Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 16:5 - ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ಸಿಂಹಾಸನವು ಕೃಪಾಧಾರದ ಮೇಲೆ ಸ್ಥಾಪಿತವಾಗಿದೆ; ರಾಜ್ಯಭಾರಪ್ರವೀಣನೂ ಧರ್ಮಾಸಕ್ತನೂ ನ್ಯಾಯನಿಪುಣನೂ ಆದವನು ದಾವೀದನ ಗುಡಾರದಲ್ಲಿನ ಆ ಸಿಂಹಾಸನದ ಮೇಲೆ ಸತ್ಯಪರನಾಗಿ ಕುಳಿತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ ಸಿಂಹಾಸನವು ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ಸ್ಥಾಪಿತವಾಗುವುದು. ನ್ಯಾಯತೀರಿಸುವವನೂ, ನ್ಯಾಯವನ್ನು ಹುಡುಕುವವನೂ, ನೀತಿಗೋಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿನ ಆ ಸಿಂಹಾಸನದ ಮೇಲೆ ಸತ್ಯಪರನಾಗಿ ನೀತಿನ್ಯಾಯದಿಂದ ಕುಳಿತುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸ್ಥಾಪಿತವಾಗುವುದಾಗ ಅಚಲ ಒಲವಿನ ಸಿಂಹಾಸನವು, ಅದನಲಂಕರಿಸುವನು ಪ್ರಾಮಾಣಿಕ ದಾವೀದ ವಂಶಜನು. ದೊರಕಿಸುವನಾತ ನ್ಯಾಯನೀತಿಯನು, ಶೀಘ್ರದಲೆ ನೆರವೇರಿಸುವನು ಸರಿಕಂಡದುದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಹೊಸ ಅರಸನು ಬರುವನು. ಆತನು ನ್ಯಾಯವಾದವುಗಳನ್ನು ಮತ್ತು ಒಳ್ಳೆಯವುಗಳನ್ನು ಮಾಡುವನು. ಆತನು ದಾವೀದನ ವಂಶದವನಾಗಿದ್ದಾನೆ. ಆತನು ಪ್ರಾಮಾಣಿಕನೂ ಪ್ರೀತಿದಯೆಗಳಿಂದ ತುಂಬಿದವನೂ ಆಗಿರುವನು. ಆತನ ನ್ಯಾಯತೀರ್ಪು ನ್ಯಾಯಕ್ಕನುಸಾರವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಪ್ರೀತಿಯಲ್ಲಿ ಸಿಂಹಾಸನವು ಸ್ಥಾಪಿತವಾಗುವುದು. ನ್ಯಾಯತೀರಿಸುವವನೂ, ನ್ಯಾಯವನ್ನು ಹುಡುಕುವವನೂ, ನೀತಿಗೋಸ್ಕರ ತ್ವರೆಪಡುವವನೂ, ದಾವೀದನ ಗುಡಾರದಲ್ಲಿ ಅದರ ಮೇಲೆ ನಂಬಿಗಸ್ತಿಕೆಯಲ್ಲಿ ಕೂತುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 16:5
31 ತಿಳಿವುಗಳ ಹೋಲಿಕೆ  

ಸಕಲಜನಾಂಗ ಕುಲಭಾಷೆಗಳವರು ಅವನನ್ನು ಸೇವಿಸಲೆಂದು ಅವನಿಗೆ ದೊರೆತನವೂ ಘನತೆಯೂ ರಾಜ್ಯವೂ ಕೊಡೋಣವಾದವು; ಅವನ ಆಳಿಕೆಯು ಅಂತ್ಯವಿಲ್ಲದ್ದು, ಶಾಶ್ವತವಾದದ್ದು; ಅವನ ರಾಜ್ಯವು ಎಂದಿಗೂ ಅಳಿಯದು.


ಆ ಕುಂಟುಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು; ಯೆಹೋವನು ಚೀಯೋನ್ ಪರ್ವತದಲ್ಲಿ ಇಂದಿನಿಂದ ಎಂದೆಂದಿಗೂ ಅವರ ರಾಜನಾಗಿರುವನು.


ಆಗ ಅವನ ರಾಜ್ಯಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನ ಭಕ್ತಜನರಿಗೆ ಕೊಡೋಣವಾಗುವವು; ಆತನ ರಾಜ್ಯವು ಶಾಶ್ವತರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು ಎಂದು ಹೇಳಿದನು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ರಾಜನ ಕೃಪಾಸತ್ಯತೆಗಳು ಅವನನ್ನು ಕಾಯುವವು; ಅವನ ಕರುಣೆಯೇ ಅವನ ಸಿಂಹಾಸನಕ್ಕೆ ಆಧಾರ.


ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವವು; ನಿನ್ನ ಸಿಂಹಾಸನವು ಶಾಶ್ವತವಾಗಿರುವದು ಎಂಬದೇ.


ಆ ದಿನದಲ್ಲಿ ನಾನು ದಾವೀದನ ಬಿದ್ದು ಹೋಗಿರುವ ಗುಡಿಸಲನ್ನು ಎತ್ತಿ ಅದರ ಕಂಡಿಗಳನ್ನು ಮುಚ್ಚುವೆನು;


ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇವಿುಸಿದೆನು.


ಬಡವರನ್ನು ನ್ಯಾಯವಾಗಿ ಆಳುವ ರಾಜನ ಸಿಂಹಾಸನವು ಶಾಶ್ವತವು.


ಅರಸನ ಬಲವು ನೀತಿಯಲ್ಲಿ ಆಸಕ್ತವಾಗಿದೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.


ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.


ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.


ನೀತಿನ್ಯಾಯಗಳು ನಿನ್ನ ಸಿಂಹಾಸನದ ಅಸ್ತಿವಾರವು; ನಿನ್ನ ಸಾನ್ನಿಧ್ಯದೂತರು ಪ್ರೀತಿಸತ್ಯತೆಗಳೇ.


ಕೃಪೆಯೂ ಸತ್ಯವೂ ಒಂದನ್ನೊಂದು ಕೂಡಿರುವವು; ನೀತಿಯೂ ಸಮಾಧಾನವೂ ಮುದ್ದಿಟ್ಟುಕೊಳ್ಳುವವು.


ಹಿಜ್ಕೀಯನು ಯೆಹೂದದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಯೆಹೋವನಿಗೆ ಒಳ್ಳೆಯವನೂ ನೀತಿವಂತನೂ ನಂಬಿಗಸ್ತನೂ ಆಗಿ ನಡೆದನು.


ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ಆತನು ಇಸ್ರಾಯೇಲ್ಯರನ್ನು ಸದಾ ಪ್ರೀತಿಸುವವನಾಗಿರುವದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇವಿುಸಿದ್ದಾನೆ ಎಂದು ಹೇಳಿದಳು.


ಇಸ್ರಾಯೇಲ್ಯರ ಶರಣನೂ ದೇವರೂ ಆಗಿರುವಾತನು ಹೇಳಿದ್ದೇನಂದರೆ - ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು


ದಾವೀದನು ಆ ಕೋಟೆಗೆ ದಾವೀದನಗರವೆಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಾ ಅದರ ಸುತ್ತಲೂ ವಿುಲ್ಲೋವಿನಿಂದ ಪ್ರಾರಂಭಿಸಿ ಒಳಗಣ ಪೌಳಿಗೋಡೆಯನ್ನು ಕಟ್ಟಿಸಿದನು.


ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಧರ್ಮವಿಧಾಯಕ, ಯೆಹೋವನು ನಮ್ಮ ರಾಜ; ಆತನೇ ನಮ್ಮನ್ನು ರಕ್ಷಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು