Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:18 - ಕನ್ನಡ ಸತ್ಯವೇದವು J.V. (BSI)

18 ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನ ಭಕ್ತರೆಂದು ಪ್ರಮಾಣಮಾಡಿ ಕಾನಾನಿನ ಭಾಷೆಯನ್ನಾಡುವವರಿಂದ ತುಂಬಿದ ಐದು ಪಟ್ಟಣಗಳು ಐಗುಪ್ತದೇಶದಲ್ಲಿರುವವು; ಇವುಗಳಲ್ಲಿ ಒಂದರ ಹೆಸರು ನಾಶಪುರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ದಿನದಲ್ಲಿ, ಸೇನಾಧೀಶ್ವರನಾದ ಯೆಹೋವನ ಭಕ್ತರೆಂದು ಪ್ರಮಾಣಮಾಡಿ, ಕಾನಾನಿನ ಭಾಷೆಯನ್ನು ಆಡುವವರಿಂದ ತುಂಬಿದ ಐದು ಪಟ್ಟಣಗಳು ಐಗುಪ್ತ ದೇಶದಲ್ಲಿರುವವು. ಇವುಗಳಲ್ಲಿ ಒಂದರ ಹೆಸರು “ನಾಶಪುರ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆ ದಿನದಂದು ಈಜಿಪ್ಟಿನ ನಾಡಿನಲ್ಲಿ ಐದು ಪಟ್ಟಣಗಳಲ್ಲಿ ಕಾನಾನಿನ (ಹಿಬ್ರು) ಭಾಷೆಯನ್ನಾಡುವ ಜನರು ತುಂಬಿರುವರು. ಅವರು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಶರಣರೆಂದು ಪ್ರಮಾಣ ಮಾಡುವರು. ಆ ಪಟ್ಟಣಗಳಲ್ಲಿ ಒಂದಕ್ಕೆ “ರವಿಪುರ” ಎಂಬ ಹೆಸರಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ಸಮಯದಲ್ಲಿ ಈಜಿಪ್ಟಿನಲ್ಲಿ ಕಾನಾನ್ ದೇಶದ (ಯೆಹೂದ್ಯರ) ಭಾಷೆಯನ್ನಾಡುವ ಐದು ಪಟ್ಟಣಗಳಿರುವವು. ಅದರಲ್ಲಿ ಒಂದರ ಹೆಸರು “ನಾಶನದ ನಗರ.” ಆ ಜನರು ಸರ್ವಶಕ್ತನಾದ ಯೆಹೋವನನ್ನು ಹಿಂಬಾಲಿಸಲು ತೀರ್ಮಾನಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆ ದಿವಸದಲ್ಲಿ ಈಜಿಪ್ಟಿನ ಐದು ಪಟ್ಟಣಗಳು ಸೇನಾಧೀಶ್ವರ ಯೆಹೋವ ದೇವರಿಗೆ ಆಣೆಯಿಟ್ಟುಕೊಳ್ಳುವವು. ಕಾನಾನಿನ ಭಾಷೆಯನ್ನಾಡುವವರಿಂದ ತುಂಬಿದ ಐದು ಪಟ್ಟಣಗಳು ಈಜಿಪ್ಟ್ ದೇಶದಲ್ಲಿರುವುವು. ಅವುಗಳಲ್ಲಿ ಒಂದರ ಹೆಸರು “ನಾಶಪುರ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:18
15 ತಿಳಿವುಗಳ ಹೋಲಿಕೆ  

ಆಗ ಎಲ್ಲರು ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ ಜನಾಂಗಗಳವರ ತುಟಿಗಳನ್ನು ಮಾರ್ಪಡಿಸಿ ಶುದ್ಧಿಮಾಡುವೆನು.


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವವು; ನಾನು ನಿನ್ನ ಮಧ್ಯದಲ್ಲಿ ವಾಸಿಸುವೆನು; ಆಗ ಸೇನಾಧೀಶ್ವರ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬದು ನಿನಗೆ ಗೊತ್ತಾಗುವದು.


ಮತ್ತು ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು; ಹೌದು, ಯಜ್ಞನೈವೇದ್ಯಗಳ ಸೇವೆಯನ್ನಾಚರಿಸಿ ಯೆಹೋವನಿಗೆ ಹರಕೆಮಾಡಿಕೊಂಡು ಅದನ್ನು ನೆರವೇರಿಸುವರು.


ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ ಈಗ ನನ್ನ ಹೆಸರನ್ನೆತ್ತಿ ಯೆಹೋವನ ಜೀವದಾಣೆ ಎಂದು ಪ್ರಮಾಣ ಮಾಡುವ ನನ್ನ ಜನರ ಅಭ್ಯಾಸವನ್ನು ಚೆನ್ನಾಗಿ ಮಾಡಿಕೊಂಡರೆ ನನ್ನ ಜನರ ಮಧ್ಯದಲ್ಲಿ ನೆಲೆಗೊಂಡು ವೃದ್ಧಿಯಾಗುವರು.


ಆ ದಿನದಲ್ಲಿ ಕರ್ತನು ತನ್ನ ಜನಶೇಷವನ್ನು ಬಿಡಿಸಿಕೊಳ್ಳುವದಕ್ಕೆ ಎರಡನೆಯ ಸಾರಿ ಕೈಹಾಕಿ ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್, ಸಮುದ್ರದ ಕರಾವಳಿ, ಈ ಸ್ಥಳಗಳಲ್ಲಿ ಉಳಿದವರನ್ನು ಬರಮಾಡಿಕೊಳ್ಳುವನು.


ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ ಐಗುಪ್ತ ಸೀಮೆಯಲ್ಲಿನ ದೇಶಭ್ರಷ್ಟರಾದವರೂ ಬಂದು ಪರಿಶುದ್ಧಪರ್ವತದ ಯೆರೂಸಲೇವಿುನಲ್ಲಿ ಯೆಹೋವನ ಮುಂದೆ ಅಡ್ಡಬೀಳುವರು.


ಆ ದಿನದಲ್ಲಿ ಐಗುಪ್ತದೇಶದ ಮಧ್ಯೆ ಯೆಹೋವನಿಗೆ ಒಂದು ಯಜ್ಞಪೀಠವೂ ದೇಶದ ಎಲ್ಲೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವವು.


ಸಾಮಾನ್ಯರ ಗರ್ವದೃಷ್ಟಿಯು ತಗ್ಗಿಹೋಗುವದು, ಮುಖಂಡರ ಅಹಂಕಾರವು ಕುಗ್ಗಿಹೋಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು ಆತನ ಹೆಸರಿನ ಮೇಲೆಯೇ ಪ್ರಮಾಣ ಮಾಡಬೇಕು.


ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು; ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರ ಪಡುವವು.


ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯುವದಾಗಿ ಆಣೆಯಿಟ್ಟು ಪ್ರಮಾಣಮಾಡಿದರು. ಹೇಗಂದರೆ -


ಲೋಕದವರೆಲ್ಲರಿಗೂ ಒಂದೇ ಭಾಷೆ ಇತ್ತು. ಭಾಷಾಭೇದವೇನೂ ಇರಲಿಲ್ಲ.


ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತುಹೋಗಿರುವವಾದದರಿಂದ ಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು; ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಮೇಲೆ ಆಣೆಯಿಡುವನು.


ಯೆಹೋವನು ಯಾಕೋಬ್ಯರನ್ನು ಕನಿಕರಿಸಿ ಮತ್ತೆ ಇಸ್ರಾಯೇಲ್ಯರನ್ನು ಆರಿಸಿಕೊಂಡು ಸ್ವದೇಶದಲ್ಲಿ ತಂಗಿಸಬೇಕೆಂದಿದ್ದಾನಷ್ಟೆ; ಪರದೇಶಿಗಳು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು