ಯೆಶಾಯ 16:14 - ಕನ್ನಡ ಸತ್ಯವೇದವು J.V. (BSI)14 ಈಗ ಯೆಹೋವನು ಹೇಳುವದೇನಂದರೆ - ಆಳಿನ ಒಂದೊಂದು ವರುಷ ವಾಯಿದೆಗೆ ಸರಿಯಾದ ಮೂರು ವರುಷಕ್ಕೇ ಮೋವಾಬಿನ ಮಹಿಮೆಯೂ ಅಲ್ಲಿನವರ ದೊಡ್ಡ ಗುಂಪೂ ಹೀನಾಯಕ್ಕೆ ಈಡಾಗುವವು; ಉಳಿದ ಜನವು ಹೆಚ್ಚದೆ ಕೇವಲ ಸ್ವಲ್ಪವಾಗಿಯೇ ಇರುವದು ಎಂಬದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಯೆಹೋವನು ತಿರುಗಿ ಹೇಳಿದ್ದೇನೆಂದರೆ, “ಮೂರು ವರ್ಷದೊಳಗೆ ಮೋವಾಬಿನ ವೈಭವವು ಕಣ್ಮರೆಯಾಗುವುದು. ಅವರ ದೊಡ್ಡ ಗುಂಪು ನಾಶವಾಗುವುದು ಅವರ ಜನರಲ್ಲಿ, ಉಳಿದವರು ಕೇವಲ ಚಿಕ್ಕ ಗುಂಪಾಗಿ ಬಲಹೀನರಾಗುವರು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸರ್ವೇಶ್ವರ ಇಂತೆನ್ನುತ್ತಾರೆ : “ಗುಲಾಮಗಿರಿಯ ಕಟ್ಟುನಿಟ್ಟಿನ ಲೆಕ್ಕಾಚಾರದಂತೆ, ಮೂರು ವರ್ಷದೊಳಗೆ ಮೋವಾಬಿನ ವೈಭವವು ಹೀನಾಯಕ್ಕೆ ಈಡಾಗುವುದು. ಅಲ್ಲಿನವರ ಅಗಣ್ಯ ಜನಸಂಖ್ಯೆಯಲ್ಲಿ ಅಳಿದುಳಿಯುವವರು ಕೆಲವೇ ದುರ್ಬಲರು". ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಈಗ ಯೆಹೋವನು ಹೇಳುವುದೇನೆಂದರೆ: “ಇನ್ನು ಮೂರು ವರ್ಷದೊಳಗೆ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಎಲ್ಲಾ ಜನರು ಮತ್ತು ಅವರು ಹೆಮ್ಮೆಪಡುವ ವಸ್ತುಗಳು ಹೋಗಿಬಿಡುತ್ತವೆ. ಕೇವಲ ಸ್ವಲ್ಪ ಮಂದಿ ಮಾತ್ರ ಉಳಿಯುವರು. ದೇಶದಲ್ಲಿ ಹೆಚ್ಚುಮಂದಿ ಉಳಿಯರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ಈಗ ಯೆಹೋವ ದೇವರು ಮಾತನಾಡಿ, “ಗುಲಾಮಗಿರಿಯ ಕಟ್ಟುನಿಟ್ಟಿನ ಲೆಕ್ಕಾಚಾರದಂತೆ, ಮೂರು ವರುಷದೊಳಗೆ ಮೋವಾಬಿನ ವೈಭವವು ಹೀನಾಯಕ್ಕೆ ಈಡಾಗುವುದು. ಅಲ್ಲಿನವರ ದೊಡ್ಡ ಜನಸಂಖ್ಯೆಯಲ್ಲಿ ಅಳಿದುಉಳಿಯುವವರು ಬಲಹೀನರಾದ ಕೆಲವು ಜನರಾಗಿರುವರು,” ಎಂದು ಹೇಳಿದ್ದಾರೆ. ಅಧ್ಯಾಯವನ್ನು ನೋಡಿ |