Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:10 - ಕನ್ನಡ ಸತ್ಯವೇದವು J.V. (BSI)

10 ಏಕಂದರೆ ನೀನು ನಿನ್ನ ರಕ್ಷಕನಾದ ದೇವರನ್ನು ಮರೆತುಬಿಟ್ಟು ನಿನ್ನ ಆಶ್ರಯಗಿರಿಯನ್ನು ಸ್ಮರಿಸಲಿಲ್ಲ; ಹೀಗಿರಲು ನೀನು ಇಷ್ಟವಾದ ಗಿಡಗಳನ್ನು ನೆಟ್ಟು ನಿನ್ನ ದೇಶದಲ್ಲಿ ದೇಶಾಂತರದ ಸಸಿಗಳನ್ನು ಹಾಕಿದ್ದಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಏಕೆಂದರೆ ನೀನು ನಿನ್ನ ರಕ್ಷಕನಾದ ದೇವರನ್ನು ಮರೆತುಬಿಟ್ಟು, ನಿನ್ನ ಆಶ್ರಯಗಿರಿಯನ್ನು ಸ್ಮರಿಸಲಿಲ್ಲ. ಹೀಗಿರಲು ನೀನು ಇಷ್ಟವಾದ ದ್ರಾಕ್ಷಿಯ ಗಿಡಗಳನ್ನು ನೆಟ್ಟು, ನಿನ್ನ ದೇಶದಲ್ಲಿ ದೇಶಾಂತರದ ಸಸಿಗಳನ್ನು ನೆಟಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇಸ್ರಯೇಲೇ, ನಿನ್ನ ಉದ್ಧಾರಕನಾದ ದೇವರನ್ನು ನೀನು ಸ್ಮರಿಸಲಿಲ್ಲ. ನಿನಗೆ ಆಶ್ರಯವಿತ್ತ ಪೊರೆಬಂಡೆಯನ್ನು ಮರೆತುಹೋದೆ. ಬದಲಿಗೆ ಅನ್ಯದೇವರ ಆರಾಧನೆಗಾಗಿ ನಿನಗಿಷ್ಟವಾದ ಉದ್ಯಾನವನಗಳನ್ನು ನೆಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀವು ನಿಮ್ಮ ರಕ್ಷಕನಾದ ದೇವರನ್ನು ಮರೆತುಬಿಟ್ಟಿದ್ದರಿಂದ ನಿಮಗೆ ಹೀಗೆ ಆಗುವದು. ದೇವರು ನಿಮ್ಮ ಆಶ್ರಯದುರ್ಗವಾಗಿದ್ದಾನೆಂಬುದನ್ನು ನೀವು ನೆನಪು ಮಾಡಿಕೊಳ್ಳಲಿಲ್ಲ. ದೂರದ ಪ್ರಾಂತ್ಯದಿಂದ ನೀವು ಉತ್ತಮ ತಳಿಯ ದ್ರಾಕ್ಷಿಯನ್ನು ತಂದಿರಿ. ಅದನ್ನು ನೀವು ನೆಟ್ಟರೂ ಅವು ಚಿಗುರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು, ನಿನ್ನ ಬಂಡೆಯೂ, ಕೋಟೆಯೂ ಆಗಿರುವವರನ್ನು ಮರೆತು ಬಿಟ್ಟಿದ್ದೀ. ನೀನು ರಮ್ಯವಾದ ಗಿಡಗಳನ್ನು ಮತ್ತು ದೇಶಾಂತರದ ದ್ರಾಕ್ಷಿಯ ಸಸಿಗಳನ್ನು ಹಾಕಿದ್ದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:10
48 ತಿಳಿವುಗಳ ಹೋಲಿಕೆ  

ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.


ಯೆಹೋವನಲ್ಲಿ ಸದಾ ಭರವಸವಿಡಿರಿ; ಯಾಹುಯೆಹೋವನು ಶಾಶ್ವತವಾಗಿ ಆಶ್ರಯಗಿರಿಯಾಗಿದ್ದಾನೆ.


[ಇಸ್ರಾಯೇಲ್ಯರೇ,] ನಿಮ್ಮನ್ನು ಹುಟ್ಟಿಸಿದ ತಂದೆಯಂತಿರುವ ಶರಣನನ್ನು ನೀವು ನೆನಸಲಿಲ್ಲ; ಹೆತ್ತ ತಾಯಿಯಂತಿರುವ ದೇವರನ್ನು ಮರೆತುಬಿಟ್ಟಿರಿ.


ಐಗುಪ್ತದಲ್ಲಿ ಮಹತ್ತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡಿಸುವದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಯಥಾರ್ಥನೂ ಆಗಿದ್ದಾನೆ.


ಇಸ್ರಾಯೇಲು ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಆ ಸೌಧಗಳನ್ನು ನುಂಗಿಬಿಡುವದು.


ಯೆಹೋವನೇ, ಇಸ್ರಾಯೇಲ್ಯರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು; ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ದೂಳಿನಲ್ಲಿ ಬರೆಯಲ್ಪಡುವದು.


ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ; ಯೆಹೋವನ ರೋಷಾಗ್ನಿಯ ನಿವಿುತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವದು.


ಆಕಾಶಮಂಡಲವನ್ನು ಹರಡಿ ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟಿಯಾ? ನಾಶಮಾಡಬೇಕೆಂದು [ಬಾಣವನ್ನು] ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಜುತ್ತೀಯಾ? ಆ ಹಿಂಸಕನ ಕ್ರೋಧವು ಎಲ್ಲಿ ತಾನೇ ಇದೆ?


ಇಗೋ ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸಪಡುವೆನು; ನನ್ನ ಬಲವೂ ಕೀರ್ತನೆಯೂ ಯಾಹುಯೆಹೋವನಷ್ಟೆ, ಆತನೇ ನನಗೆ ರಕ್ಷಕನಾದನು ಎಂಬದೇ.


ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು ಆತನ ಸಂಕಲ್ಪವನ್ನು ಕಾದಿರದೆ


ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು.


ನಮ್ಮ ಶರಣನಿಗೆ ತಮ್ಮ ಶರಣರು ಸಮಾನರಲ್ಲವೆಂದು ನಮ್ಮ ಶತ್ರುಗಳೇ ತೀರ್ಮಾನಿಸುತ್ತಾರಲ್ಲಾ.


ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು.


ನಮ್ಮ ಸಹಾಯಕನಾಗಿರುವ ದೇವರೇ, ನಮ್ಮನ್ನು ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ಬಿಡಿಸಿ ಕೂಡಿಸು; ಆಗ ನಿನ್ನ ಪರಿಶುದ್ಧನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು ಅನ್ನಿರಿ.


ಆದರೆ ಯೆಶುರೂನು ಚೆನ್ನಾಗಿ ತಿಂದು ಕೊಬ್ಬಿ ಅಗಡಾಗಿ ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿತು.


ನೀವು ಮದುವೆಮಾಡಿಕೊಂಡ ಸ್ತ್ರೀಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿಕೊಂಡ ದ್ರಾಕ್ಷೇತೋಟದ ಬೆಳೆಯು ನಿಮಗೆ ದೊರೆಯುವದಿಲ್ಲ.


ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.


ಒಂದು ವೇಳೆ ನೀವು ಮದಿಸಿ ನಿಮ್ಮ ದೇವರಾದ ಯೆಹೋವನನ್ನು ಮರೆತೀರಿ.


ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞಾವಿಧಿನಿರ್ಣಯಗಳನ್ನು ಕೈಕೊಳ್ಳದವರೂ ಆತನನ್ನು ಮರೆಯುವವರೂ ಆಗಬೇಡಿರಿ, ನೋಡಿರಿ.


ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆಯಬಾರದು, ನೋಡಿರಿ.


ನೀವು ದುಡಿದದ್ದೆಲ್ಲಾ ವ್ಯರ್ಥವಾಗುವದು; ನಿಮ್ಮ ಭೂವಿುಯಲ್ಲಿ ಬೆಳೆಯಾಗುವದಿಲ್ಲ, ತೋಟಗಳ ಮರಗಳು ಫಲಿಸುವದಿಲ್ಲ.


ನಾನು ನಿಮಗೆ ಮಾಡುವದೇನಂದರೆ - ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜ ಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.


ಅವರ ಆಸ್ತಿಯು ಸೂರೆಯಾಗುವದು, ಅವರ ಮನೆಗಳು ಹಾಳಾಗುವವು; ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಿಸರು, ತೋಟಗಳನ್ನು ಮಾಡಿಕೊಂಡರೂ ಅವುಗಳ ದ್ರಾಕ್ಷಾರಸವನ್ನು ಕುಡಿಯರು.


ನಾನು ಯೆಹೋವನಲ್ಲಿ ಉಲ್ಲಾಸಿಸುವೆನು, ನನ್ನ ರಕ್ಷಕನಾದ ದೇವರಲ್ಲಿ ಆನಂದಿಸುವೆನು.


ನೀವು ಬಡವರನ್ನು ತುಳಿದು ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ ವಾಸಿಸದೆ ಇರುವಿರಿ, ಮಾಡಿಕೊಂಡ ಒಳ್ಳೊಳ್ಳೆಯ ತೋಟಗಳ ದ್ರಾಕ್ಷಾರಸವನ್ನು ಕುಡಿಯರಿ.


ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟದರಿಂದ ಇನ್ನು ನನಗೆ ಯಾಜಕ ಸೇವೆಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು; ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ ನಾನು ನಿಮ್ಮ ಸಂತತಿಯವರನ್ನು ಮರೆಯುವೆನು.


ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡಿಸಿ ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂವಿುಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ.


ಕಿವಿಗೊಟ್ಟು ಕೇಳಿ ಬೇಗ ನನ್ನನ್ನು ಬಿಡಿಸು; ನನ್ನನ್ನು ರಕ್ಷಿಸುವ ಆಶ್ರಯಗಿರಿಯೂ ದುರ್ಗಸ್ಥಾನವೂ ಆಗಿರು.


ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕನೂ ನನ್ನ ದೇವರೂ ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ದುರ್ಗವೂ ಆಗಿದ್ದಾನೆ.


ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.


ಆ ದಿನದಲ್ಲಿ ದೇಶದ ಬಲವಾದ ಕೋಟೆಗಳು [ಪೂರ್ವದಲ್ಲಿ] ಇಸ್ರಾಯೇಲ್ಯರ ಭಯದಿಂದ ನಿರ್ಜನವಾಗಿದ್ದ ಈಗ ಅಡವಿಯಲ್ಲಿಯೂ ಬೆಟ್ಟಗಳ ತುದಿಯ ಮೇಲೂ ಕಾಣುವ ಪಾಳು ನಿವೇಶನಗಳಂತಿರುವವು; ಅಂತು ದೇಶವೆಲ್ಲಾ ಹಾಳಾಗಿರುವದು;


ಕೊಯ್ಲಿನ ಕಾಲಕ್ಕೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಿಂದಾದ ಹೀಚು ದೋರೆಗಾಯಿಯಾಗುತ್ತಿರುವಾಗ ಆತನು ಕುಡುಗೋಲುಗಳಿಂದ ಕುಡಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕುವನು.


ನೀನು ದೀನರಿಗೆ ಕೋಟೆ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣದುರ್ಗ, ಬಿಸಿಲಿಗೆ ನೆರಳು, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.


ನೀವೋ ಹಬ್ಬದ ಸೌರಣೆಯ ರಾತ್ರಿಯಲ್ಲೋ ಎಂಬಂತೆ ಹಾಡುವಿರಿ; ಇಸ್ರಾಯೇಲ್ಯರ ಶರಣನ ಸಾನ್ನಿಧ್ಯವನ್ನು ಬಯಸಿ ಯೆಹೋವನ ಪರ್ವತಕ್ಕೆ ಪಿಳ್ಳಂಗೋವಿಯ ನಾದದೊಡನೆ ಹೋಗುವವನಂತೆ ಹೃದಯಾನಂದಪಡುವಿರಿ.


ಯೆಹೋವನೇ, ನಮ್ಮನ್ನು ಕರುಣಿಸು! ನಿನ್ನನ್ನು ಕಾದುಕೊಂಡಿದ್ದೇವೆ; ಪ್ರತಿ ಮುಂಜಾನೆಯೂ ನಮಗೆ ಭುಜಬಲವಾಗಿಯೂ ಇಕ್ಕಟ್ಟಿನಲ್ಲಿ ನಮಗೆ ರಕ್ಷಣೆಯಾಗಿಯೂ ಇರು.


ಹೆದರಬೇಡಿರಿ, ಅಂಜದಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವದು; ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನಲ್ಲಾ.


ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನೊಂದಿಗಿದೆ, ಆತನು ಅನುಗ್ರಹಿಸುವ ಪ್ರತಿಫಲವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ ಎಂಬದಾಗಿ ಯೆಹೋವನು ಭೂವಿುಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.


ಆಹಾ, ಬೋಳುಗುಡ್ಡಗಳಲ್ಲಿ ಒಂದು ಶಬ್ದ! ತಾವು ಡೊಂಕುದಾರಿಯನ್ನು ಹಿಡಿದು ತಮ್ಮ ದೇವರಾದ ಯೆಹೋವನನ್ನು ಮರೆತು ಬಿಟ್ಟಿದ್ದೇವೆಂದು ಇಸ್ರಾಯೇಲ್ಯರು ಕಣ್ಣೀರು ಸುರಿಸಿ ದೇವರ ಕೃಪೆಯನ್ನು ಬೇಡುತ್ತಿದ್ದಾರಲ್ಲಾ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ನನ್ನನ್ನು ಬೆನ್ನ ಹಿಂದಕ್ಕೆ ಎಸೆದು ಮರೆತುಬಿಟ್ಟದ್ದರಿಂದ ನಿನ್ನ ಪುಂಡಾಟದ ಮತ್ತು ಸೂಳೆತನದ ಫಲವನ್ನು ನೀನೂ ಅನುಭವಿಸಬೇಕು.


ಬೀಜಗಳು ಹೆಂಟೆಗಳ ಕೆಳಗೆ ಒಣಗುತ್ತವೆ; ಹಗೇವುಗಳು ಬರಿದಾಗಿವೆ, ಕಣಜಗಳು ಬಿದ್ದುಹೋಗಿವೆ; ಧಾನ್ಯಕ್ಕೆ ಸಂಕೋಚವಾಯಿತಷ್ಟೆ.


ನಿನ್ನವರು ರಕ್ತಸುರಿಸುವದಕ್ಕೆ ಲಂಚತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ ದೋಚಿಕೊಂಡು ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು