Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:9 - ಕನ್ನಡ ಸತ್ಯವೇದವು J.V. (BSI)

9 ಆ ದಿನದಲ್ಲಿ ದೇಶದ ಬಲವಾದ ಕೋಟೆಗಳು [ಪೂರ್ವದಲ್ಲಿ] ಇಸ್ರಾಯೇಲ್ಯರ ಭಯದಿಂದ ನಿರ್ಜನವಾಗಿದ್ದ ಈಗ ಅಡವಿಯಲ್ಲಿಯೂ ಬೆಟ್ಟಗಳ ತುದಿಯ ಮೇಲೂ ಕಾಣುವ ಪಾಳು ನಿವೇಶನಗಳಂತಿರುವವು; ಅಂತು ದೇಶವೆಲ್ಲಾ ಹಾಳಾಗಿರುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ದಿನದಲ್ಲಿ ದೇಶದ ಬಲವಾದ ಕೋಟೆಗಳು ಪೂರ್ವದಲ್ಲಿ ಇಸ್ರಾಯೇಲರ ಭಯದಿಂದ ನಿರ್ಜನವಾಗಿದ್ದ, ಅದು ಅಡವಿಯಲ್ಲಿಯೂ, ಬೆಟ್ಟಗಳ ತುದಿಯ ಮೇಲೂ ಕಾಣುವ ಹಾಳು ನಿವೇಶನಗಳಂತಿರುವವು, ಅಂತೂ ದೇಶವೆಲ್ಲಾ ಹಾಳಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆ ದಿನದಂದು ನಾಡಿನ ಸುಭದ್ರವಾದ ನಗರಗಳು ನಿರ್ಜನ ಪ್ರದೇಶಗಳಾಗುವುವು. ಇಸ್ರಯೇಲರಿಗೆ ಹೆದರಿ ಅಮೋರ್ಯರು ಮತ್ತು ಹಿವ್ವಿಯರು ಬಿಟ್ಟುಹೋದ ಹಾಳು ನಿವೇಶನಗಳಂತಾಗುವುವು, ನಾಡೆಲ್ಲ ಹಾಳುಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಸಮಯದಲ್ಲಿ ಕೋಟೆಗೋಡೆಗಳಿರುವ ಎಲ್ಲಾ ಪಟ್ಟಣಗಳು ನಿರ್ಜನವಾಗುವದು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳುವ ಕಾಲದಲ್ಲಿ ಹೇಗೆ ಅಡವಿಗಳಂತೆಯೂ ಬೆಟ್ಟಗಳಂತೆಯೂ ಇದ್ದವೋ ಅದೇ ರೀತಿಯಲ್ಲಿ ಇರುವವು. ಆ ಸಮಯದಲ್ಲಿ ಇಸ್ರೇಲರು ದೇಶದೊಳಗೆ ಪ್ರವೇಶಿಸುವಾಗ ಅಲ್ಲಿಯ ನಿವಾಸಿಗಳೆಲ್ಲರೂ ಓಡಿಹೋದರು. ಮುಂಬರುವ ದಿವಸಗಳಲ್ಲಿ ದೇಶವು ಮತ್ತೆ ನಿರ್ಜನವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆ ದಿನದಲ್ಲಿ ಅವರು ಇಸ್ರಾಯೇಲರ ನಿಮಿತ್ತವಾಗಿ ಬಲವಾದ ಪಟ್ಟಣಗಳು ದಟ್ಟಡವಿಯ ಹಾಗಿದ್ದು ಹಾಳುಬೀಳುವುದು. ಅಂತು ದೇಶವೆಲ್ಲಾ ಹಾಳಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:9
16 ತಿಳಿವುಗಳ ಹೋಲಿಕೆ  

ಕೋಟೆಕೊತ್ತಲದ ಪಟ್ಟಣವು ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯನಿವಾಸಸ್ಥಾನವಾಗಿದೆ; ಅಲ್ಲಿ ಕರು ಮೇದು ಮಲಗುವದು, ಅಲ್ಲಿನ ಚಿಗುರುಗಳನ್ನು ತಿಂದುಬಿಡುವದು.


ಆದರೆ [ಅಷ್ಟರೊಳಗೆ] ಈ ದೇಶವು ತನ್ನ ನಿವಾಸಿಗಳ ನಿವಿುತ್ತ, ಅವರ ದುಷ್ಕೃತ್ಯಗಳಿಗೆ ಫಲವಾಗಿ ಹಾಳುಬಿದ್ದಿರುವದು.


ಒಮ್ರಿಯ ನಿಯಮಗಳೂ ಅಹಾಬನ ಮನೆತನದ ಸಕಲಾಚಾರಗಳೂ [ನಿನ್ನಲ್ಲಿ] ಸಲ್ಲುತ್ತಿವೆ, ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ; ಆದಕಾರಣ ನಾನು ನಿನ್ನನ್ನು ಬೆರಗಿಗೂ ನನ್ನ ನಿವಾಸಿಗಳನ್ನು ಸಿಳ್ಳಿಗೂ ಗುರಿಮಾಡುವೆನು; ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.


ನಿನ್ನ ದೇಶದ ಪಟ್ಟಣಗಳನ್ನು ಹಾಳುಮಾಡಿ ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು;


ಇಸಾಕನ ವಂಶದವರ ಪೂಜಾಸ್ಥಳಗಳು ಹಾಳಾಗುವವು, ಇಸ್ರಾಯೇಲಿನ ಪವಿತ್ರಾಲಯಗಳು ಬೀಡುಬೀಳುವವು; ನಾನು ಕತ್ತಿಹಿರಿದು ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು ಅಂದನು.


ಹೀಗಿರಲು ನಿಮ್ಮ ಕುಲಗಳವರಿಗೆ ವಿರುದ್ಧವಾಗಿ ಯುದ್ಧಘೋಷವು ಏಳುವದು; ಕಾಳಗದ ದಿನದಲ್ಲಿ ಶಲ್ಮಾನನು ತಾಯಿಗಳನ್ನು ಮಕ್ಕಳ ಸಹಿತ ಬಂಡೆಗೆ ಅಪ್ಪಳಿಸಿ ಬೇತ್ಅರ್ಬೇಲ್ ಪಟ್ಟಣವನ್ನು ಸೂರೆಮಾಡಿದಂತೆ ನಿಮ್ಮ ಎಲ್ಲಾ ಕೋಟೆಗಳು ಸೂರೆಮಾಡಲ್ಪಡುವವು.


ತಮ್ಮ ಸೃಷ್ಟಿಕರ್ತನನ್ನೇ ಲಕ್ಷಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯ ಕಡೆಗೇ ಕಣ್ಣಿಡುವರು.


ಏಕಂದರೆ ನೀನು ನಿನ್ನ ರಕ್ಷಕನಾದ ದೇವರನ್ನು ಮರೆತುಬಿಟ್ಟು ನಿನ್ನ ಆಶ್ರಯಗಿರಿಯನ್ನು ಸ್ಮರಿಸಲಿಲ್ಲ; ಹೀಗಿರಲು ನೀನು ಇಷ್ಟವಾದ ಗಿಡಗಳನ್ನು ನೆಟ್ಟು ನಿನ್ನ ದೇಶದಲ್ಲಿ ದೇಶಾಂತರದ ಸಸಿಗಳನ್ನು ಹಾಕಿದ್ದಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು