Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:29 - ಕನ್ನಡ ಸತ್ಯವೇದವು J.V. (BSI)

29 ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಹಾವಿನ ಬೀಜದಿಂದ ಮಹಾ ನಾಗವುಂಟಾಗುವದು, ಆ ಬೀಜದ ಸಂತತಿಯು ಹಾರುವ ಅಗ್ನಿಮಯಸರ್ಪವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಏಕೆಂದರೆ ನಾಗರ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಸಂತತಿಯು ಹಾರುವ ಸರ್ಪವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ನಲಿಯದಿರಿ, ಎಲೈ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿಯಿತೆಂದು. ಹಾವು ಸತ್ತರೂ ಅದರ ಮೂಲದಿಂದ ಹುಟ್ಟುವುದು ಕ್ರೂರ ಕಾಳಿಂಗವು, ಅದರ ಮೊಟ್ಟೆಯಿಂದ ಹೊರಬರುವುದು ಹಾರುವ ಘಟಸರ್ಪವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಫಿಲಿಷ್ಟಿಯ ದೇಶವೇ, ನಿನ್ನನ್ನು ಹೊಡೆದ ಅರಸನು ಸತ್ತದ್ದಕ್ಕಾಗಿ ನೀನು ಸಂತೋಷಗೊಂಡಿರುವೆ. ಆದರೆ ನೀನು ಸಂತೋಷಗೊಳ್ಳಬಾರದು. ಅವನ ರಾಜ್ಯಭಾರವು ಅಂತ್ಯವಾಯಿತು ಎಂಬುದು ಸತ್ಯ. ಆದರೆ ಅರಸನ ಮಗನು ರಾಜ್ಯವಾಳುವನು. ಒಂದು ಹಾವು ಇನ್ನೊಂದು ಭಯಂಕರ ಹಾವನ್ನು ಹೆರುವಂತೆ ಅದು ಇರುವದು. ಈ ಹೊಸ ಅರಸನು ನಿಮಗೆ ವೇಗವಾದ ಮತ್ತು ಅಪಾಯಕರವಾದ ಹಾವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದು ಹೋಯಿತೆಂದು ನೀವು ಉಲ್ಲಾಸಿಸಬೇಡಿರಿ. ಏಕೆಂದರೆ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಫಲವು ಹಾರುವ ವಿಷಸರ್ಪವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:29
27 ತಿಳಿವುಗಳ ಹೋಲಿಕೆ  

ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. [ರಾಯಭಾರಿಗಳು] ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು ಮೃಗೇಂದ್ರ, ಸಿಂಹ, ವಿಷಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ ಶ್ರಮಸಂಕಟಗಳನ್ನು ಉಂಟುಮಾಡುವದಾಗಿಯೂ ಇರುವ ದೇಶದ ಮಾರ್ಗವಾಗಿ ನಿಷ್ಪ್ರಯೋಜನವಾದ ಜನಾಂಗದ ಬಳಿಗೆ ಹೋಗುತ್ತಾರೆ.


ಮೊಲೆಕೂಸು ನಾಗರಹುತ್ತದ ಮೇಲೆ ಆಡುವದು; ಮೊಲೆಬಿಟ್ಟ ಮಗು ಹಾವಿನ ಬಿಲದ ಮೇಲೆ ಕೈಹಾಕುವದು.


ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೀಡಾಗವು; ಆಗ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.


ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ; ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕೂತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.


ನಿನ್ನ ತಮ್ಮನ ದುರ್ದಿನದಲ್ಲಿ, ಅವನ ಅಪಾಯ ಕಾಲದಲ್ಲಿ ನೀನು ಸುಮ್ಮನೆ ನೋಡುತ್ತಿರಬಾರದಾಗಿತ್ತು; ಯೆಹೂದ್ಯರ ನಾಶನದಿವಸದಲ್ಲಿ ಹಿಗ್ಗಬಾರದಾಗಿತ್ತು; ಅವರ ಇಕ್ಕಟ್ಟಿನ ವೇಳೆಯಲ್ಲಿ ಬಾಯಿ ಕಿಸಿಯ ಬಾರದಾಗಿತ್ತು.


ಇಸ್ರಾಯೇಲೇ, ಜನಾಂಗಗಳಂತೆ ವಿುತಿಮೀರಿ ಉಲ್ಲಾಸಿಸಬೇಡ; ನೀನು ನಿನ್ನ ದೇವರನ್ನು ಬಿಟ್ಟು ಸೂಳೆತನ ನಡಿಸಿದ್ದೀ; ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಆಶಿಸಿದ್ದೀ.


ಇಸ್ರಾಯೇಲ್ಯರ ಸ್ವಾಸ್ತ್ಯದ ನಾಶನಕ್ಕೆ ನೀನು ಹೇಗೆ ಸಂತೋಷಪಟ್ಟಿಯೋ ಹಾಗೆಯೇ ನಿನ್ನ ನಾಶನಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ತೀರಾ ಹಾಳಾಗುವದು; ಆಗ ನಾನೇ ಯೆಹೋವನು ಎಂದು ವ್ಯಕ್ತವಾಗುವದು.


ನರಪುತ್ರನೇ, ತೂರು ಯೆರೂಸಲೇವಿುನ ವಿಷಯವಾಗಿ - ಅಹಹ, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ, ನನ್ನ ಕಡೆಗೆ ತೆರೆದುಬಿಟ್ಟಿದೆ ; ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಅಂದುಕೊಂಡದರಿಂದ


ನಿನ್ನ ಶತ್ರು ಬಿದ್ದರೆ ಹಿಗ್ಗಬೇಡ, ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ!


ಫಿಲಿಷ್ಟಿಯರು ಯೆಹೂದದ ಇಳಕಲಿನ ಪ್ರದೇಶದ ಮತ್ತು ದಕ್ಷಿಣಪ್ರಾಂತದ ಪಟ್ಟಣಗಳ ಮೇಲೆ ಬಿದ್ದು ಬೇತ್ಷೆಮೆಷ್, ಅಯ್ಯಾಲೋನ್, ಗೆದೇರೋತ್ ಇವುಗಳನ್ನೂ ಸೋಕೋ, ತಿಮ್ನಾ, ಗಿಮ್ಜೋ ಇವುಗಳನ್ನೂ ಇವುಗಳಿಗೆ ಸೇರಿದ ಗ್ರಾಮಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿ ವಾಸವಾಗಿದ್ದರು.


ಗಾಜಪ್ರಾಂತದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ ಕಾವಲುಗಾರರ ಬುರುಜಿರುವ ಚಿಕ್ಕ ಹಳ್ಳಿ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ಹಾಳುಮಾಡಿದನು.


ಮೋಶೆ ಜನರಿಗೋಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ - ನೀನು [ತಾಮ್ರದಿಂದ] ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು; ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು ಎಂದು ಆಜ್ಞಾಪಿಸಿದನು.


ಯಾಕೋಬನ ಮನೆತನದವರು ಮೂಡಣ ದೇಶಗಳ [ಮಂತ್ರತಂತ್ರಗಳಲ್ಲಿ] ಮಗ್ನರೂ ಫಿಲಿಷ್ಟಿಯರ ಹಾಗೆ ಕಣಿಹೇಳುವವರೂ ಅನ್ಯದೇಶಗಳವರ ಸಂಗಡ ಒಪ್ಪಂದಮಾಡುವವರೂ ಆಗಿರುವದರಿಂದ ಈ ನಿನ್ನ ಜನರನ್ನು ಕೈಬಿಟ್ಟಿದ್ದೀಯಷ್ಟೆ.


ಇವು ಪಡುವಲಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವವು, ಜೊತೆಯಾಗಿ ಮೂಡಣದವರನ್ನು ಸೂರೆಗೊಳ್ಳುವವು; ಎದೋವಿುನ ಮತ್ತು ಮೋವಾಬಿನ ಮೇಲೆ ಕೈಮಾಡುವವು; ಅಮ್ಮೋನ್ಯರು ಇವುಗಳಿಗೆ ಅಧೀನರಾಗುವರು.


ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕುಂದಿಹೋಗಿರಿ! ಬಡಗಲಿಂದ ಹೊಗೆಯು ಬರುತ್ತಿದೆ. ಆ ವ್ಯೂಹದಲ್ಲಿ ಹಿಂದು ಬೀಳುವವರಿಲ್ಲ.


ಫರೋಹನು ಗಾಜಾ ಊರನ್ನು ಹೊಡೆದದ್ದಕ್ಕೆ ಮುಂಚಿತವಾಗಿ ಯೆಹೋವನು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ.


ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ [ನಿನ್ನನ್ನು] ಕೆಡವಿ ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಫಿಲಿಷ್ಟಿಯರು ಯೆಹೂದಕ್ಕೆ ಪ್ರತೀಕಾರಮಾಡಿದ್ದಾರೆ; ಹೌದು, ಮುಯ್ಯಿಗೆ ಮುಯ್ಯಿತೀರಿಸುತ್ತಾ ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ;


ತೂರೇ, ಚೀದೋನೇ, ಫಿಲಿಷ್ಟಿಯ ರಾಷ್ಟ್ರಗಳೇ, ನನ್ನ ಗೊಡವೆ ನಿಮಗೇಕೆ? ನನಗೆ ಪ್ರತೀಕಾರಮಾಡುವಿರೋ? ಸುಮ್ಮನೆ ತಂಟೆಮಾಡುವಿರೋ? ನೀವು ಮಾಡುವ ಕೇಡನ್ನು ತ್ವರೆಯಾಗಿ, ಶೀಘ್ರವಾಗಿ ನಿಮ್ಮ ತಲೆಗೇ ತರುವೆನು.


ಯೆಹೋವನು ಇಂತೆನ್ನುತ್ತಾನೆ - ಗಾಜವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋವಿುಗೆ ವಶಮಾಡಿಬಿಟ್ಟಿತಷ್ಟೆ.


ನಾನು ಅಷ್ಡೋದಿನೊಳಗಿಂದ ಸಿಂಹಾಸನಾಸೀನನನ್ನೂ ಅಷ್ಕೆಲೋನಿನೊಳಗಿಂದ ರಾಜದಂಡಧಾರಿಯನ್ನೂ ನಿರ್ಮೂಲ ಮಾಡಿ ಎಕ್ರೋನಿನ ಮೇಲೆ ಕೈಯೆತ್ತುವೆನು; ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು; ಇದು ಕರ್ತನಾದ ಯೆಹೋವನ ನುಡಿ.


ಗಾಜ ನಿರ್ಜನವಾಗುವದು, ಅಷ್ಕೆಲೋನ್ ಹಾಳಾಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಓಡಿಸಿಬಿಡುವರು, ಎಕ್ರೋನ್ ನಿರ್ಮೂಲವಾಗುವದು.


ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ನಿವಾಸಿಯೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು.


ಅಷ್ಕೆಲೋನು ಇದನ್ನು ನೋಡಿ ಹೆದರುವದು; ಗಾಜವು ಸಹ ಅತಿಸಂಕಟಪಡುವದು; ಎಕ್ರೋನು ನಿರೀಕ್ಷೆಗೆಟ್ಟು ಬಹು ವ್ಯಥೆಗೆ ಒಳಗಾಗುವದು; ಗಾಜಕ್ಕೆ ರಾಜನೇ ಇಲ್ಲವಾಗುವನು; ಅಷ್ಕೆಲೋನು ನಿರ್ಜನವಾಗುವದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು