ಯೆಶಾಯ 17:3 - ಕನ್ನಡ ಸತ್ಯವೇದವು J.V. (BSI)3 ಎಫ್ರಾಯೀವಿುಗೆ ರಕ್ಷಣೆಯಾಗಿರುವ ಕೋಟೆಯೂ ದಮಸ್ಕವು ನಡಿಸುವ ರಾಜ್ಯಾಧಿಕಾರವೂ ಇಲ್ಲವಾಗುವವು; ಅರಾಮ್ಯರಲ್ಲಿ ಉಳಿದವರಿಗೆ ಇಸ್ರಾಯೇಲ್ಯರ ಮಹಿಮೆಯ ಗತಿಯಾಗುವದು ಎಂಬದು ಸೇನಾಧೀಶ್ವರನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಎಫ್ರಾಯೀಮಿಗೆ ರಕ್ಷಣೆಯಾಗಿರುವ ಕೋಟೆಯೂ, ದಮಸ್ಕವು ನಡೆಸುವ ರಾಜ್ಯಾಧಿಕಾರವೂ ಇಲ್ಲವಾಗುವವು. ಅರಾಮ್ಯರಲ್ಲಿ ಉಳಿದವರು ಇಸ್ರಾಯೇಲರ ಮಕ್ಕಳ ವೈಭವದಂತೆ ಇರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಎಫ್ರಯಿಮಿಗೆ ಕೋಟೆಕೊತ್ತಲಗಳು, ದಮಸ್ಕಸ್ಸಿಗೆ ರಾಜ್ಯಾಡಳಿತವು ಇಲ್ಲದಂತಾಗುವುವು. ಸಿರಿಯದಲ್ಲಿ ಅಳಿದುಳಿದವರು ಅಪಮಾನಕ್ಕೀಡಾಗುವರು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಕೋಟೆಗೋಡೆಯುಳ್ಳ ಎಫ್ರಾಯೀಮನ ಪಟ್ಟಣಗಳು ನಾಶವಾಗುವವು. ದಮಸ್ಕದಲ್ಲಿರುವ ಸರ್ಕಾರವು ಕೊನೆಗೊಳ್ಳುವದು. ಇಸ್ರೇಲರಿಗೆ ಆದಂತೆಯೇ ಅರಾಮ್ಯರಿಗೂ ಆಗುವದು. ಪ್ರಮುಖ ನಗರವಾಸಿಗಳು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು” ಇದು ಸರ್ವಶಕ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಎಫ್ರಾಯೀಮಿನಿಂದ ಕೋಟೆಯೂ, ದಮಸ್ಕದ ರಾಜ್ಯಾಧಿಕಾರವೂ, ಅರಾಮ್ಯರಲ್ಲಿ ಉಳಿದವುಗಳೂ ಸಹ ಇಲ್ಲವಾಗಿ ಹೋಗುವುವು. ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರುವರು ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |