ಯೆಶಾಯ 14:30 - ಕನ್ನಡ ಸತ್ಯವೇದವು J.V. (BSI)30 [ನನ್ನ ಜನರಲ್ಲಿ] ಬಡತನದ ಹಿರಿಯ ಮಕ್ಕಳಿಗೂ ಪೋಷಣೆಯಾಗುವದು, ದಿಕ್ಕಿಲ್ಲದವರೂ ನಿರ್ಭಯವಾಗಿ ಮಲಗಿಕೊಳ್ಳುವರು; ನಿಮ್ಮ ಸಂತಾನವನ್ನೋ ಕ್ಷಾಮದಿಂದ ಸಾಯಿಸುವೆನು, ನಿಮ್ಮಲ್ಲಿ ಉಳಿದವರನ್ನು [ಆ ಸರ್ಪವೇ] ಕೊಲ್ಲುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಬಡವರಲ್ಲಿ ಹಿರಿಯ ಮಕ್ಕಳು ಆಹಾರವನ್ನು ಕಂಡುಕೊಳ್ಳುವರು. ದಿಕ್ಕಿಲ್ಲದವರೂ ನಿರ್ಭಯವಾಗಿ ಮಲಗಿಕೊಳ್ಳುವರು. ಆದರೆ ನಿಮ್ಮ ಸಂತಾನವನ್ನೋ ಕ್ಷಾಮದಿಂದ ಸಾಯಿಸುವೆನು, ನಿಮ್ಮಲ್ಲಿ ಉಳಿದವರನ್ನು (ಆ ಸರ್ಪವೇ) ಕ್ಷಾಮವು ಕೊಲ್ಲುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಪೋಷಣೆ ಪಡೆಯುವರು ದೀನದಲಿತರು, ನಿರ್ಭಯದಿಂದ ನಿದ್ರಿಸುವರು ದಿಕ್ಕಿಲ್ಲದವರು. ನಿನ್ನ ಸಂತಾನದವರಾದರೋ ಸಾಯುವರು ಕ್ಷಾಮದಿಂದ, ಅಳಿದುಳಿದವರು ಹತರಾಗುವರು ಆ ಘಟಸರ್ಪದಿಂದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆದರೆ ನನ್ನ ಬಡಜನರು ಸುರಕ್ಷಿತವಾಗಿ ಊಟಮಾಡುವರು. ಅವರ ಮಕ್ಕಳೂ ಸುರಕ್ಷಿತವಾಗಿರುವರು. ನನ್ನ ಬಡಜನರು ಹಾಯಾಗಿ ಮಲಗಿ ಸುರಕ್ಷಿತರಾಗಿರುವರು. ಆದರೆ ನಿಮ್ಮ ಸಂತಾನದವರು ಹಸಿವೆಯಿಂದ ಸಾಯುವಂತೆ ಮಾಡುವೆನು. ನಿಮ್ಮ ದೇಶದಲ್ಲಿ ಉಳಿದಿರುವ ಜನರೆಲ್ಲರೂ ಸಾಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಬಡವರಲ್ಲಿ ಬಡವರಾದವರು ಆಹಾರ ಕಂಡುಕೊಳ್ಳುವರು. ಕೊರತೆಯಲ್ಲಿರುವವರು ಸುರಕ್ಷಿತವಾಗಿ ನಿದ್ರಿಸುವರು. ಆದರೆ ನಿನ್ನ ಸಂತಾನದವರೋ ಕ್ಷಾಮದಿಂದ ಹತರಾಗುವರು. ನಿನ್ನಲ್ಲಿ ಉಳಿದವರನ್ನು ಅದು ಹತಮಾಡುವುದು. ಅಧ್ಯಾಯವನ್ನು ನೋಡಿ |