ಯೆಶಾಯ 16:7 - ಕನ್ನಡ ಸತ್ಯವೇದವು J.V. (BSI)7 ಆದಕಾರಣ ಮೋವಾಬಿನ ನಿವಿುತ್ತ ಮೋವಾಬೇ ಗೋಳಾಡುವದು; ಪ್ರತಿಯೊಬ್ಬನೂ ಪ್ರಲಾಪಿಸುವನು; ಮುರಿದು ಹೋದವರಾಗಿ ನೀವು ಕೀರ್ ಹರೆಷೆಥಿನ ದೀಪದ್ರಾಕ್ಷೆಯು ಹಾಳಾಯಿತಲ್ಲಾ ಎಂದು ನರಳುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದಕಾರಣ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವುದು. ಪ್ರತಿಯೊಬ್ಬನೂ ಪ್ರಲಾಪಿಸುವನು. ನೀವು ಕೀರ್ ಹರೆಷೆಥಿನ ಜನರ ದೀಪದ್ರಾಕ್ಷೆಯ ಕಡುಬು ಹಾಳಾಯಿತಲ್ಲಾ ಎಂದು ನರಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇದಕಾರಣ ಮೋವಾಬ್ಯರೇ ಗೋಳಾಡಲಿ, ಪ್ರಲಾಪಿಸಲಿ ಪ್ರತಿಯೊಬ್ಬನು ಮೋವಾಬಿಗಾಗಿ, ಕೀರ್ ಹರೆಷೆಥಿನ ದೀಪದ್ರಾಕ್ಷಿಯ ಕಡುಬಿಗಾಗಿ, ನೆನೆದು ನರಳಿ ಹಲುಬಲಿ ಅದಕ್ಕಾಗಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆ ಜಂಬದ ಪರಿಣಾಮವಾಗಿ ಇಡೀ ಮೋವಾಬ್ ಪ್ರದೇಶ ಸಂಕಟಕ್ಕೊಳಗಾಗುವದು. ಮೋವಾಬಿನ ಜನರೆಲ್ಲಾ ಅಳುವರು. ಜನರು ತಮಗೆ ಹಿಂದೆ ಇದ್ದದ್ದೆಲ್ಲಾ ಬೇಕು ಎನ್ನುತ್ತಾ ದುಃಖಿಸುವರು. ಕೀರ್ ಹರೆಷೆಥಿನಲ್ಲಿ ತಯಾರಿಸಿದ ಅಂಜೂರದ ತಿಂಡಿ ಪದಾರ್ಥಗಳು ತಮಗೆ ಬೇಕು ಅನ್ನುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದ್ದರಿಂದ ಮೋವಾಬಿನ ನಿಮಿತ್ತ ಮೋವಾಬ್ಯರು ಗೋಳಾಡುವರು, ಒಟ್ಟಾಗಿ ಗೋಳಾಡುವರು. ಏಕೆಂದರೆ ಕೀರ್ ಹರೆಷೆಥಿನ ದ್ರಾಕ್ಷಿಯ ಕಡುಬುಗಳಿಗೋಸ್ಕರ ನೀವು ದುಃಖಿಸುವಿರಿ. ನಿಜವಾಗಿಯೂ ಅವರು ನೊಂದು ಹೋಗಿದ್ದಾರೆ. ಅಧ್ಯಾಯವನ್ನು ನೋಡಿ |
ಇದಲ್ಲದೆ ಇಸ್ಸಾಕಾರ್ ಜೆಬುಲೂನ್ ನಫ್ತಾಲಿ ಮೊದಲುಗೊಂಡು ಎಲ್ಲಾ ಸಮೀಪ ಪ್ರಾಂತಗಳವರು ಎತ್ತು, ಕತ್ತೆ, ಹೇಸರಕತ್ತೆ, ಒಂಟೆ ಇವುಗಳ ಮೇಲೆ ಆಹಾರಪದಾರ್ಥಗಳನ್ನು ಹೇರಿಕೊಂಡು ಬಂದರು. ಅವರು ತಂದವುಗಳಾವವಂದರೆ - ತರತರದ ರೊಟ್ಟಿ, ಅಂಜೂರ ಹಣ್ಣಿನ ಉಂಡೆ, ಒಣಗಿದ ದ್ರಾಕ್ಷೇಗೊಂಚಲು, ದ್ರಾಕ್ಷಾರಸ, ಎಣ್ಣೆ, ಅನೇಕ ದನಕುರಿಗಳು ಇವೇ. ಇಸ್ರಾಯೇಲ್ಯರೊಳಗೆ ಮಹಾ ಸಂತೋಷವಿತ್ತಷ್ಟೆ.