Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:32 - ಕನ್ನಡ ಸತ್ಯವೇದವು J.V. (BSI)

32 ಹೀಗಿರಲು ಪರಜನಾಂಗದ ರಾಯಭಾರಿಗಳಿಗೆ ಏನುತ್ತರ ಕೊಡಬೇಕಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ದೀನದರಿದ್ರರು ಅದನ್ನೇ ಆಶ್ರಯಿಸಿಕೊಳ್ಳುವರು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಹೀಗಿರಲು ಜನಾಂಗಗಳ ರಾಯಭಾರಿಗಳಿಗೆ ಏನು ಉತ್ತರ ಕೊಡಬೇಕೆಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಬಾಧೆಪಟ್ಟ ಆತನ ಜನರು ಅದನ್ನು ಆಶ್ರಯಿಸಿಕೊಳ್ಳುವರು ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಹೊರನಾಡಿನ ರಾಯಭಾರಿಗಳಿಗೆ ನಮ್ಮ ಉತ್ತರವೇನು? “ಸರ್ವೇಶ್ವರ ಸ್ವಾಮಿ ಸ್ಥಾಪಿಸಿಹರು ಸಿಯೋನನ್ನು, ದೀನದಲಿತರು ಆಶ್ರಯಿಸಿಕೊಳ್ಳುವರು ಅದನ್ನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆ ಸೈನ್ಯದವರು ತಮ್ಮ ದೇಶಕ್ಕೆ ಸಂದೇಶವಾಹಕರನ್ನು ಕಳುಹಿಸುತ್ತಾರೆ. ಆ ಸಂದೇಶವು ಏನಿರಬಹುದು? “ಫಿಲಿಷ್ಟಿಯರು ಸೋತುಹೋದರು. ಆದರೆ ಯೆಹೋವನು ಚೀಯೋನನ್ನು ಬಲಪಡಿಸಿದ್ದಾನೆ. ಆತನ ಬಡಜನರು ರಕ್ಷಣೆಗಾಗಿ ಅಲ್ಲಿಗೆ ಹೋಗಿದ್ದಾರೆ” ಎಂಬುದೇ ಆ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡಬೇಕು? “ಯೆಹೋವ ದೇವರು ಚೀಯೋನನ್ನು ಸ್ಥಾಪಿಸಿದ್ದಾರೆ. ಬಾಧೆಪಟ್ಟ ಅವರ ಜನರು ಅದನ್ನು ಆಶ್ರಯಿಸಿಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:32
30 ತಿಳಿವುಗಳ ಹೋಲಿಕೆ  

ಆತನು ಮಹಿಮೆಯಲ್ಲಿ ಬಂದು ಚೀಯೋನನ್ನು ತಿರಿಗಿ ಕಟ್ಟಿಸಿದನೆಂದೂ


ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವದು; ಅದನ್ನು ಪರಾತ್ಪರನು ತಾನೇ ಸ್ಥಿರಪಡಿಸುವನು.


ನನ್ನ ಪ್ರಿಯ ಸಹೋದರರೇ, ಕೇಳಿರಿ, ದೇವರು ಲೌಕಿಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇವಿುಸಲಿಲ್ಲವೋ?


ದೀನದರಿದ್ರಜನವನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು.


ಯೆಹೋವನು ಸ್ಥಾಪಿಸಿದ್ದು ಪರಿಶುದ್ಧ ಪರ್ವತಗಳಲ್ಲಿದೆ.


ನೀನು ದೀನರಿಗೆ ಕೋಟೆ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣದುರ್ಗ, ಬಿಸಿಲಿಗೆ ನೆರಳು, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.


ಆಗಲೇ ಮುರಿದುಹೋಯಿತು; ಇದರಿಂದ ಆ ದೀನವಾದ ಮಂದೆಯಲ್ಲಿ ನನ್ನನ್ನು ಲಕ್ಷಿಸುತ್ತಿದ್ದ ಕುರಿಗಳು ಇದು ಯೆಹೋವನ ನುಡಿ ಎಂದು ತಿಳುಕೊಂಡವು.


ಮತ್ತು ಕೋರೆಷನ ವಿಷಯವಾಗಿ - ಅವನು ನನ್ನ ಮಂದೆ ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ ಎಂದು ಹೇಳಿ ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು ಎಂಬದಾಗಿ ಮಾತಾಡುವವನಾಗಿದ್ದೇನೆ.


ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕಬಲದಾನನೆಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರವನ್ನೂ ಬಹುಮಾನವನ್ನೂ ಕಳುಹಿಸಿದನು.


ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ - ಇಗೋ, ಪರೀಕ್ಷಿತವಾಗಿಯೂ ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.


ಹಗಲಿನ ಬಿಸಿಲಲ್ಲಿ ನೆರಳನ್ನೂ ಸಣ್ಣ ದೊಡ್ಡ ಮಳೆಗಳಲ್ಲಿ ಆಶ್ರಯವನ್ನೂ ಕೊಡುವ ಮಂಟಪವಿರುವದು.


ನಿನ್ನ ಸೇವಕರ ಮಕ್ಕಳು ಬಾಳುವರು. ಅವರ ಸಂತತಿಯವರು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರುವರು ಎಂದು ಮೊರೆಯಿಡುತ್ತೇನೆ.


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇವಿುಗೂ ಉತ್ಸವಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ


ಮತ್ತು ನಾನೂ ನಿನಗೆ ಒಂದು ಮಾತನ್ನು ಹೇಳುತ್ತೇನೆ, ಅದೇನಂದರೆ - ನೀನು ಪೇತ್ರನು, ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುವೆನು; ಪಾತಾಳಲೋಕದ ಬಲವು ಅದನ್ನು ಸೋಲಿಸಲಾರದು.


ಆಗ ನಾನು ದೀನಾವಸ್ಥೆಯಲ್ಲಿದ್ದ ಆ ಕೊಯ್ಗುರಿಗಳ ಮಂದೆಯನ್ನು ಮೇಯಿಸಿದೆನು. ಎರಡು ಕೋಲುಗಳನ್ನು ತೆಗೆದುಕೊಂಡು ಒಂದಕ್ಕೆ ಕನಿಕರವೆಂತಲೂ ಇನ್ನೊಂದಕ್ಕೆ ಒಗ್ಗಟ್ಟೆಂತಲೂ ಹೆಸರಿಟ್ಟು ಅವುಗಳಿಂದ ಮಂದೆಯನ್ನು ಮೇಯಿಸಿದೆನು.


ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ, ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು.


ಯೆರೂಸಲೇವಿುನಲ್ಲಿ ಉಳಿದವರು ಹರಡಿಕೊಳ್ಳುವರು; ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿಹೊಂದುವರು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ಅಷ್ಟರಲ್ಲಿ ಕೂಷಿನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಹೊರಟಿದ್ದಾನೆಂಬ ಸುದ್ದಿಯನ್ನು ಅಶ್ಶೂರದ ಅರಸನು ಕೇಳಿ -


ಚೀಯೋನಿನ ನಿವಾಸಿಗಳೇ, ಕೂಗಿರಿ, ಉತ್ಸಾಹ ಧ್ವನಿಮಾಡಿರಿ; ಇಸ್ರಾಯೇಲ್ಯರ ಸದಮಲಸ್ವಾವಿುಯು ನಿಮ್ಮ ಮಧ್ಯದಲ್ಲಿ ಮಹತ್ತಾಗಿದ್ದಾನಷ್ಟೆ ಎಂಬದೇ.


ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು, ಲೋಕದ ದೀನರಿಗೋಸ್ಕರ ಧರ್ಮವಾಗಿ ನಿರ್ಣಯಿಸುವನು; ಲೋಕವನ್ನು ತನ್ನ ಬಾಯ ದಂಡದಿಂದ ದಂಡಿಸುವನು, ದುಷ್ಟರನ್ನು ತನ್ನ ಬಾಯುಸುರಿನಿಂದ ಕೊಲ್ಲುವನು.


ಯೆಹೋವನ ನಾಮವು ಬಲವಾದ ಬುರುಜು; ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.


(ತೋವಿಗೂ ಹದದೆಜೆರನಿಗೂ ವಿರೋಧವಿತ್ತು.) ದಾವೀದನು ಹದದೆಜೆರನ ಮೇಲೆ ಬಿದ್ದು ಅವನನ್ನು ಸೋಲಿಸಿದದರಿಂದ ತೋವು ದಾವೀದನನ್ನು ವಂದಿಸುವದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ತಾಮ್ರ ಬೆಳ್ಳಿ ಬಂಗಾರದ ಪಾತ್ರೆಗಳನ್ನು ತಂದನು.


ಯಾಕಂದರೆ ಅವನು ಶಾಶ್ವತವಾದ ಅಸ್ತಿವಾರಗಳುಳ್ಳ ಪಟ್ಟಣವನ್ನು ಅಂದರೆ ದೇವರು ಸಂಕಲ್ಪಿಸಿ ನಿರ್ಮಿಸಿದ ಪಟ್ಟಣವನ್ನು ಎದುರುನೋಡುತ್ತಿದ್ದನು.


ದೀನರು ಯೆಹೋವನಲ್ಲಿ ಹೆಚ್ಚುಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲ್ಯರ ಸದಮಲಸ್ವಾವಿುಯಲ್ಲಿ ಉಲ್ಲಾಸಿಸುವರು.


ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ಇವುಗಳೇ ನಿನ್ನನ್ನುದ್ಧರಿಸಲಿ. ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವದು, ಬರೀ ಉಸಿರಾದರೂ ಒಯ್ಯುವದು. ನನ್ನನ್ನು ಆಶ್ರಯಿಸುವವನೋ ದೇಶವನ್ನನುಭವಿಸಿ ನನ್ನ ಪರಿಶುದ್ಧಪರ್ವತವನ್ನು ಬಾಧ್ಯವಾಗಿ ಹೊಂದುವನು.


ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳ; ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ಯೆಹೋವನ ನೆಲೆ ಎಂಬ ಹೆಸರಾಗುವದು.


ರಾಜರು ಕೂಡಿಕೊಂಡರು; ಅವರು ಒಗ್ಗಟ್ಟಾಗಿ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು