ಯೆಶಾಯ 15:4 - ಕನ್ನಡ ಸತ್ಯವೇದವು J.V. (BSI)4 ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ; ಇವುಗಳ ರೋದನವು ಯಹಜಿನವರೆಗೂ ಕೇಳಬರುತ್ತದೆ; ಇದರಿಂದ ಮೋವಾಬಿನ ಭಟರು ಕಿರಚಿಕೊಳ್ಳುತ್ತಾರೆ; ಅದರ ಆತ್ಮವು ತನ್ನೊಳಗೆ ತತ್ತರಿಸುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ, ಇವುಗಳ ರೋದನವು ಯಹಜಿನ ಪಟ್ಟಣದವರೆಗೂ ಕೇಳಿಸುತ್ತದೆ. ಇದರಿಂದ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುತ್ತಾರೆ; ಅವರ ಹೃದಯಗಳು ಭಯದಿಂದ ತತ್ತರಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಕೂಗಿಕೊಳ್ಳುತಿಹವು ಹೆಷ್ಬೋನ್ ಎಲೆಯಾಲೆಗಳು, ಕೇಳಿಬರುತಿಹುದು ಯಹಚಿನವರೆಗೂ ಅವುಗಳ ರೋದನವು, ಕಿರಿಚಿಕೊಳ್ಳುತಿಹರು ಮೋವಾಬಿನ ಸೇನೆಯಾಳುಗಳು, ತತ್ತರಿಸಿ ಹೋಗಿಹವು ಅವರ ಗುಂಡಿಗೆಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಹೆಷ್ಬೋನ್ ಮತ್ತು ಎಲೆಯಾಲೆಯಲ್ಲಿರುವ ಜನರು ಗಟ್ಟಿಯಾಗಿ ಅಳುತ್ತಿದ್ದಾರೆ. ದೂರದಲ್ಲಿರುವ ಯಹಜ್ ಪಟ್ಟಣದವರಿಗೆ ಅವರ ರೋಧನವು ಕೇಳಿಸುತ್ತದೆ. ಸೈನಿಕರೂ ಭಯಗೊಂಡಿದ್ದಾರೆ. ಹೆದರಿಕೆಯಿಂದ ನಡುಗುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ, ಅವರ ಸ್ವರವು ಯಹಚ ಊರಿನವರೆಗೂ ಕೇಳಿಸುತ್ತದೆ. ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು. ಅವರ ಹೃದಯಗಳು ತತ್ತರಿಸುತ್ತವೆ. ಅಧ್ಯಾಯವನ್ನು ನೋಡಿ |