Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:25 - ಕನ್ನಡ ಸತ್ಯವೇದವು J.V. (BSI)

25 ಅಶ್ಶೂರ್ಯರನ್ನು ನನ್ನ ದೇಶದಲ್ಲಿ ಮುರಿದು ನನ್ನ ಬೆಟ್ಟಗಳ ಮೇಲೆ ತುಳಿದುಬಿಡುವೆನು; ಆಗ ಅವರು ಹೂಡಿದ ನೊಗವು ನನ್ನ ಜನರಿಂದ ತೊಲಗಿ ಹೊರಿಸಿದ ಹೊರೆಯು ನನ್ನ ಜನರ ಹೆಗಲಿಗೆ ದೂರವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅಶ್ಶೂರ್ಯರನ್ನು ನನ್ನ ದೇಶದಲ್ಲಿ ಮುರಿದು, ನನ್ನ ಬೆಟ್ಟಗಳ ಮೇಲೆ ತುಳಿದುಬಿಡುವೆನು. ಆಗ ಅವರು ಹೂಡಿದ ನೊಗವು ನನ್ನ ಜನರಿಂದ ತೊಲಗಿ, ಹೊರಿಸಿದ ಹೊರೆಯು ನನ್ನ ಜನರ ಹೆಗಲ ಮೇಲಿನಿಂದ ದೂರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಶಿಸಿಬಿಡುವೆನಾ ಅಸ್ಸೀರಿಯರನು ನನ್ನ ನಾಡಿನಲಿ, ತುಳಿದುಬಿಡುವೆನು ಅವರನು ನನ್ನ ಬೆಟ್ಟಗಳಲಿ, ನೀಗುವುದಾಗ ನನ್ನ ಜನರಿಂದ ಅವರು ಹೂಡಿದ ನೊಗವು, ತೊಲಗುವುದಾಗ ಅವರು ಹೊರಿಸಿದ ಹೊರೆಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನನ್ನ ದೇಶದಲ್ಲಿ ಅಶ್ಶೂರದ ರಾಜನನ್ನು ನಾಶಮಾಡುವೆನು. ನನ್ನ ಪರ್ವತಗಳ ಮೇಲೆ ಆ ರಾಜನ ಮೇಲೆ ತುಳಿದುಕೊಂಡು ನಡೆದಾಡುವೆನು. ಆ ರಾಜನು ನನ್ನ ಜನರನ್ನು ಗುಲಾಮರನ್ನಾಗಿ ಮಾಡಿದನು. ಅವರ ಹೆಗಲಿನ ಮೇಲೆ ನೊಗವನ್ನಿಟ್ಟನು. ಆ ನೊಗವು ಯೆಹೂದದ ಹೆಗಲಿನಿಂದ ತೆಗೆಯಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅಸ್ಸೀರಿಯವನ್ನು ನನ್ನ ದೇಶದಲ್ಲಿ ಮುರಿದುಬಿಡುವೆನು. ನನ್ನ ಪರ್ವತಗಳ ಮೇಲೆ ಅವರನ್ನು ತುಳಿದುಬಿಡುವೆನು. ಅವನ ನೊಗವು ನನ್ನ ಜನರ ಮೇಲಿಂದ ತೊಲಗಿ, ಅವರ ಭಾರವು ಅವರ ಭುಜಗಳ ಮೇಲಿನಿಂದ ತೊಲಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:25
19 ತಿಳಿವುಗಳ ಹೋಲಿಕೆ  

ಅವರಿಗೆ ಭಾರವಾದ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ವಿುದ್ಯಾನಿನ ನಾಶದಿನದಲ್ಲಿ ಮುರಿದುಬಿಟ್ಟಂತೆ ಮುರಿದುಬಿಟ್ಟಿದ್ದೀ.


ಅವನು ಹೇರಿದ ನೊಗವನ್ನು ಈಗ ನಿನ್ನ ಮೇಲಿನಿಂದ ಮುರಿದುಬಿಟ್ಟು ಕಣ್ಣಿಗಳನ್ನು ಕಿತ್ತುಹಾಕುವೆನು.


ಜನಗಳನ್ನು ಕೋಪೋದ್ರೇಕದಿಂದ ಎಡೆಬಿಡದೆ ಹೊಡೆದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ


ನೀನೂ ನಿನ್ನ ಎಲ್ಲಾ ಗುವ್ಮಿುಗಳೂ ನಿನ್ನೊಂದಿಗಿರುವ ಜನಾಂಗಗಳೂ ಇಸ್ರಾಯೇಲಿನ ಪರ್ವತಗಳಲ್ಲಿ ಬಿದ್ದುಬಿಡುವಿರಿ; ನಾನು ನಿಮ್ಮನ್ನು ಮಾಂಸತಿನ್ನುವ ಬಗೆಬಗೆಯ ಹಕ್ಕಿಗಳಿಗೂ ಭೂಜಂತುಗಳಿಗೂ ಆಹಾರ ಮಾಡುವೆನು;


ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ ಯೆರೂಸಲೇವಿುನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ ಅಶ್ಶೂರದ ರಾಜನ ಉಬ್ಬಟೆಯ ಕೊಚ್ಚಾಟಕ್ಕೂ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.


ಸೂರೆಯಾಗದಿದ್ದರೂ ಸೂರೆಮಾಡಿದಿ, ಬಾಧೆಪಡದಿದ್ದರೂ ಬಾಧಿಸಿದಿ; ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ! ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.


ಯೆರೂಸಲೇಮೇ, ದೂಳನ್ನು ಝಾಡಿಸಿಕೋ! ಎದ್ದು ಆಸನದ ಮೇಲೆ ಕೂಡ್ರು! ಸೆರೆಬಿದ್ದ ಚೀಯೋನ್ ಕನ್ಯೆಯೇ, ನಿನ್ನ ಕತ್ತಿನ ಪಾಶವನ್ನು ಬಿಚ್ಚಿಬಿಡು!


ಅವರ ಕತ್ತಿಯು ಅಶ್ಶೂರ ದೇಶವನ್ನು ತಿಂದುಬಿಡುವದು, ನಿಮ್ರೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು; ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ ನಮ್ಮ ಪ್ರಾಂತವನ್ನು ತುಳಿದುಹಾಕುವಾಗ [ಆ ಸಮಾಧಾನಪ್ರದನು] ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು.


ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದನು; ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.


ಅಶ್ಶೂರವೂ ಅದರ ಜನ ಯಾವತ್ತೂ ಅಲ್ಲಿರುತ್ತವೆ; ಆ ಜನರ ಗೋರಿಗಳು ಅದನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸಂಹೃತರು, ಖಡ್ಗಹತರು;


ಆತನೇ, [ನಮಗೆ] ಸಮಾಧಾನಪ್ರದನು; ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ ನಮ್ಮ ಅರಮನೆಗಳನ್ನು ತುಳಿದುಹಾಕುವಾಗ ನಾವು ಅವರಿಗೆ ವಿರುದ್ಧವಾಗಿ ಏಳು ಮಂದಿ ಪಾಲಕರನ್ನು, ಹೌದು, ಎಂಟು ಮಂದಿ ಪುರುಷಶ್ರೇಷ್ಠರನ್ನು ಏರ್ಪಡಿಸುವೆವು.


ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್‍ನದಿಯೆಲ್ಲಾ ತಳದ ತನಕ ಒಣಗುವದು, ಅಶ್ಶೂರದ ಗರ್ವವು ತಗ್ಗಿಸಲ್ಪಡುವದು, ಐಗುಪ್ತದ ರಾಜದಂಡವು ತಪ್ಪಿಹೋಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು