ಯೆಶಾಯ 14:18 - ಕನ್ನಡ ಸತ್ಯವೇದವು J.V. (BSI)18 ಜನಾಂಗಗಳ ಎಲ್ಲಾ ಅರಸರೂ, ಹೌದು, ಸಕಲ ರಾಜರೂ ತಮ್ಮ ತಮ್ಮ ಮನೆಗಳಲ್ಲಿ ವೈಭವದೊಡನೆ ದೀರ್ಘನಿದ್ರೆಮಾಡುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಜನಾಂಗಗಳ ಎಲ್ಲಾ ಅರಸರೂ, ಹೌದು, ಸಕಲ ಅರಸರೂ ತಮ್ಮ ತಮ್ಮ ವೈಭವದೊಡನೆ ಸಮಾಧಿಗಳಲ್ಲಿ ದೀರ್ಘ ನಿದ್ರೆ ಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸಂಭ್ರಮದಿ ಸ್ವಂತ ಸಮಾಧಿಗಳಲಿ ನಿರಂತರ ನಿದ್ರಿಸುತಿಹರು ಸಕಲ ರಾಷ್ಟ್ರಗಳ ಅರಸರು, ಸಮಸ್ತ ರಾಜರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಭೂಲೋಕದ ಪ್ರತಿಯೊಬ್ಬ ಅರಸನು ವೈಭವದೊಂದಿಗೆ ಕಾಲವಾದನು. ಪ್ರತಿಯೊಬ್ಬ ಅರಸನಿಗೆ ಸ್ವಂತ ಸಮಾಧಿ ಇರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಜನಾಂಗಗಳ ಅರಸರೆಲ್ಲಾ ವೈಭವದಿಂದ ತಮ್ಮ ತಮ್ಮ ಸಮಾಧಿಗಳಲ್ಲಿ ಮಲಗುತ್ತಾರೆ. ಅಧ್ಯಾಯವನ್ನು ನೋಡಿ |