Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 16:11 - ಕನ್ನಡ ಸತ್ಯವೇದವು J.V. (BSI)

11 ಆದದರಿಂದ ಮೋವಾಬಿನ ನಿವಿುತ್ತ ನನ್ನ ಹೃದಯವು, ಕೀರ್‍ಹೆರೆಸಿನ ನಿವಿುತ್ತ ನನ್ನ ಅಂತರಂಗವು, ಕಿನ್ನರಿಯಂತೆ ಅಲುಗಿ ನುಡಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದುದರಿಂದ ಮೋವಾಬಿನ ನಿಮಿತ್ತ ನನ್ನ ಹೃದಯವು, ಕೀರ್ ಹೆರೆಸಿನ ನಿಮಿತ್ತ ನನ್ನ ಅಂತರಂಗವು ಕಿನ್ನರಿಯಂತೆ ಅಲುಗಿ ನುಡಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮೋವಾಬಿನ ನಿಮಿತ್ತ ಮಿಡಿಯುತಿದೆಯೆನ್ನ ಮನ ದುಃಖದಿಂದ, ವೀಣೆಯ ತಂತಿಯಂತೆ ತುಡಿಯುತಿದೆಯೆನ್ನ ಅಂತರಂಗ ಕೀರ್ ಹೆರೆಷಿನ ನಿಮಿತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ಮೋವಾಬಿಗಾಗಿ ತುಂಬಾ ದುಃಖದಲ್ಲಿದ್ದೇನೆ. ನಾನು ಕೀರ್‌ಹೆರೆಸಿಗಾಗಿಯೂ ತುಂಬಾ ದುಃಖದಲ್ಲಿದ್ದೇನೆ. ಈ ನಗರಗಳಿಗಾಗಿ ನಾನು ಬಹಳವಾಗಿ ದುಃಖದಲ್ಲಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ಮೋವಾಬಿನ ನಿಮಿತ್ತ ನನ್ನ ಹೃದಯವೂ, ಕೀರ್ ಹೆರೆಸೆಥ್ ನಿಮಿತ್ತ ನನ್ನ ಅಂತರಂಗವೂ ಕಿನ್ನರಿಯಂತೆ ಮಿಡಿಯುತ್ತಾ ದುಃಖಿಸುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 16:11
10 ತಿಳಿವುಗಳ ಹೋಲಿಕೆ  

ನನ್ನ ಹೃದಯವು ಮೋವಾಬಿನ ನಿವಿುತ್ತವಾಗಿ ಮೊರೆಯಿಡುತ್ತದೆ; ಅಲ್ಲಿಂದ ಪಲಾಯನವಾದವರು ಚೋಯರಿಗೂ ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ, ಅಳುತ್ತಾ ಲೂಹೀಥ್ ದಿಣ್ಣೆಯನ್ನು ಹತ್ತುತ್ತಾರೆ, ಹೊರೊನಯಿವಿುನ ದಾರಿಯಲ್ಲಿ ನಡೆಯುತ್ತಾ ನಾಶನವಾದೆವಲ್ಲಾ ಎಂದು ದನಿಗೈಯುತ್ತಾರೆ.


ಕ್ರಿಸ್ತನಿಂದ ಉತ್ತೇಜನ, ಪ್ರೀತಿಯ ಪ್ರೇರಣೆ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವವಾದರೆ


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮದ ಗತಿಗೆ ಹೇಗೆ ತರಲಿ! ಚೆಬೋಯೀವಿುನಂತೆ ಹೇಗೆ ನಾಶಮಾಡಲಿ! ನನ್ನೊಳಗೆ ಮನಸ್ಸು ತಿರುಗಿತು, ಕರುಳು ತೀರಾ ಮರುಗಿತು.


ಆದದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿವಿುತ್ತ ನನ್ನ ಹೃದಯವು ಕೊಳಲುಗಳಂತೆ ಮೊರೆಯಿಡುತ್ತದೆ; ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿಯು ಮಾಯವಾಯಿತಲ್ಲಾ.


ಆಕಾಶದಿಂದ ನೋಡು, ಪರಿಶುದ್ಧವೂ ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಆಗ್ರಹವೆಲ್ಲಿ, ನಿನ್ನ ಸಾಹಸಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿಹಿಡಿದಿದ್ದೀ.


ಯೆಹೋವನು ಇಂತೆನ್ನುತ್ತಾನೆ - ಎಫ್ರಾಯೀಮು ನನಗೆ ಪ್ರಿಯಪುತ್ರನೋ, ಮುದ್ದುಮಗುವೋ, ಏನೋ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ; ಅವನನ್ನು ಕರುಣಿಸೇ ಕರುಣಿಸುವೆನು.


ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತೇನೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತೂರಿಯ ಶಬ್ದವನ್ನೂ ಯುದ್ಧಘೋಷವನ್ನೂ ಕೇಳುತ್ತೀಯಲ್ಲಾ.


ಈ ದರ್ಶನದಿಂದ ನನ್ನ ಸೊಂಟದಲ್ಲಿ ನೋವು ತುಂಬಿದೆ, ಪ್ರಸವವೇದನೆಯಂತಿರುವ ವೇದನೆಯು ನನ್ನನ್ನು ಹಿಡಿದಿದೆ, ಕಿವಿ ಕಿವುಡಾಗುವಷ್ಟು ಯಾತನೆಪಡುತ್ತೇನೆ, ಕಣ್ಣು ಕುರುಡಾಗುವಷ್ಟು ತತ್ತರಗೊಂಡಿದ್ದೇನೆ.


ಆದಕಾರಣ ನಾನು ಮೋವಾಬಿನ ನಿವಿುತ್ತ ಗೋಳಾಡುವೆನು; ಹೌದು, ಇಡೀ ದೇಶದ ದುರ್ಗತಿಯನ್ನು ನೋಡಿ ಪ್ರಲಾಪಿಸುವೆನು; ಕೀರ್ ಹೆರೆಸಿನವರ ವಿಷಯವಾಗಿ ನರಳಾಟವಾಗುವದು.


ಯೆಹೋವನೇ, ಕಟಾಕ್ಷಿಸು; ನಾನು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ, ನನ್ನ ಕರುಳು ಕುದಿಯುತ್ತದೆ. ನಾನು ಕೇವಲ ದ್ರೋಹಮಾಡಿದ್ದರಿಂದ ನನ್ನ ಹೃದಯವು ಮಗಚಿಕೊಂಡಿದೆ; ಮನೆಯ ಹೊರಗೆ ಸಂಹಾರ, ಒಳಗೆ ಪ್ರಾಣಸಂಕಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು