ಯೆಶಾಯ 18:6 - ಕನ್ನಡ ಸತ್ಯವೇದವು J.V. (BSI)6 ಕಡಿಯಲ್ಪಟ್ಟವರ ಶವಗಳೆಲ್ಲಾ ಬೆಟ್ಟದ ಹದ್ದುಗಳಿಗೂ ಕಾಡುಮೃಗಗಳಿಗೂ ಪಾಲಾಗಿ ಬಿದ್ದಿರುವವು, ಬೇಸಿಗೆಯಲ್ಲಿ ಹದ್ದುಗಳಿಗೂ ಹಿಮಗಾಲದಲ್ಲಿ ಕಾಡುಮೃಗಗಳಿಗೂ ಜೀವನವಾಗುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವೆಲ್ಲವು ಬೆಟ್ಟದ ಪಕ್ಷಿಗಳಿಗೂ, ಭೂಮಿಯ ಕಾಡುಮೃಗಗಳಿಗೂ ಆಹಾರವಾಗಿ ಬಿದ್ದಿರುವವು. ಬೇಸಿಗೆಯಲ್ಲಿ ಪಕ್ಷಿಗಳಿಗೂ, ಹಿಮಕಾಲದಲ್ಲಿ ಕಾಡುಮೃಗಗಳಿಗೂ ಆಹಾರವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಹೀಗೆ ಕಡಿಯಲ್ಪಟ್ಟವರ ಶವಗಳೆಲ್ಲ ರಣಹದ್ದುಗಳ ಮತ್ತು ಕಾಡುಮೃಗಗಳ ಪಾಲಾಗುವುವು; ಪಕ್ಷಿಗಳಿಗೆ ಬೇಸಿಗೆಯ ಆಹಾರವಾಗುವುವು, ಪ್ರಾಣಿಗಳಿಗೆ ಚಳಿಗಾಲದ ಉಣಿಸಾಗುವುವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅವುಗಳನ್ನು ಅಡವಿಯ ಪ್ರಾಣಿಗಳಿಗೂ ಬೆಟ್ಟದಹಕ್ಕಿಗಳಿಗೂ ತಿನ್ನಲು ಬಿಡುವರು. ಪಕ್ಷಿಗಳು ಬೇಸಿಗೆಕಾಲದಲ್ಲಿ ದ್ರಾಕ್ಷಾಲತೆಗಳ ಮೇಲೆ ವಾಸಿಸುತ್ತವೆ; ಚಳಿಗಾಲದಲ್ಲಿ ಕಾಡುಪ್ರಾಣಿಗಳು ದ್ರಾಕ್ಷಾಲತೆಗಳನ್ನು ತಿನ್ನುತ್ತವೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವುಗಳೆಲ್ಲ ಬೆಟ್ಟದ ಹದ್ದುಗಳಿಗೂ, ಭೂಮಿಯ ಮೃಗಗಳಿಗೂ ಆಹಾರವಾಗುವುವು. ಅದು ಪಕ್ಷಿಗಳಿಗೆ ಬೇಸಿಗೆ ಕಾಲದಲ್ಲಿಯೂ, ಕಾಡುಮೃಗಗಳಿಗೆ ಚಳಿಗಾಲದಲ್ಲಿಯೂ ಆಹಾರವಾಗುವುದು. ಅಧ್ಯಾಯವನ್ನು ನೋಡಿ |