Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:24 - ಕನ್ನಡ ಸತ್ಯವೇದವು J.V. (BSI)

24 ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವದೇನಂದರೆ - ನಾನು ಸಂಕಲ್ಪಿಸಿದ್ದೇ ನೆರವೇರುವದು, ಉದ್ದೇಶಿಸಿದ್ದೇ ನಿಲ್ಲುವದು, ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ, “ನಾನು ಸಂಕಲ್ಪಿಸಿದ್ದೇ ನೆರವೇರುವುದು, ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಪ್ರತಿಜ್ಞೆಯಿದು : “ನೆರವೇರಿಯೇ ತೀರುವುದು ನಾ ಸಂಕಲ್ಪಿಸಿದ್ದು, ಈಡೇರಿಯೇ ತೀರುವುದು ನಾ ಯೋಚಿಸಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಸರ್ವಶಕ್ತನಾದ ಯೆಹೋವನು ಒಂದು ವಾಗ್ದಾನವನ್ನು ಮಾಡಿದ್ದಾನೆ. ಆತನು ಹೇಳುವುದೇನೆಂದರೆ: “ನಾನು ಯೋಚಿಸಿದಂತೆಯೇ ಇವೆಲ್ಲವೂ ನೆರವೇರುವುದು ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಸೇನಾಧೀಶ್ವರ ಯೆಹೋವ ದೇವರು ಆಣೆ ಇಟ್ಟು ಹೇಳುವುದೇನೆಂದರೆ, “ನಾನು ಯೋಚಿಸಿದ ರೀತಿಯಲ್ಲಿ ಖಂಡಿತವಾಗಿ ಆಗುವುದು. ನಾನು ಉದ್ದೇಶಿಸಿದ ರೀತಿಯಲ್ಲಿಯೇ ನೆರವೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:24
30 ತಿಳಿವುಗಳ ಹೋಲಿಕೆ  

ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ; ಯೆಹೋವನ ಸಂಕಲ್ಪವೇ ಈಡೇರುವದು.


ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? ತಾನು ಬಯಸಿದ್ದನ್ನೇ ಮಾಡುತ್ತಾನೆ.


ಇವರಿಗೆ ಗತಿಯಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.


ತಾನು ಕಾಲವು ಪರಿಪೂರ್ಣವಾದಾಗ ನಿರ್ವಹಿಸಬೇಕಾದ ಒಂದು ಕೃಪೆಯುಳ್ಳ ಸಂಕಲ್ಪವನ್ನು ಆತನು ಕ್ರಿಸ್ತನಲ್ಲಿ ಮೊದಲೇ ನಿಷ್ಕರ್ಷೆಮಾಡಿಕೊಂಡಿದ್ದನು. ಅದೇನಂದರೆ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕ್ರಿಸ್ತನಲ್ಲಿ ಒಂದಾಗಿ ಕೂಡಿಸಬೇಕೆಂಬದೇ. ಕ್ರಿಸ್ತನಲ್ಲಿಯೇ ಸಮಸ್ತವು ಒಂದಾಗುವದು.


ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇವಿುಸಿದ್ದನ್ನೇ ನಡಿಸಿದರು.


ಆ ಸಮಯದಲ್ಲಿ ಯೇಸು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ - ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವದನ್ನೂ ಎಂದಿಗೂ ಮರೆತುಬಿಡೆನು.


ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?


ದೇವರ ಕೆಲಸಗಳು ಲೋಕಾದಿಯಿಂದ ಮುಗಿದು ಹೋಗಿ [ಆತನ ವಿಶ್ರಾಂತಿಯು ಸಿದ್ಧವಾಗಿದ್ದರೂ] ಆತನು - ನನ್ನ ವಿಶ್ರಾಂತಿಯಲ್ಲಿ ಇವರು ಸೇರುವದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು ಎಂಬದಾಗಿ ಹೇಳಿದೆನಷ್ಟೆ. ನಂಬಿರುವ ನಾವಾದರೋ ಆ ವಿಶ್ರಾಂತಿಯಲ್ಲಿ ಸೇರುತ್ತಲೇ ಇದ್ದೇವೆ.


ಯೆಹೋವನು ತನ್ನ ಹೃದಯಾಲೋಚನೆಗಳನ್ನು ನಡಿಸಿ ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು; ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ.


ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಪಡುವದಿಲ್ಲ.


ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ.


ಯಾಹುವಿನ ಸಿಂಹಾಸನದ ಆಣೆ, ಅಮಾಲೇಕ್ಯರ ಮೇಲೆ ಯೆಹೋವನಿಗೆ ತಲತಲಾಂತರಕ್ಕೂ ಯುದ್ಧವಿರುವದು ಅಂದನು.


ಯಾವ ಜ್ಞಾನವೂ ಯಾವ ವಿವೇಕವೂ ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವದಿಲ್ಲ.


ಐಗುಪ್ತದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ; ಯೆಹೋವನು ಇಂತೆನ್ನುತ್ತಾನೆ - ಆಹಾ, ಕರ್ತನಾದ ಯೆಹೋವನ ಜೀವದಾಣೆ ಎಂದು ನನ್ನ ಹೆಸರನ್ನು ಬಾಯಿಂದ ಎತ್ತಲಿಕ್ಕೆ ಐಗುಪ್ತದಲ್ಲಿ ಯಾವ ಯೆಹೂದ್ಯನೂ ಇನ್ನಿರನು ಎಂಬದಾಗಿ ನನ್ನ ಮಹಾನಾಮದ ಮೇಲೆ ಆಣೆಯಿಟ್ಟಿದ್ದೇನೆ.


ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.


ಆಹಾ, ಅಶ್ಶೂರವೇ, ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೋಷವೇ!


ಅವರು ನಿನಗೆ ತಿಳಿಯ ಹೇಳಲಿ, ಸೇನಾಧೀಶ್ವರನಾದ ಯೆಹೋವನು ಐಗುಪ್ತದ ವಿಷಯವಾಗಿ ಉದ್ದೇಶಿಸಿದ್ದನ್ನು ಅರಿತುಕೊಳ್ಳಲಿ.


ಮತ್ತು ಐಗುಪ್ತವು ಬೆಚ್ಚಿ ಬೀಳುವದಕ್ಕೆ ಯೆಹೂದ ದೇಶವು ಕಾರಣವಾಗುವದು; ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೇನಾಧೀಶ್ವರನಾದ ಯೆಹೋವನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಸಂಕಲ್ಪವನ್ನು ತಿಳಿದು ಬೆರಗಾಗುವನು.


ಯೆಹೋವನು ಹೀಗನ್ನುತ್ತಾನೆ - ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.


ಭೂವಿುಯ ಮೇಲೆ ಆಕಾಶವು ಎಷ್ಟು ಉನ್ನತವೋ ನಿಮ್ಮ ಮಾರ್ಗಗಳಿಗಿಂತ ನನ್ನ ಮಾರ್ಗಗಳೂ ನಿಮ್ಮ ಆಲೋಚನೆಗಳಿಗಿಂತ ನನ್ನ ಆಲೋಚನೆಗಳೂ ಅಷ್ಟು ಉನ್ನತವಾಗಿವೆ.


ಹೀಗಿರಲು ಯೆಹೋವನು ಎದೋವಿುನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; [ಮೃಗಗಳು] ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವದು.


ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; [ಮೃಗಗಳು] ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕೆ ಬೆದರುವದು.


ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು; ಇದು ಕರ್ತನಾದ ಯೆಹೋವನ ವಾಕ್ಯ.


ನೀನೂ ನಿನ್ನ ಎಲ್ಲಾ ಗುವ್ಮಿುಗಳೂ ನಿನ್ನೊಂದಿಗಿರುವ ಜನಾಂಗಗಳೂ ಇಸ್ರಾಯೇಲಿನ ಪರ್ವತಗಳಲ್ಲಿ ಬಿದ್ದುಬಿಡುವಿರಿ; ನಾನು ನಿಮ್ಮನ್ನು ಮಾಂಸತಿನ್ನುವ ಬಗೆಬಗೆಯ ಹಕ್ಕಿಗಳಿಗೂ ಭೂಜಂತುಗಳಿಗೂ ಆಹಾರ ಮಾಡುವೆನು;


ಊರಲ್ಲಿ ಕೊಂಬೂದಿದರೆ ಜನರು ಅಂಜರೋ? ಯೆಹೋವನಿಂದಲ್ಲದೆ ಊರಿಗೆ ವಿಪತ್ತು ಸಂಭವಿಸುವದೋ?


ಫರೋಹನಿಗೆ ಕನಸು ಎರಡು ವಿಧವಾಗಿ ಬಿದ್ದದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನೆಂಬದಾಗಿ ತಿಳುಕೊಳ್ಳಬೇಕು.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಅವರೆಲ್ಲರನ್ನೂ ಕರುಣೆಯಿಲ್ಲದೆ ಸಂಹರಿಸಿಬಿಡುವ ಹಾಗೆ ಆತನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು