Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:1 - ಕನ್ನಡ ಸತ್ಯವೇದವು J.V. (BSI)

1 ದಮಸ್ಕದ ವಿಷಯವಾದ ದೈವೋಕ್ತಿ. ಆಹಾ ದಮಸ್ಕವು ಇನ್ನು ಊರಾಗಿರದೆ ಹಾಳು ದಿಬ್ಬವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಮಸ್ಕದ ವಿಷಯವಾದ ದೈವೋಕ್ತಿ. “ಆಹಾ, ದಮಸ್ಕವು ಇನ್ನು ಪಟ್ಟಣವಾಗಿರದೇ ಹಾಳು ದಿಬ್ಬವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದಮಸ್ಕಸ್ ವಿಷಯವಾಗಿ ದೈವೋಕ್ತಿ : “ಇದೋ, ದಮಸ್ಕಸ್ ಊರಾಗಿ ಉಳಿಯದು, ಅದೊಂದು ಹಾಳುದಿಬ್ಬವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದಮಸ್ಕಕ್ಕೆ ಇದು ದುಃಖಕರವಾದ ಸಂದೇಶ. ಯೆಹೋವನು ಹೇಳುವುದೇನೆಂದರೆ, “ದಮಸ್ಕವು ಈಗ ಒಂದು ದೊಡ್ಡ ನಗರವಾಗಿದೆ. ಆದರೆ ಅದು ನಾಶವಾಗುವದು. ಕೆಡವಲ್ಪಟ್ಟ ಕಟ್ಟಡಗಳು ಮಾತ್ರವೇ ದಮಸ್ಕದಲ್ಲಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದಮಸ್ಕದ ವಿಷಯವಾದ ಪ್ರವಾದನೆ: ಇಗೋ, ದಮಸ್ಕವು ಇನ್ನು ಪಟ್ಟಣವಾಗಿರದೆ ಅದು ಹಾಳು ದಿಬ್ಬವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:1
24 ತಿಳಿವುಗಳ ಹೋಲಿಕೆ  

ಯೆಹೋವನು ನುಡಿದ ದೈವೋಕ್ತಿಯು ಹದ್ರಾಕ್ ದೇಶದ ಮೇಲೆ ಬಿದ್ದಿದೆ, ದಮಸ್ಕವೇ ಅದಕ್ಕೆ ಈಡು; ಯೆಹೋವನು ನರವಂಶದ ಮೇಲೆ ಕಣ್ಣಿಟ್ಟಿದ್ದಾನೆ, ಹೌದು, ಇಸ್ರಾಯೇಲಿನ ಸಕಲ ಕುಲಗಳಲ್ಲಿಯೂ


ನೀನು ದುರ್ಗವನ್ನು ನಾಶಪಡಿಸಿ ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಬಾರದ ಹಾಳೂರನ್ನಾಗಿಯೂ ಮಾಡಿದ್ದೀ.


ಆ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇವಿುಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರದವರಿಗೆ ನೀನು ಕಾಗದವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.


ಆದಕಾರಣ ನಾನು ಸಮಾರ್ಯವನ್ನು ಹೊಲದಲ್ಲಿನ ಹಾಳು ದಿಬ್ಬವನ್ನಾಗಿಯೂ ದ್ರಾಕ್ಷೆಯ ತೋಟದ ಮಡಿಗಳನ್ನಾಗಿಯೂ ಮಾಡುವೆನು; ಅದರ ಕಲ್ಲುಗಳನ್ನು ತಗ್ಗಿಗೆ ಸುರಿದು ಬಿಡುವೆನು; ಅದರ ಅಸ್ತಿವಾರಗಳನ್ನು ಬೈಲುಮಾಡುವೆನು.


ಆದದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು ಯುದ್ಧಘೋಷಮಾಡುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವದು. ಇದು ಯೆಹೋವನ ನುಡಿ.


ಅರಾವಿುಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನನಷ್ಟೆ; ಎಫ್ರಾಯೀವಿುಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನೇ ತಾನೆ.


ಆಗ ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗ ಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು ಹೊಡೆದು ದಮಸ್ಕಪಟ್ಟಣದ ಉತ್ತರ ಕಡೆಯಲ್ಲಿರುವ ಹೋಬಾ ಊರಿನ ತನಕ ಹಿಂದಟ್ಟಿದನು.


ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು.


ಇದನ್ನು ನೀನು ಕೇಳಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು; ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು;


ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗಮೇಘವಾಹನನಾಗಿ ಐಗುಪ್ತಕ್ಕೆ ಬರುವನು; ಆತನು ಸಮ್ಮುಖನಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತ್ಯರ ಹೃದಯವು ತಮ್ಮೊಳಗೆ ಕರಗಿ ನೀರಾಗುವದು.


ಮೋವಾಬಿನ ವಿಷಯವಾದ ದೈವೋಕ್ತಿ. ಒಂದು ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿರ್ಮೂಲವಾಯಿತಲ್ಲಾ! ಹೌದು, ಒಂದು ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವೂ ಹಾಳಾಗಿ ನಿರ್ಮೂಲವಾಯಿತು.


ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.


ಕರ್ಕೆಮೀಷಿನ ಗತಿಯು ಕಲ್ನೋವಿಗೂ ಆಯಿತಲ್ಲವೆ, ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಷ್ಟೆ; ದಮಸ್ಕದ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತಲ್ಲಾ.


ಆ ಮಗುವು ಅಪ್ಪಾ, ಅಮ್ಮಾ, ಎಂದು ಕೂಗಬಲ್ಲದಾಗುವದರೊಳಗೆ ಅಶ್ಶೂರದ ಅರಸನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ಹೊರಿಸಿಕೊಂಡು ಹೋಗುವನು ಎಂದು ಹೇಳಿದನು.


ಹೇಗಂದರೆ - ಅರಾಮ್‍ರಾಜರ ದೇವತೆಗಳು ಅವರಿಗೆ ಜಯವನ್ನನುಗ್ರಹಿಸಿದವಲ್ಲಾ; ನಾನೂ ಅವುಗಳಿಗೆ ಯಜ್ಞಸಮರ್ಪಿಸುವೆನು, ಆಗ ನನಗೂ ಜಯವಾಗುವದು ಎಂದುಕೊಂಡು ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಯಜ್ಞಸಮರ್ಪಿಸುವವನಾದನು. ಆ ದೇವತೆಗಳ ದೆಸೆಯಿಂದ ಅವನಿಗೂ ಎಲ್ಲಾ ಇಸ್ರಾಯೇಲ್ಯರಿಗೂ ಕೇಡುಂಟಾಯಿತು.


ಆದದರಿಂದ ಅವನ ದೇವರಾದ ಯೆಹೋವನು ಅವನನ್ನು ಅರಾಮ್ಯರ ಅರಸನ ಕೈಗೆ ಒಪ್ಪಿಸಿದನು; ಅರಾಮ್ಯರು ಅವನನ್ನು ಸೋಲಿಸಿ ಅವನ ಜನರಲ್ಲಿ ದೊಡ್ಡ ಗುಂಪನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು ಅವನಿಂದಲೂ ಪೂರ್ಣವಾಗಿ ಅಪಜಯಹೊಂದಿದನು.


ಅವನು ಇವನ ಮಾತಿಗೆ ಒಪ್ಪಿ ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು ಕೀರ್ ಪ್ರಾಂತಕ್ಕೆ ಒಯ್ದನು.


ಅದಕ್ಕೆ ಅಬ್ರಾಮನು - ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನಾಗಿ ಹೋಗುವೆನಾದದರಿಂದ ನನ್ನ ಆಸ್ತಿಯೆಲ್ಲಾ ದಮಸ್ಕದ ಎಲೀಯೆಜರನ ಪಾಲಾಗುವದಲ್ಲಾ ಅಂದನು.


ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದರೆಜರನನ್ನು ರಕ್ಷಿಸಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.


ದಾವೀದನು ಚೋಬದವರನ್ನು ಸಂಹರಿಸಿದಾಗ ಇವನು ಚೋಬದ ಅರಸನೂ ತನ್ನ ಒಡೆಯನೂ ಆದ ಹದದೆಜೆರನನ್ನು ಬಿಟ್ಟು ಓಡಿಹೋಗಿ ಕೆಲವು ಮಂದಿಯನ್ನು ಕೂಡಿಸಿಕೊಂಡು ತಾನು ಅವರ ನಾಯಕನಾಗಿ ಅವರೊಡನೆ ದಮಸ್ಕಕ್ಕೆ ಬಂದು ಅಲ್ಲಿ ಅರಸನಾದನು.


ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ನಿಶ್ಶೇಷವಾಗಿ ಸುಟ್ಟುಬಿಡಬೇಕು. ಅದು ತಿರಿಗಿ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು.


ಆ ಮಗುವು ಕೆಟ್ಟದ್ದು ಬೇಡ, ಒಳ್ಳೇದು ಬೇಕು ಅನ್ನುವಷ್ಟು ಬಲ್ಲವನಾಗುವದರೊಳಗೆ, ಯಾವ ಇಬ್ಬರು ರಾಜರಿಗೆ ನೀನು ಹೆದರಿ ನಡುಗುತ್ತೀಯೋ ಅವರ ದೇಶವು ನಿರ್ಜನವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು