Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 15:5 - ಕನ್ನಡ ಸತ್ಯವೇದವು J.V. (BSI)

5 ನನ್ನ ಹೃದಯವು ಮೋವಾಬಿನ ನಿವಿುತ್ತವಾಗಿ ಮೊರೆಯಿಡುತ್ತದೆ; ಅಲ್ಲಿಂದ ಪಲಾಯನವಾದವರು ಚೋಯರಿಗೂ ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ, ಅಳುತ್ತಾ ಲೂಹೀಥ್ ದಿಣ್ಣೆಯನ್ನು ಹತ್ತುತ್ತಾರೆ, ಹೊರೊನಯಿವಿುನ ದಾರಿಯಲ್ಲಿ ನಡೆಯುತ್ತಾ ನಾಶನವಾದೆವಲ್ಲಾ ಎಂದು ದನಿಗೈಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ಹೃದಯವು ಮೋವಾಬಿನ ನಿಮಿತ್ತವಾಗಿ ಮೊರೆಯಿಡುತ್ತದೆ, ಅಲ್ಲಿಂದ ಪಲಾಯನವಾದವರು ಚೋಯರಿಗೂ, ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ, ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ, ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಧ್ವನಿಗೈಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮೊರೆಯಿಡುತ್ತಿದೆ ಎನ್ನ ಮನ ಮೋವಾಬಿನ ನಿಮಿತ್ತ, ಪಲಾಯನ ಗೈದವರು ಓಡುತಿಹರು ಚೋಯರತ್ತ, ಎಗ್ಲತ್ ಶೆಲಿಶೀಯ ದತ್ತ, ಹತ್ತಿಹರು ಲೂಹೀತ್ ದಿಣ್ಣೆಯನ್ನು ಅಳುತ್ತ, ಪಿಡಿದಿಹರು ಹೊರೋನಯಿಮಿನ ದಾರಿಯನು ಹಾಳಾದೆವೆಂದು ಧ್ವನಿಗೈಯುತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮೋವಾಬಿನ ಬಗ್ಗೆ ನನ್ನ ಹೃದಯವು ಮರುಗುತ್ತಿದೆ. ಜನರು ಸುರಕ್ಷತೆಗಾಗಿ ಅತ್ತಿತ್ತ ಓಡಾಡುತ್ತಿದ್ದಾರೆ. ಅವರು ಬಹುದೂರವಿರುವ ಚೋಯರಿಗೆ ಓಡುತ್ತಿದ್ದಾರೆ. ಎಗ್ಲತ್ ಶೆಲಿಶೀಯಕ್ಕೂ ಓಡುತ್ತಾರೆ. ಪರ್ವತಮಾರ್ಗವಾಗಿ ಲೂಹೀಥ್ ಗೆ ಹೋಗುತ್ತಿರುವಾಗ ಜನರು ಅಳುತ್ತಾ ಹೋಗುತ್ತಾರೆ. ಹೊರೊನಯಿಮಿಗೆ ಹೋಗುವ ಮಾರ್ಗದಲ್ಲಿ ಜನರು ಜೋರಾಗಿ ಅಳುತ್ತಾ ಹೋಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗುತ್ತದೆ. ಅಲ್ಲಿಂದ ಪಲಾಯನವಾದವರು ಚೋಗರ್ ಕಡೆಗೂ ಎಗ್ಲತ್ ಶೆಲಿಶೀಯ ಕಡೆಗೂ ಓಡಿಹೋಗುವರು. ಲೂಹೀತ್ ದಿಣ್ಣೆಯನ್ನು ಅಳುತ್ತಾ ಹತ್ತುವರು. ಏಕೆಂದರೆ ಹೊರೊನಯಿಮ್ ಊರಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ದನಿಗೈಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 15:5
23 ತಿಳಿವುಗಳ ಹೋಲಿಕೆ  

ಅಳುತ್ತಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ; ನಾಶವಾದೆವಲ್ಲಾ ಎಂಬ ಪ್ರಾಣಸಂಕಟ ಪ್ರಲಾಪವು ಹೊರೊನಯಿಮ್ ಇಳಿಜಾರಿನಲ್ಲಿ ಕೇಳಿಸುತ್ತದೆ.


ನಾಶನದ ಮೇಲೆ ನಾಶನವು, ಒಂದರ ಮೇಲೊಂದು ನಾಶನದ ಸುದ್ದಿಬರುತ್ತಿದೆ; ದೇಶವೆಲ್ಲಾ ಹಾಳಾಯಿತು; ತಟ್ಟನೆ ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ಭಗ್ನವಾದವು;


ನಾನಾದರೋ ಸಭಾ ಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವದನ್ನು ಬಿಡುವದಕ್ಕೆ ಆತುರಪಡಲಿಲ್ಲ; ಅನಿವಾರ್ಯ ವಿಪತ್ತಿನ ದಿನವನ್ನು ಅಪೇಕ್ಷಿಸಲಿಲ್ಲ; ನೀನೇ ಬಲ್ಲೆ; ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.


ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿವಿುತ್ತ ಗೋಳಾಡುವದು; ಯೆಹೋವನ ಮಂದೆಯು ಸೆರೆಯಾಗಿ ಹೋದದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವದು.


ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತವನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದುಹೋಗರು, ದನದ ಸದ್ದು ಕಿವಿಗೆ ಬೀಳದು, ಮೃಗಪಕ್ಷಿಗಳು ತೊಲಗಿಹೋಗಿವೆ.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನಿಂದ ದಿವ್ಯದರ್ಶನದ ತಗ್ಗಿಗೆ ಗಲಿಬಿಲಿಯ ದಿನ, ತುಳಿದಾಟದ ದಿನ, ಭ್ರಾಂತಿಯ ದಿನ, ಕೋಟೆಯು ಒಡೆದುಹೋಗಲು ಕೂಗು ಬೆಟ್ಟವನ್ನು ಮುಟ್ಟುವ ದಿನ ಬಂದಿದೆ.


ಈಗ ಯೆಹೋವನು ಹೇಳುವದೇನಂದರೆ - ಆಳಿನ ಒಂದೊಂದು ವರುಷ ವಾಯಿದೆಗೆ ಸರಿಯಾದ ಮೂರು ವರುಷಕ್ಕೇ ಮೋವಾಬಿನ ಮಹಿಮೆಯೂ ಅಲ್ಲಿನವರ ದೊಡ್ಡ ಗುಂಪೂ ಹೀನಾಯಕ್ಕೆ ಈಡಾಗುವವು; ಉಳಿದ ಜನವು ಹೆಚ್ಚದೆ ಕೇವಲ ಸ್ವಲ್ಪವಾಗಿಯೇ ಇರುವದು ಎಂಬದೇ.


ದಾವೀದನು ಮೋರೆಯನ್ನು ಮುಚ್ಚಿಕೊಂಡು ಅಳುತ್ತಾ ಬರಿಗಾಲಿನಿಂದ ಎಣ್ಣೇಮರಗಳ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಏರಿದರು.


ಇವರೆಲ್ಲರೂ ಮುಂದೆ ನಡೆಯುವಾಗ ಸುತ್ತಣವರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲಾ ಜನರೂ ಕಿದ್ರೋನ್‍ಹಳ್ಳವನ್ನು ದಾಟಿ ಅರಣ್ಯಮಾರ್ಗ ಹಿಡಿದರು.


ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಅಲ್ಲಿಗೆ ಮುಟ್ಟುವ ತನಕ ನಾನೇನೂ ಮಾಡುವದಕ್ಕಾಗುವದಿಲ್ಲ ಅಂದನು. ಇದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.


ಈಗ ಲವಣಸಮುದ್ರವಾಗಿರುವ ಸಿದ್ದೀಮ್ ತಗ್ಗಿನೊಳಗೆ ಕೂಡಿದ್ದ ಸೊದೋವಿುನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿರ್ಶಗನು, ಅದ್ಮಾಹದ ಅರಸನಾದ ಶಿನಾಬನು, ಚೆಬೋಯೀವಿುನ ಅರಸನಾದ ಶೆಮೇಬರನು, ಬೇಲಗಿನ ಅಂದರೆ ಚೋಗರದ ಅರಸನು ಇವರೊಡನೆ ಯುದ್ಧಮಾಡಿದರು.


ಲೋಟನು ಕಣ್ಣೆತ್ತಿ ನೋಡಲಾಗಿ ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರೂರಿನ ತನಕ ಎಲ್ಲಾ ಕಡೆಯಲ್ಲಿಯೂ ನೀರಾವರಿಯ ಸ್ಥಳವೆಂದು ತಿಳುಕೊಂಡನು. ಯೆಹೋವನು ಸೊದೋಮ್‍ಗೊಮೋರ ಪಟ್ಟಣಗಳನ್ನು ನಾಶಮಾಡುವದಕ್ಕಿಂತ ಮುಂಚೆ ಆ ಸೀಮೆಯು ಯೆಹೋವನ ವನದಂತೆಯೂ ಐಗುಪ್ತದೇಶದಂತೆಯೂ ನೀರಾವರಿಯಾಗಿತ್ತು.


ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ; ಕೆಮೋಷಿನ ಭಕ್ತರೇ, ನಿಮಗೆ ದುರ್ಗತಿಯುಂಟಾಯಿತಲ್ಲಾ. ಆತನು ತನ್ನ ಗಂಡುಮಕ್ಕಳನ್ನು ದೇಶಭ್ರಷ್ಟರನ್ನಾಗಿಯೂ ತನ್ನ ಹೆಣ್ಣುಮಕ್ಕಳನ್ನು ಸೆರೆಯವರನ್ನಾಗಿಯೂ ಮಾಡಿದ್ದಾನಲ್ಲಾ. ಅಮೋರಿಯರ ಅರಸನಾದ ಸೀಹೋನನಿಗೆ ಸೆರೆಯವರಾದರು.


ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ಭಂಗವೂ ನಾಶನವೂ ಉಂಟಾಗುತ್ತವೆ;


ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತೇನೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತೂರಿಯ ಶಬ್ದವನ್ನೂ ಯುದ್ಧಘೋಷವನ್ನೂ ಕೇಳುತ್ತೀಯಲ್ಲಾ.


ಅಯ್ಯೋ, ಸೂರೆಹೋದೆವು, ಬಹು ನಾಶವಾದೆವು ಎಂಬ ಕೂಗಾಟವು ಹೊರೊನಯಿವಿುನಿಂದ ಕೇಳಬರುತ್ತದೆ!


ಬಾಬೆಲು ಶತ್ರುವಶವಾಯಿತೆಂಬ ಕೋಲಾಹಲಕ್ಕೆ ಭೂವಿುಯು ಕಂಪಿಸುತ್ತದೆ, ಅದರ ಮೊರೆಯು ಜನಾಂಗಗಳಲ್ಲಿ ಕೇಳಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು