Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:8 - ಕನ್ನಡ ಸತ್ಯವೇದವು J.V. (BSI)

8 ಹೌದು, ತುರಾಯಿಮರಗಳೂ ಲೆಬನೋನಿನ ದೇವದಾರು ವೃಕ್ಷಗಳೂ ನೀನು ಬಿದ್ದುಕೊಂಡ ಮೇಲೆ ಕಡಿಯುವವನು ಯಾವನೂ ನಮ್ಮ ತಂಟೆಗೆ ಬಂದಿಲ್ಲವೆಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೌದು, ತುರಾಯಿ ಮರಗಳೂ, ಲೆಬನೋನಿನ ದೇವದಾರು ವೃಕ್ಷಗಳೂ, ‘ನೀನು ಸುಮ್ಮನಿರುವುದರಿಂದ ನಮ್ಮನ್ನು ಕಡಿಯಲು ಯಾರೂ ಬರುವುದಿಲ್ಲ’ ಎಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಲಿಯುತಿಹವು ತುರಾಯಿ, ಲೆಬನೋನಿನ ದೇವದಾರು ವೃಕ್ಷಗಳು ಕೂಡಾ, ‘ಮಡಿದು ಹೋದನಿವನು, ಇನ್ನು, ಕಡಿವವರಾರು ನಮ್ಮನು?’ ಎನ್ನುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀನು ದುಷ್ಟ ಅರಸನಾಗಿದ್ದೆ, ಈಗ ನಿನಗೆ ಅಂತ್ಯವು ಬಂತು. ತುರಾಯಿ ಮರಗಳೂ ಲೆಬನೋನಿನ ದೇವದಾರು ವೃಕ್ಷಗಳೂ ಹರ್ಷಗೊಂಡಿವೆ. ಆ ಮರಗಳು ಹೀಗೆ ಹೇಳುತ್ತಿವೆ: ಅರಸನು ನಮ್ಮನ್ನು ಕಡಿದುರುಳಿಸಿದನು. ಈಗ ಅರಸನೇ ಉರುಳಿಬಿದ್ದಿದ್ದಾನೆ. ಅವನು ಮತ್ತೆಂದಿಗೂ ಏಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ತುರಾಯಿ ಮರಗಳೂ, ಲೆಬನೋನಿನ ದೇವದಾರು ಮರಗಳೂ, “ಈಗ ನೀನು ಬಿದ್ದದ್ದರಿಂದ ನಮ್ಮನ್ನು ಕಡಿಯಲು ಯಾರೂ ಬರುವುದಿಲ್ಲ,” ಎಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:8
5 ತಿಳಿವುಗಳ ಹೋಲಿಕೆ  

ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲಜನಾಂಗಗಳು ನಡುಗಿದವು; ಮತ್ತು [ಪೂರ್ವಕಾಲದಲ್ಲಿ] ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮ ವೃಕ್ಷಗಳು, ಅಂತು ನೀರಾವರಿಯ ಸಕಲ ವನಸ್ಪತಿಗಳೂ ಅಲ್ಲಿ ಸಂತೈಸಿಕೊಂಡವು.


ತುರಾಯಿ ಮರವೇ, ಗೋಳಾಡು! ದೇವದಾರು ಬಿದ್ದಿದೆ, ಶ್ರೇಷ್ಠವೃಕ್ಷಗಳು ನಾಶವಾಗಿವೆ. ಬಾಷಾನಿನ ಅಲ್ಲೋನ್ ಮರಗಳೇ, ಕಿರಚಿರಿ! ನುಗ್ಗಲಾಗದ ವನವು ಉರುಳಿದೆ.


ಯೆಹೋವನ ಗರ್ಜನೆಗೆ ದೇವದಾರುವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾ ದೇವದಾರುಗಳನ್ನೂ ಮುರಿದುಬಿಡುತ್ತಾನೆ.


ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ - ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು