ಯೆಶಾಯ 16:9 - ಕನ್ನಡ ಸತ್ಯವೇದವು J.V. (BSI)9 ಹೀಗಿರಲು ಸಿಬ್ಮದ ದ್ರಾಕ್ಷಾಲತೆಯ ನಿವಿುತ್ತ ಯಜ್ಜೇರಿನವರೊಂದಿಗೆ ನಾನು ಅಳುವೆನು. ಹೆಷ್ಬೋನೇ, ಎಲ್ಲಾಲೇ, ನನ್ನ ಕಣ್ಣೀರಿನಿಂದ ನಿಮ್ಮನ್ನು ತೋಯಿಸುವೆನು; ನಿಮ್ಮ ಹಣ್ಣಿನ ಮೇಲೆಯೂ ಬೆಳೆಯ ಮೇಲೆಯೂ ಬಿದ್ದು ಆರ್ಭಟಿಸುತ್ತಾರೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹೀಗಿರಲು ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ ಯಜ್ಜೇರಿನವರೊಂದಿಗೆ ನಾನು ಅಳುವೆನು. ಹೆಷ್ಬೋನೇ, ಎಲ್ಲಾಲೇ ನನ್ನ ಕಣ್ಣೀರಿನಿಂದ ನಿಮ್ಮನ್ನು ತೋಯಿಸುವೆನು. ನಿಮ್ಮ ಹಣ್ಣಿನ ಮೇಲೆಯೂ, ನಿಮ್ಮ ಬೆಳೆಯ ಮೇಲೆಯೂ ಬಿದ್ದು ಆರ್ಭಟಿಸುವುದನ್ನು ನಿಲ್ಲಿಸಿಬಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಎಂದೇ ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ, ಕಣ್ಣೀರಿಡುವೆನು ಯಜ್ಜೇರಿನವರ ಸಮೇತ, ತೋಯಿಸುತಿಹೆನು ಹೆಷ್ಬೋನನು, ಎಲ್ಲಾನನು ಕಣ್ಣೀರಿಂದ, ಏಕೆನೆ ಇಲ್ಲವಾಗಿದೆ ಅಲ್ಲಿ ಹಣ್ಣುಹಂಪಲು ಸುಗ್ಗಿಯ ಗೀತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದ್ರಾಕ್ಷಾಫಲವು ನಾಶವಾಗಿರುವದಕ್ಕಾಗಿ ನಾನು ಯೆಜ್ಜೇರ್ ಮತ್ತು ಸಿಬ್ಮದವರೊಂದಿಗೆ ಅಳುವೆನು. ಸುಗ್ಗಿ ಇಲ್ಲದಿರುವದಕ್ಕಾಗಿ ನಾನು ಹೆಷ್ಬೋನ್ ಮತ್ತು ಎಲೆಯಾಲೆಯ ಜನರೊಂದಿಗೆ ಅಳುವೆನು. ಬೇಸಿಗೆ ಕಾಲದ ಹಣ್ಣುಗಳಿರದು; ಹರ್ಷಧ್ವನಿಯೂ ಇರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದಕಾರಣ ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ ಯಜ್ಜೇರ್ ಪಟ್ಟಣದೊಂದಿಗೆ ಅಳುವೆನು. ಓ ಹೆಷ್ಬೋನ್ ಮತ್ತು ಎಲೆಯಾಲೆ ಪಟ್ಟಣಗಳೇ, ನಿಮ್ಮನ್ನು ನನ್ನ ಕಣ್ಣೀರಿನಿಂದ ತೋಯಿಸುವೆನು! ಏಕೆಂದರೆ ಶತ್ರುಗಳು ಬಿದ್ದುಹೋದ ನಿಮ್ಮ ಬೇಸಿಗೆಯ ಫಲಗಳಿಗೂ, ಬೆಳೆಗಳಿಗೂ ಆರ್ಭಟಿಸುತ್ತಾರೆ. ಅಧ್ಯಾಯವನ್ನು ನೋಡಿ |