Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 15:3 - ಕನ್ನಡ ಸತ್ಯವೇದವು J.V. (BSI)

3 ಬೀದಿಗಳಲ್ಲಿ ತಿರುಗುವವರು ನಡುವಿಗೆ ಗೋಣಿತಟ್ಟು ಸುತ್ತಿಕೊಂಡಿದ್ದಾರೆ; ತಮ್ಮ ತಮ್ಮ ಮಾಳಿಗೆಗಳ ಮೇಲೆಯೂ ಚೌಕಗಳಲ್ಲಿಯೂ ಎಲ್ಲರು ಅರಚುತ್ತಾ ಕಣ್ಣೀರನ್ನು ಸುರಿಸಿ ಸುರಿಸಿ ಇಳಿದು ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬೀದಿಗಳಲ್ಲಿ ತಿರುಗುವವರು ನಡುವಿಗೆ ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ ಮತ್ತು ತಮ್ಮ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ಎಲ್ಲರು ಅರಚುತ್ತಾ ಕಣ್ಣೀರನ್ನು ಸುರಿಸಿ ಸುರಿಸಿ ಗೋಳಾಡುತ್ತಾ ಇಳಿದು ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಗೋಣಿತಟ್ಟನುಟ್ಟು ತಿರುಗುತಿಹರು ಹಾದಿಬೀದಿಗಳಲಿ, ಕಣ್ಣೀರಿಡುತ ಸೊರಗಿಹರು ಮಳಿಗೆಗಳಲಿ, ಬೀದಿ ಚೌಕಗಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮೋವಾಬಿನ ಎಲ್ಲಾ ಕಡೆಗಳಲ್ಲೂ ಮನೆಯ ಚಾವಣಿಯ ಮೇಲೂ ಬೀದಿಗಳಲ್ಲೂ ಜನರು ಗೋಣಿತಟ್ಟುಗಳನ್ನು ಧರಿಸಿಕೊಂಡು ರೋಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ತಮ್ಮ ಬೀದಿಗಳಲ್ಲಿ ಗೋಣಿತಟ್ಟನ್ನು ತಾವೇ ಸುತ್ತಿಕೊಳ್ಳುವರು. ಪ್ರತಿಯೊಬ್ಬನು ತನ್ನ ಮನೆಯ ಮೇಲೆಯೂ, ಬೀದಿಗಳಲ್ಲಿಯೂ ಅರಚುತ್ತಾ ಬಹುಶೋಕದಿಂದ ಗೋಳಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 15:3
17 ತಿಳಿವುಗಳ ಹೋಲಿಕೆ  

ಹೇಗಂದರೆ - ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣೀತಟ್ಟು ಹೊದ್ದುಕೊಂಡು ಬೂದಿಯಲ್ಲಿ [ಕೂತುಕೊಂಡು] ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು.


ಯೆರೂಸಲೇವಿುನ ಮನೆಗಳೂ ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ ಆ ಮನೆಗಳೆಲ್ಲಾ ಹೊಲಸಾಗಿ ತೋಫೆತೆಂಬ ಸ್ಥಳಕ್ಕೆ ಸಮಾನವಾಗುವವು.


ಹೀಗಿರಲು ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ. ಬಹುಸಂಕಟದಿಂದ ಅಳುವೆನು, ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವದಕ್ಕೆ ತವಕಗೊಳ್ಳದಿರಿ ಅಂದೆನು.


ದಿವ್ಯದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ. ನಿನಗೆ ಏನಾಯಿತು? ನಿನ್ನ ಜನರೆಲ್ಲರೂ ಮಾಳಿಗೆಗಳನ್ನು ಹತ್ತಿದ್ದೇಕೆ?


ಬಯಿತ್ ಮತ್ತು ದೀಬೋನ್ ಊರುಗಳವರು ಅಳುವದಕ್ಕಾಗಿ ಪೂಜಾಸ್ಥಾನಗಳಿಗೆ ಹತ್ತಿದ್ದಾರೆ; ನೆಬೋವಿನಲ್ಲಿಯೂ ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ; ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಿದೆ.


ಗೋಡೆಯ ಮೇಲೆ ಹೋಗುತ್ತಿದ್ದ ಅರಸನು ಆ ಸ್ತ್ರೀಯ ಮಾತನ್ನು ಕೇಳಿದೊಡನೆ ತನ್ನ ಬಟ್ಟೆಗಳನ್ನು ಹರಿದುಕೊಂಡನು. ಆಗ ಅವನ ಮೈಮೇಲೆ ಗೋಣೀತಟ್ಟು ಇರುವದು ಜನರಿಗೆ ಕಂಡಿತು.


ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ - ನಿಮ್ಮ ಬಟ್ಟೆಗಳನ್ನು ಹರಕೊಂಡು ಗೋಣೀತಟ್ಟುಗಳನ್ನು ಕಟ್ಟಿಕೊಂಡು ಗೋಳಾಡುತ್ತಾ ಅಬ್ನೇರನ ಶವದ ಮುಂದೆ ನಡಿಯಿರಿ ಎಂದು ಆಜ್ಞಾಪಿಸಿ ತಾನು ಚಟ್ಟದ ಹಿಂದೆ ಹೋದನು.


ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು.


ಧನಿಕರೇ, ಕೇಳಿರಿ; ನಿಮಗೆ ಬರುವ ದುರ್ದಶೆಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.


ಸಾಯದೆ ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟವು ಆಕಾಶವನ್ನು ಮುಟ್ಟಿತು.


ಮತ್ತು ಸುಗಂಧಕ್ಕೆ ಬದಲಾಗಿ ಕೊಳೆ, ನಡುಪಟ್ಟಿಯಿದ್ದಲ್ಲಿ ಹಗ್ಗ, ಅಂದವಾಗಿ ಸೆಕ್ಕಿದ ಜಡೆಯ ಸ್ಥಾನದಲ್ಲಿ ಬೋಡು, ನಡುವಿನ ಶಲ್ಯಕ್ಕೆ ಪ್ರತಿಯಾಗಿ ಗೋಣೀಪಟ್ಟಿ, ಬೆಡಗಿಗೆ ಬದಲಾಗಿ ಬರೆ, ಇವು ಆಗುವವು.


ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು.


ಚೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕರಿಸಿದ್ದಾರೆ; ತಲೆಯ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇವಿುನ ಯುವತಿಯರು ತಲೆಗಳನ್ನು ನೆಲಕ್ಕೆ ಬೊಗ್ಗಿಸಿದ್ದಾರೆ.


ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವದು; ಎಲ್ಲರ ಮುಖದಲ್ಲಿಯೂ ನಾಚಿಕೆತೋರುವದು. ಎಲ್ಲರೂ ತಲೆ ಬೋಳಿಸಿಕೊಂಡಿರುವರು.


ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು, ನಿಮ್ಮ ಗಾಯನಗಳನ್ನೆಲ್ಲಾ ಶೋಕಗೀತಕ್ಕೆ ತಿರುಗಿಸುವೆನು; ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು ತಲೆಬೋಳಿಸಿಕೊಳ್ಳುವಂತೆ ಮಾಡುವೆನು; ನಿನ್ನ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವದು, ಅದು ಆದ ಮೇಲೂ ವ್ಯಾಕುಲವು ಇದ್ದೇ ಇರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು