ಯೆಶಾಯ 17:5 - ಕನ್ನಡ ಸತ್ಯವೇದವು J.V. (BSI)5 ಹೊಲಕೊಯ್ಯುವವನು ದಂಟುಗಳನ್ನು ಒಟ್ಟುಗೂಡಿಸಿ ಕೈಯಿಂದ ತೆನೆಗಳನ್ನು ಕತ್ತರಿಸುವ ಹಾಗಿರುವದು; ಹೌದು, ರೆಫಾಯೀಮ್ ತಗ್ಗಿನಲ್ಲಿ ಹಕ್ಕಲನ್ನು ಆರಿಸುವಂತಿರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹೊಲದಲ್ಲಿ ಬೆಳೆ ಕೊಯ್ಯುವವನು ಪೈರುಗಳನ್ನು ಒಟ್ಟುಗೂಡಿಸಿ ಕೈಯಿಂದ ತೆನೆಗಳನ್ನು ಕತ್ತರಿಸುವ ಹಾಗಿರುವುದು. ಹೌದು, ರೆಫಾಯೀಮ್ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅದು ಕೊಯ್ದ ಹೊಲದಂತಿರುವುದು, ತೆನೆಕತ್ತರಿಸಿದ ಹುಲ್ಲಿನಂತಿರುವುದು. ಕೂಳೆಯನ್ನೂ ಬಿಡದೆ ಆಯ್ದುಕೊಂಡ ರೆಫಾಯಿಮ್ ಕಣಿವೆಯಂತೆ ಇರುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಆ ಸಮಯದಲ್ಲಿ ರೆಫಾಯೀಮ್ ಕಣಿವೆಯಲ್ಲಿ ಧಾನ್ಯದ ಸುಗ್ಗಿಯಂತಿರುವದು. ಕೆಲಸಗಾರರು ಹೊಲಗಳಲ್ಲಿ ಬೆಳೆಯನ್ನು ಕೊಯ್ದು ಧಾನ್ಯವನ್ನು ಶೇಖರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ, ರೆಫಾಯಿಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವುದು. ಅಧ್ಯಾಯವನ್ನು ನೋಡಿ |