾತಾಳಕ್ಕೆ ತಳ್ಳಲ್ಪಟ್ಟಿವೆ. ನಿನಗೆ ಹುಳಗಳೇ ಹಾಸಿಗೆ, ಕ್ರಿಮಿಗಳೇ ನಿನ್ನ ಹೊದಿಕೆಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಳಿದಿದೆ ನಿನ್ನ ವೈಭವ, ವೀಣಾನಾದ ಪಾತಾಳಕೆ ನಿನಗೀಗ ಹುಳುಗಳೇ ಹಾಸಿಗೆ, ಕ್ರಿಮಿಗಳೇ ಹೊದಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಿನ್ನ ಜಂಬವು ಪಾತಾಳಕ್ಕೆ ಕಳುಹಿಸಲಾಗಿದೆ. ನಿನ್ನ ಹಾರ್ಪ್‌ವಾದ್ಯದ ಸ್ವರವು ನಿನ್ನ ಅಹಂಕಾರದ ಆತ್ಮವನ್ನು ಸಾರಿಹೇಳುತ್ತವೆ. ಹುಳಗಳು ನಿನ್ನ ಶರೀರವನ್ನು ತಿಂದುಬಿಡುವವು. ಹಾಸಿಗೆಯೋ ಎಂಬಂತೆ ನೀನು ಅವುಗಳ ಮೇಲೆ ಮಲಗಿಕೊಳ್ಳುವೆ. ಹುಳಗಳು ನಿನ್ನ ಶರೀರವನ್ನು ಕಂಬಳಿಯಂತೆ ಮುಚ್ಚಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿನ್ನ ವೈಭವವೂ, ನಿನ್ನ ವೀಣೆಗಳ ಸ್ವರವೂ ಸಮಾಧಿಗೆ ಇಳಿದಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:11
16 ತಿಳಿವುಗಳ ಹೋಲಿಕೆ  

ನಾನು ನಿನ್ನ ಸಂಗೀತಗಳ ಧ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನರಿಗಳ ನುಡಿಯು ಇನ್ನು ಕೇಳಿಸದು.


ಅವರು ಆಚೆ ಹೋಗಿ ನನಗೆ ದ್ರೋಹಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವದಿಲ್ಲ, ಸುಡುವ ಬೆಂಕಿಯು ಆರುವದಿಲ್ಲ; ಅವು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.


ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಊರೇ! ನಿನ್ನಲ್ಲಿ ಹತರಾದವರು ಖಡ್ಗಹತರಲ್ಲ, ಯುದ್ಧದಲ್ಲಿ ಮೃತರಲ್ಲ.


ಇಬ್ಬರೂ ದೂಳಿನಲ್ಲಿ ಮಲಗುವರು, ಹುಳಗಳು ಅವರನ್ನು ಮುತ್ತಿಕೊಳ್ಳುವವು.


ಮತ್ತು ಪಾತಾಳವು ಹೆಚ್ಚು ಆತುರದಿಂದ ಅಪಾರವಾಗಿ ಬಾಯಿತೆರೆಯಲು ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲಾ [ಅದರೊಳಗೆ] ಬಿದ್ದುಹೋಗುವವು.


ನನ್ನ ರಕ್ಷಣ ಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವದು, ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು